ಮಂಡ್ಯ ಉಪ ಚುನಾವಣೆ : ಜೆಡಿಎಸ್-ಕಾಂಗ್ರೆಸ್‌ ಮುನಿಸು ಬಿಜೆಪಿಗೆ ಸೊಗಸು?

ಮಂಡ್ಯ, ಅಕ್ಟೋಬರ್ 29 : ಮಂಡ್ಯ ಲೋಕಸಭಾ ಉಪ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆದರೆ, ಒಮ್ಮತದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಪರವಾಗಿ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸುತ್ತಿಲ್ಲ.

ಲೋಕಸಭಾ ಉಪ ಚುನಾವಣೆಗೆ 4 ದಿನಗಳು ಬಾಕಿ ಇವೆ. ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವಿನ ಪ್ರತಿಷ್ಠೆ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರಿಗೆ ವರವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ನವೆಬರ್ 3ರಂದು ಮತದಾನ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ವಾರ ಮಂಡ್ಯಕ್ಕೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಿದ್ದರು. ಆದರೆ, ವಾರಗಳು ಕಳೆದರೂ ಕಾಂಗ್ರೆಸ್ ನಾಯಕರು ಪ್ರಚಾರದಲ್ಲಿ ತೊಡಗಿಲ್ಲ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದರು ಕೆಲವು ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುವುದಿಲ್ಲ ಎಂಬ ಸುದ್ದಿ ಹಬ್ಬಿದೆ. ಹೀಗೆ ಚದುರಿದ ಮತಗಳು ಬಿಜೆಪಿಗೆ ಹೋದರೆ ಮಂಡ್ಯ ಕ್ಷೇತ್ರ ಜೆಡಿಎಸ್ ಕೈ ತಪ್ಪುವ ಸಾಧ್ಯತೆ ಇದೆ....

ಸಿದ್ದರಾಮಯ್ಯ ಸಭೆ

ಸಿದ್ದರಾಮಯ್ಯ ಸಭೆ

ಕಳೆದ ವಾರ ಸಿದ್ದರಾಮಯ್ಯ ಅವರು ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರ ಸಭೆ ನಡೆಸಿದ್ದರು. ಎಲ್ಲರೂ ಒಟ್ಟಾಗಿ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದ್ದರು. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಎದುರಾಳಿಗಳಾಗಿದ್ದ ಎರಡೂ ಪಕ್ಷಗಳ ನಾಯಕರು ಪ್ರಚಾರದಲ್ಲಿ ಮುಖಾಮುಖಿಯಾಗಿಲ್ಲ. ಕಾಂಗ್ರೆಸ್ ನಾಯಕರು ಬೀದಿಗಿಳಿದು ಎಲ್.ಆರ್.ಶಿವರಾಮೇಗೌಡ ಪರವಾಗಿ ಪ್ರಚಾರ ನಡೆಸುತ್ತಿಲ್ಲ. ಇದರಿಂದಾಗಿ ಚುನಾವಣೆಯಲ್ಲಿ ಹಿನ್ನಡೆ ಆಗಲಿದೆಯೇ? ಕಾದು ನೋಡಬೇಕು.

ಜೆಡಿಎಸ್ ಭದ್ರಕೋಟೆಗೆ ಲಗ್ಗೆ

ಜೆಡಿಎಸ್ ಭದ್ರಕೋಟೆಗೆ ಲಗ್ಗೆ

ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆ. ಕ್ಷೇತ್ರದ ವ್ಯಾಪ್ತಿಯ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಆದರೆ, ಲಕ್ಷ್ಮೀ ಅಶ್ವಿನ್ ಗೌಡ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ನಿರಾಕರಿಸಿದ್ದು, ಎಲ್.ಆರ್.ಶಿವರಾಮೇಗೌಡ ವಿರುದ್ಧ ಇರುವ ಕಾಂಗ್ರೆಸ್ ನಾಯಕರ ಆಕ್ರೋಶ ಚುನಾವಣೆಯಲ್ಲಿ ಮುಳುವಾಗುವ ಸಾಧ್ಯತೆ ಇದೆ. ಜೆಡಿಎಸ್ ಹುಮ್ಮಸ್ಸಿನಲ್ಲಿ ಪ್ರಚಾರ ನಡೆಸುತ್ತಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದ್ದಾರೆ.

