• search
 • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಜಿ ಸಂಸದ, ರೈತ ಹೋರಾಟಗಾರ ಜಿ. ಮಾದೇಗೌಡ ನಿಧನ

|
Google Oneindia Kannada News

ಮಂಡ್ಯ, ಜುಲೈ 17: ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಜಿ. ಮಾದೇಗೌಡ ಅವರು ಶನಿವಾರ ನಿಧನರಾಗಿದ್ದಾರೆ.

ಮಂಡ್ಯದ ಮದ್ದೂರಿನ ಕೆ.ಎಂ.ದೊಡ್ಡಿಯಲ್ಲಿನ ಜಿ. ಮಾದೇಗೌಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ದಿನಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಮಾಜಿ ಸಿಎಂ ಕುಮಾರಸ್ವಾಮಿ. ಗೃಹ ಸಚಿವ ಬೊಮ್ಮಾಯಿ, ಸಂಸದೆ ಸುಮಲತಾ ಸೇರಿ ಹಲವು ರಾಜಕೀಯ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ನಿಧನರಾಗಿದ್ದಾರೆ.

ಮಾದೇಗೌಡ ಅವರು ಕಾವೇರಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 1962ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1980-83ರವರೆಗೆ ಗುಂಡೂರಾವ್ ಸಂಪುಟದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾಗಿದ್ದರು. 1989, 1995ರಲ್ಲಿ ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದರು. ಹಲವು ರೈತ ಪರ ಹೋರಾಟಗಳಲ್ಲಿ ಪಾಲ್ಗೊಂಡು ರೈತರ ದನಿಯಾಗಿದ್ದರು.

ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ಎಚ್ಚರಿಕೆಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ಎಚ್ಚರಿಕೆ

ಮುಖ್ಯಮಂತ್ರಿಗಳ ಸಂತಾಪ; ಜಿ.ಮಾದೇಗೌಡರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಗಾಂಧಿವಾದಿಯಾಗಿ, ಗಾಂಧಿ ಅವರ ತತ್ವ ಆದರ್ಶಗಳನ್ನು ಜೀವನುದ್ದಕ್ಕೂ ಪಾಲಿಸಿದ ಮಾದೇಗೌಡರು ಕಾವೇರಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದವರು. ರೈತ ಹೋರಾಟಗಳಲ್ಲಿ ಅವರು ಸಕ್ರಿಯರಾಗಿ ಅಪಾರ ಜನಮನ್ನಣೆ ಗಳಿಸಿದ್ದರು.

   ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಮೇಕ್ ಇನ್ ಇಂಡಿಯಾ ಕಲರವ | Make in India at Olympics | Oneindia Kannada

   ಅವರ ನಿಧನದಿಂದ ರೈತ ಹಾಗೂ ಜನಪರ ಹೋರಾಟಗಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

   ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥ ನಾರಾಯಣ್, ಸಚಿವ ಜಗದೀಶ್ ಶೆಟ್ಟರ್ ಸಂತಾಪ ಸೂಚಿಸಿದ್ದಾರೆ.

   English summary
   Mandya former MP and Cauvery protection committee president G Madegowda passes away
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X