ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಆರ್‌ಎಸ್ ಬಹುತೇಕ ಭರ್ತಿ; ಸಂಸದೆ ಸುಮಲತಾ ಭೇಟಿ

|
Google Oneindia Kannada News

ಮಂಡ್ಯ, ಆಗಸ್ಟ್ 12 : 'ಇದು ಬರೀ ನೀರಲ್ಲ, ನಮ್ಮ ಜಿಲ್ಲೆಯ ಜೀವಾಳ' ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಬಹುತೇಕ ಭರ್ತಿಯಾಗಿರುವ ಕೆಆರ್‌ಎಸ್ ಜಲಾಶಯಕ್ಕೆ ಅವರು ಭೇಟಿ ನೀಡಿ, ಅಧಿಕಾರಿಗಳ ಜೊತೆ ಚರ್ಚಿಸಿದರು.

ಬುಧವಾರ ಮಂಡ್ಯ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಜಲಾಶಯಕ್ಕೆ ಭೇಟಿ ನೀಡಿದರು. "ಕನ್ನಂಬಾಡಿ ತುಂಬುವುದನ್ನು ನೋಡುವುದೇ ಒಂದು ಪುಣ್ಯದ ಅನುಭವ. ಇದು ಬರೀ ನೀರಲ್ಲ, ನಮ್ಮ ಜಿಲ್ಲೆಯ ಜೀವಾಳ" ಎಂದರು.

ಕರ್ನಾಟಕದ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಎಷ್ಟಿದೆ?ಕರ್ನಾಟಕದ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

ಕೆಆರ್‌ಎಸ್‌ಗೆ ಭೇಟಿ ನೀಡಿದ ಚಿತ್ರಗಳನ್ನು ಅವರು ಫೇಸ್‌ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. "ಇನ್ನೇನು ಗರಿಷ್ಠ ಮಟ್ಟ ತಲುಪಲಿದ್ದು, ಇಂದು ನನ್ನ ಕ್ಷೇತ್ರದ ಹೆಮ್ಮೆಯ ಕೆಆರ್‌ಎಸ್ ಅಣೆಕಟ್ಟು ವೀಕ್ಷಿಸಿ, ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದೆ" ಎಂದು ಬರೆದಿದ್ದಾರೆ.

ಕೆಆರ್‌ಎಸ್ ಅಣೆಕಟ್ಟೆ ಸುತ್ತ ಕಲ್ಲು ಗಣಿಗಾರಿಕೆ ನಿಷೇಧಕೆಆರ್‌ಎಸ್ ಅಣೆಕಟ್ಟೆ ಸುತ್ತ ಕಲ್ಲು ಗಣಿಗಾರಿಕೆ ನಿಷೇಧ

Mandya MP Sumalatha Ambareesh Visits KRS Dam

ಗರಿಷ್ಠ 124.80 ಅಡಿ ಎತ್ತರದ ಕೆಆರ್‌ಎಸ್ ಜಲಾಶಯದಲ್ಲಿ ಪ್ರಸ್ತುತ 121.95 ಅಡಿ ನೀರಿದೆ. 32,967 ಕ್ಯುಸೆಕ್ ಒಳ ಹರಿವು ಇದ್ದು, 3,617 ಕ್ಯುಸೆಕ್ ಹೊರ ಹರಿವು ದಾಖಲಾಗಿದೆ. ಈಗಾಗಲೇ ಕೆಲವು ಗೇಟ್‌ಗಳ ಮೂಲಕ ನದಿಗೆ ನೀರನ್ನು ಬಿಡಲಾಗುತ್ತಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

ಕೆಲವು ದಿನಗಳಿಂದ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು ಕೆಆರ್‌ಎಸ್ ಜಲಾಶಯ ಬಹುತೇಕ ಭರ್ತಿಯಾಗಿದೆ. ಮಂಡ್ಯ ಜಿಲ್ಲೆಯ ನೀರಾವರಿಗೆ ಕೆಆರ್‌ಎಸ್ ಜಲಾಶಯವನ್ನೇ ಅವಲಂಬಿಸಲಾಗಿದೆ.

ಬೆಂಗಳೂರು, ಮಂಡ್ಯ ಮತ್ತು ಮೈಸೂರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಕೆಅರ್‌ಎಸ್ ಜಲಾಶಯವೇ ಮೂಲ ಆಧಾರವಾಗಿದೆ. ಪ್ರತಿಬಾರಿ ಜಲಾಶಯ ಭರ್ತಿಯಾದಾಗ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವುದು ವಾಡಿಕೆಯಾಗಿದೆ.

English summary
Krishnaraja Sagar (KRS) dam water level reached 121.95 feet against 124.80 feet. Mandya MP Sumalatha Ambareesh visited the dam at Srirangapatna taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X