ಬಿಜೆಪಿ ಪ್ರಚಾರ ಬಲು ಜೋರು

ಬಿಜೆಪಿ ಪ್ರಚಾರ ಬಲು ಜೋರು

ಬಿಜೆಪಿ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ ಅವರನ್ನು ಚುನಾವಣೆ ಉಸ್ತುವಾರಿಯಾಗಿ ನೇಮಿಸಿದೆ. ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಗೆಲ್ಲುವ ಹುಮ್ಮಸ್ಸಿನಲ್ಲಿ ಅವರು ಪ್ರಚಾರದಲ್ಲಿ ತೊಡಗಿದ್ದಾರೆ. ಮೈತ್ರಿ ರಾಜಕೀಯವನ್ನು ವ್ಯಂಗ್ಯವಾಡುತ್ತಿದ್ದಾರೆ.

ನಾಗಮಂಗಲದಲ್ಲಿ ಮಾತನಾಡಿದ ಅವರು, 'ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆಯಾಗದ ಬ್ಲಡ್ ಗ್ರೂಪ್‌ಗಳು. ಇವರ ರಕ್ತ ಅವರಿಗೆ, ಅವರ ರಕ್ತ ಇವರಿಗೆ ಕೊಟ್ಟರೆ ಮನುಷ್ಯ ಸಾಯುತ್ತಾನೆ' ಎಂದ ವ್ಯಂಗ್ಯವಾಡಿದ್ದಾರೆ.

ಬಿಜೆಪಿಗೆ ಬಿಸಿ ತಟ್ಟಿತ್ತು

ಬಿಜೆಪಿಗೆ ಬಿಸಿ ತಟ್ಟಿತ್ತು

ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಡಾ.ಸಿದ್ದರಾಮಯ್ಯ ಬಿಜೆಪಿ ಅಭ್ಯರ್ಥಿ. ಅಭ್ಯರ್ಥಿ ಆಯ್ಕೆ ಮಾಡಿದಾಗ ಕ್ಷೇತ್ರಕ್ಕೆ ಹೊಸಬರು ಎಂಬ ಸಣ್ಣ ಅಪಸ್ವರ ಎದ್ದಿತ್ತು. ಆದರೆ, ಈಗ ಅದು ತಣ್ಣಗಾಗಿದ್ದು ಪ್ರಚಾರ ಕಾರ್ಯ ಜೋರಾಗಿದೆ. 2014ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರೊ.ಬಿ.ಶಿವಲಿಂಗಯ್ಯ ಅವರು 86,993 ಮತಗಳನ್ನು ಪಡೆದಿದ್ದರು. ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಕುಸ್ತಿಯ ಲಾಭವನ್ನು ಪಡೆದುಕೊಳ್ಳಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ.

ಜಾತಿ ಲೆಕ್ಕಾಚಾರ ಹೇಗಿದೆ?

ಜಾತಿ ಲೆಕ್ಕಾಚಾರ ಹೇಗಿದೆ?

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರು ಹೆಚ್ಚು. ಸುಮಾರು 8 ಲಕ್ಷ ಒಕ್ಕಲಿಗರು. 3 ಲಕ್ಷ ದಲಿತರು, 1 ಲಕ್ಷ ಕುರುಬರು ಮತ್ತು ಲಿಂಗಾಯತರು, 80 ಸಾವಿರ ಮುಸ್ಲಿಂಮರು, 30 ಸಾವಿರ ಬ್ರಾಹ್ಮಣರು, 30 ಸಾವಿರ ಕ್ರೈಸ್ತರು ಇದ್ದಾರೆ. ಯಾವ ಸಮುದಾಯ ಯಾರಿಗೆ ಬೆಂಬಲ ನೀಡಲಿದೆ? ಎಂದು ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+