Mandya: ಕೆಆರ್‌ಎಸ್ ಸಮೀಪ ಟ್ರಯಲ್ ಬ್ಲಾಸ್ಟ್‌ಗೆ ರಾಣಿ ಪ್ರಮೋದಾ ದೇವಿ ಮತ್ತು ರೈತರಿಂದ ವಿರೋಧ
ಮಂಡ್ಯ : ಕೃಷ್ಣರಾಜಸಾಗರ ಜಲಾಶಯದ ಸಮೀಪ ಪರೀಕ್ಷಾರ್ಥ ಸ್ಫೋಟ ನಡೆಸಲು ಮೈಸೂರು ಮಹಾರಾಣಿ ಪ್ರಮೋದಾ ದೇವಿ ಸೇರಿದಂತೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಸೋಮವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ರೈತಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಯಾವುದೇ ಕಾರಣಕ್ಕೂ ಪರೀಕ್ಷಾರ್ಥ ಸ್ಫೋಟ ನಡೆಸುವುದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಾತನಾಡಿ, ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಪರೀಕ್ಷಾರ್ಥ ಸ್ಫೋಟ ನಡೆಸುವಂತೆ ತಿಳಿಸಿದೆ. ಆರು ತಿಂಗಳೊಳಗೆ ಟ್ರಯಲ್ ಬ್ಲಾಸ್ಟ್ ನಡೆಸಿ ವರದಿ ನೀಡುವಂತೆ ಕೇಳಿದೆ. ಹಾಗಾಗಿ ನಿಮ್ಮೊಂದಿಗೆ ಮಾತುಕತೆ ನಡೆಸಿ ಅಭಿಪ್ರಾಯ ಸಂಗ್ರಹಿಸಲು ಸಭೆ ಕರೆದಿದ್ದೇವೆ. ನಿಮ್ಮೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ದಿನಾಂಕ ನಿಗದಿಪಡಿಸುವುದಾಗಿ ತಿಳಿಸಿದರು ಎಂದು ಗೊತ್ತಾಗಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ರೈತ ಮುಖಂಡ ಪ್ರಸನ್ನ ಎನ್.ಗೌಡ, ಕೃಷ್ಣರಾಜಸಾಗರ ಜಲಾಶಯದ ಉತ್ತರದಾಯಿತ್ವವನ್ನು ರೈತಸಂಘದವರು ಮಾತ್ರ ತೆಗೆದುಕೊಂಡಿಲ್ಲ. ಜಿಲ್ಲೆಯ ಏಳು ಶಾಸಕರು, ಮಂತ್ರಿಗಳು, ವಿಧಾನಪರಿಷತ್ ಸದಸ್ಯರೂ ಇದ್ದಾರೆ. ಅವರನ್ನೂ ಸಭೆಗೆ ಕರೆಯಿರಿ. ಅವರ ಅಭಿಪ್ರಾಯ ಏನೆಂಬುದನ್ನೂ ತಿಳಿದುಕೊಳ್ಳೋಣ. ಯಾರು ಪ್ರಾಯೋಗಿಕ ಸ್ಫೋಟದ ಪರವಾಗಿದ್ದಾರೆ. ಯಾರು ವಿರೋಧವಾಗಿದ್ದಾರೆ. ಅಣೆಕಟ್ಟು ಸುರಕ್ಷತೆ ಬಗ್ಗೆ ಯಾರಿಗೆ ಎಷ್ಟು ಕಾಳಜಿ ಇದೆ ಎನ್ನುವುದು ಜನರಿಗೂ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.
ಸ್ಫೋಟಕ್ಕೆ ಯಾವುದೇ ಕಾರಣಕ್ಕೂ ಒಪ್ಪಿಗೆ ಇಲ್ಲ
ನಾವು ಜನಪ್ರತಿನಿಧಿಗಳನ್ನು ಸಭೆಗೆ ಕರೆಯಲು ಬರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದಾಗ, ನಾವೂ ಸಹ ಪರೀಕ್ಷಾರ್ಥ ಸ್ಫೋಟಕ್ಕೆ ಒಪ್ಪುವುದಿಲ್ಲ. ಜನಪ್ರತಿನಿಧಿಗಳನ್ನೂ ಕರೆದು ಅವರ ಸಲಹೆ-ಅಭಿಪ್ರಾಯಗಳನ್ನು ತಿಳಿದುಕೊಳ್ಳುವುದು ಅಗತ್ಯವಿದೆ. ಜೊತೆಗೆ ಕೆಆರ್‌ಎಸ್ ನೀರಿನ ಮೇಲೆ ಬೆಂಗಳೂರಿನ ಜನರೂ ಅವಲಂಬಿತರಾಗಿದ್ದಾರೆ. ಆ ಭಾಗದ ಜನರ ಅಭಿಪ್ರಾಯವನ್ನು ಪಡೆಯದೆ ನಮ್ಮಿಷ್ಟೇ ಜನರ ಅಭಿಪ್ರಾಯ ಪಡೆದು ಟ್ರಯಲ್ ಬ್ಲಾಸ್ಟ್ ನಡೆಸುವುದರಲ್ಲಿ ಅರ್ಥವಿದೆಯಾ ಎಂದು ಪ್ರಶ್ನಿಸಿದರು ಎನ್ನಲಾಗಿದೆ.
