ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ ಉಪ ಚುನಾವಣೆ : ಬಿಎಸ್‌ಪಿ ಅಭ್ಯರ್ಥಿಯಿಂದ ನಾಮಪತ್ರ

|
Google Oneindia Kannada News

ಮಂಡ್ಯ, ಅಕ್ಟೋಬರ್ 13 : ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಇದುವರೆಗೆ ಸಮಾಜವಾದಿ ಪಕ್ಷದಿಂದ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದೆ

ಮಂಡ್ಯ ಲೋಕಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು 4ನೇ ದಿನವಾದ ಶುಕ್ರವಾರ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಂದೀಶ್ ಕುಮಾರ ಕೆ.ಬಿ (ನಂದೀಶ್ ಗೌಡ) ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನವಣಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ.

ಮಂಡ್ಯ ಉಪ ಚುನಾವಣೆ : ಟಿಕೆಟ್ ಆಕಾಂಕ್ಷಿಗಳಿಗೆ ದೇವೇಗೌಡರ ಷರತ್ತು!ಮಂಡ್ಯ ಉಪ ಚುನಾವಣೆ : ಟಿಕೆಟ್ ಆಕಾಂಕ್ಷಿಗಳಿಗೆ ದೇವೇಗೌಡರ ಷರತ್ತು!

ಅಕ್ಟೋಬರ್ 9ರಂದು ಲೋಕಸಭೆ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಿದೆ. ಅಕ್ಟೋಬರ್ 16ರ ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಯಿಂದ ಇನ್ನೂ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿಲ್ಲ.

ಮಂಡ್ಯ ಲೋಕಸಭೆ ಉಪ ಚುನಾವಣೆ : ಜೆಡಿಎಸ್‌ ಜೊತೆ ಮೈತ್ರಿಗೆ ವಿರೋಧ?ಮಂಡ್ಯ ಲೋಕಸಭೆ ಉಪ ಚುನಾವಣೆ : ಜೆಡಿಎಸ್‌ ಜೊತೆ ಮೈತ್ರಿಗೆ ವಿರೋಧ?

ಸಿ.ಎಸ್.ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಮಂಡ್ಯ ಲೋಕಸಭೆ ಉಪ ಚುನಾವಣೆ : ಜೆಡಿಎಸ್‌ನಿಂದ ಅಚ್ಚರಿಯ ಹೆಸರು!ಮಂಡ್ಯ ಲೋಕಸಭೆ ಉಪ ಚುನಾವಣೆ : ಜೆಡಿಎಸ್‌ನಿಂದ ಅಚ್ಚರಿಯ ಹೆಸರು!

ನ.3ರಂದು ಮತದಾನ

ನ.3ರಂದು ಮತದಾನ

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, ಅಕ್ಟೋಬರ್ 9, 2018 ರಂದು ಚುನಾವಣಾ ಅಧಿಸೂಚನೆ ಪ್ರಕಟಗೊಂಡಿದೆ. ಇದುವರೆಗೆ ಬಿಎಸ್‌ಪಿ ಅಭ್ಯರ್ಥಿ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ.

ಅಕ್ಟೋಬರ್ 16 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಅಕ್ಟೋಬರ್ 17 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 20 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ. ನವೆಂಬರ್ 3 ರಂದು ಮತದಾನ ನಡೆಯಲಿದ್ದು, ನವೆಂಬರ್ 6 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಬಿಜೆಪಿ ಅಭ್ಯರ್ಥಿ ಘೋಷಣೆ

ಬಿಜೆಪಿ ಅಭ್ಯರ್ಥಿ ಘೋಷಣೆ

ಮಂಡ್ಯ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿದೆ. ನಿವೃತ್ತಿ ಸರ್ಕಾರಿ ಅಧಿಕಾರಿ ಡಾ.ಸಿದ್ದರಾಮಯ್ಯ ಅವರು ಅಭ್ಯರ್ಥಿಯಾಗಿದ್ದಾರೆ. ಗುರುವಾರ ಅವರು ಆರ್.ಅಶೋಕ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಅಕ್ಟೋಬರ್ 15ರಂದು ಅವರು ನಾಮಪತ್ರವನ್ನು ಸಲ್ಲಿಸುವ ಸಾಧ್ಯತೆ ಇದೆ.

ಅಭ್ಯರ್ಥಿ ಘೋಷಣೆ ಮಾಡಿಲ್ಲ

ಅಭ್ಯರ್ಥಿ ಘೋಷಣೆ ಮಾಡಿಲ್ಲ

ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಎರಡೂ ಪಕ್ಷಗಳಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ. ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ, ಲಕ್ಷ್ಮೀ ಅಶ್ವಿನ್ ಗೌಡ ಅವರ ಹೆಸರು ಕೇಳಿಬರುತ್ತಿದೆ. ಆದರೆ, ಯಾರು ಅಭ್ಯರ್ಥಿ? ಎಂಬುದುನ್ನು ಇನ್ನು ಪಕ್ಷಗಳು ಅಂತಿಮಗೊಳಿಸಿಲ್ಲ.

ರಾಜೀನಾಮೆಯಿಂದಾಗಿ ಉಪ ಚುನಾವಣೆ

ರಾಜೀನಾಮೆಯಿಂದಾಗಿ ಉಪ ಚುನಾವಣೆ

2014ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನ ಸಿ.ಎಸ್.ಪುಟ್ಟರಾಜು ಮಂಡ್ಯದಲ್ಲಿ ಗೆದ್ದಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧಿಸಿ ಅವರು ಜಯಗಳಿಸಿದ್ದು, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದಾಗಿ ಉಪ ಚುನಾವಣೆ ಎದುರಾಗಿದೆ.

2014ರ ಚುನಾವಣೆ ಫಲಿತಾಂಶ
* ಸಿ.ಎಸ್.ಪುಟ್ಟರಾಜು 524370 ಮತ
* ರಮ್ಯಾ (ಕಾಂಗ್ರೆಸ್) 518852
* ಪ್ರೊ.ಬಿ.ಶಿವಲಿಂಗಯ್ಯ (ಬಿಜೆಪಿ) 86993

English summary
The Bahujan Samaj Party (BSP) candidate Nandish Kumar filed nomination for the Mandya Lok Sabha constituency by election scheduled on November 3, 2018. October 16 last date for submit nomination, National party candidates yet to file nomination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X