ಮಂಡ್ಯ ಬಸ್ ದುರಂತ: ಸಂತ್ರಸ್ತರ ಕುಟುಂಬಕ್ಕೆ 1.5 ಕೋಟಿ ಬಿಡುಗಡೆಗೆ ಸಿದ್ಧತೆ
ಮಂಡ್ಯ, ನವೆಂಬರ್ 26: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿಕ ಕನಗನಮರಡಿಯಲ್ಲಿ ಶನಿವಾರ ಭೀಕರ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಲು ಒಟ್ಟು 1.5 ಕೋಟಿ ರೂ. ಬಿಡುಗಡೆಗೆ ಸಿದ್ಧತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಬಸ್ ದುರಂತದಲ್ಲಿ ಮಕ್ಕಳು ಸೇರಿದಂತೆ ಒಟ್ಟು 30 ಮಂದಿ ಸಾವಿಗೀಡಾಗಿದ್ದರು. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿತ್ತು.
ಮೃತರ ಕುಟುಂಬಗಳಿಗೆ ಶೀಘ್ರವೇ ಪರಿಹಾರ ಬಿಡುಗಡೆ ಮಾಡಲು ಸಿದ್ಧತೆ ಕೈಗೊಳ್ಳಲಾಗಿದೆ. ಇದಕ್ಕಾಗಿ ಸರ್ಕಾರ 1.50 ಕೋಟಿ ಬಿಡುಗಡೆ ಮಾಡುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಖಾಸಗಿ ಬಸ್ ಮಾತ್ರ ಓಡಾಡುತ್ತಿದ್ದ ಈ ಮಾರ್ಗದಲ್ಲಿ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಲು ಸರ್ಕಾರ ವ್ಯವಸ್ಥೆ ಮಾಡಿದೆ.
ಅಪಘಾತ ಸಂಭವಿಸಿದ ಮಾರ್ಗದಲ್ಲಿ ಜನರ ಓಡಾಟಕ್ಕಾಗಿ ಎರಡು ಕೆಎಸ್ ಆರ್ ಟಿಸಿ ಬಸ್‌ಗಳ ಸಂಚಾರ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಎರಡು ಬಸ್‌ಗಳ ಸೌಕರ್ಯವನ್ನು ಒದಗಿಸಲಿದೆ.
ಬಸ್ ದುರಂತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದ್ದು, ಬಸ್ ಚಾಲಕ ಶಿವಣ್ಣ ವಿರುದ್ಧ ಪೊಲೀಸರು ಐಪಿಸಿ 279, 337, 304(ಎ) ಸೆಕ್ಷನ್‍ಗಳಡಿ ಹಾಗೂ ಭಾರತೀಯ ವಾಹನ ಕಾಯ್ದೆ 187ಕಲಂಗಳಡಿ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.












Click it and Unblock the Notifications