ಜಿಲ್ಲಾಡಳಿತ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರೀಸರ್ಚ್ (ಸಿಎಸ್ಐಆರ್) ತಂಡದಿಂದ ಪರೀಕ್ಷಾರ್ಥ ಸ್ಫೋಟ ನಡೆಸುವುದಾಗಿ ಹೇಳುತ್ತಿದೆ. ಆದರೆ, ಪರೀಕ್ಷಾರ್ಥ ಸ್ಫೋಟಕ್ಕೆ ಅನುಸರಿಸುತ್ತಿರುವ ಮಾನದಂಡವೇನು. ಎಷ್ಟು ಅಡಿ ಆಳದಲ್ಲಿ ಸ್ಫೋಟ ನಡೆಸಲಾಗುತ್ತದೆ. ಒಮ್ಮೆ ಸಣ್ಣ ಪ್ರಮಾಣದಲ್ಲಿ ಸ್ಫೋಟ ನಡೆಸಿ ವರದಿ ಪಡೆದುಕೊಂಡು ಹೈಕೋರ್ಟ್‌ಗೆ ಸಲ್ಲಿಸಿ ನ್ಯಾಯಾಲಯದ ಅನುಮತಿ ಪಡೆಯುವ ಸಂಚು ಅಡಗಿದೆಯಾ ಎಂದು ಪ್ರಶ್ನಿಸಿದ್ದಾಗಿ ತಿಳಿದುಬಂದಿದೆ.
ಸಾಮಾಜಿಕ ಹೋರಾಟಗಾರ ಕೆ.ಆರ್.ರವೀಂದ್ರ ಮಾತನಾಡಿ, ಕೆಆರ್‌ಎಸ್ ಸುತ್ತಮುತ್ತ ವನ್ಯಜೀವಿ ವಲಯ, ಅರಣ್ಯ, ಪ್ರಾಕೃತಿಕ ಸಂಪತ್ತು ಇದೆ. ಮೇಲುಕೋಟೆ ವನ್ಯಜೀವಿ ವಲಯ, ರಂಗನತಿಟ್ಟು ಪಕ್ಷಿಧಾಮದಿಂದ 10 ಕಿ.ಮೀ. ದೂರದಲ್ಲಿ ಗಣಿಗಾರಿಕೆಗೆ ನಿಯಮಬಾಹೀರ ಅವಕಾಶ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.
ಬೇಬಿ ಬೆಟ್ಟ ಕಾವಲ್ ಒತ್ತುವರಿ ತೆರವಿಗೆ ಆದೇಶವಿದ್ದರೂ ಪಾಲನೆಯಾಗಿಲ್ಲ. ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಬೇಕಿದೆ. ಪ್ರಾಕೃತಿಕ ಸಂಪತ್ತನ್ನು ಉಳಿಸುವುದರ ಮೇಲೆ ಆಸಕ್ತಿಯನ್ನೇ ತೋರದ ಜಿಲ್ಲಾಡಳಿತ, ಪರೀಕ್ಷಾರ್ಥ ಸ್ಫೋಟ ನಡೆಸುವುದಕ್ಕೆ ಹೆಚ್ಚಿನ ಮುತುವರ್ಜಿ, ಆಸಕ್ತಿ ತೋರುತ್ತಿರುವುದು ನೋಡಿದರೆ ಗಣಿಗಾರಿಕೆ ನಡೆಸುವವರಿಗೆ ಅನುಕೂಲ ಮಾಡಿಕೊಡುವ ಸಂಚು ಅಡಗಿರುವಂತೆ ಕಂಡುಬರುತ್ತಿದೆ ಎಂದಿದ್ದಾರೆ.
ರಾಜ್ಯಸರ್ಕಾರ ಮತ್ತು ಜಿಲ್ಲಾಡಳಿತ ಗಣಿಧಣಿಗಳಿಗೆ ಮಣಿದಿರುವಂತೆ ಕಂಡುಬರುತ್ತಿದೆ. ಜನಪ್ರತಿನಿಧಿಗಳ ಸಭೆ ಕರೆಯದಿರುವುದನ್ನು ನೋಡಿದರೆ ಅವರೂ ಪರೋಕ್ಷವಾಗಿ ಟ್ರಯಲ್ ಬ್ಲಾಸ್ಟ್ ಬೆಂಬಲಕ್ಕೆ ನಿಂತಿರುವಂತೆ ಕಂಡುಬರುತ್ತಿದೆ. ನೂರು ವರ್ಷ ಹಳೆಯದಾಗಿರುವ ಅಣೆಕಟ್ಟೆಯನ್ನು ಸಂರಕ್ಷಣೆ ಮಾಡುವ ಇಚ್ಛಾಶಕ್ತಿಯನ್ನು ಪ್ರದರ್ಶಿಸದೆ ಪರೀಕ್ಷಾರ್ಥ ಸ್ಫೋಟಕ್ಕೆ ಸಜ್ಜಾಗುತ್ತಿರುವುದು ದೊಡ್ಡ ದುರಂತ ಎಂದಿದ್ದಾರೆ.
ಒಮ್ಮೆ ರೈತರ ವಿರೋಧದ ನಡುವೆಯೂ ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾದರೆ ಮತ್ತೆ ಗೋ-ಬ್ಯಾಕ್ ಚಳವಳಿ ನಡೆಸಬೇಕಾಗುತ್ತದೆ. ಚಳವಳಿಗೆ ಉಗ್ರ ಸ್ವರೂಪ ನೀಡಬೇಕಾಗುತ್ತದೆ ಎಂದು ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications