ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ ಫಲಿತಾಂಶ: ರಾಜಕೀಯ ಸನ್ಯಾಸತ್ವದ ಶಪಥ ಮಾಡಿದ ಜೆಡಿಎಸ್ ಸಚಿವ

|
Google Oneindia Kannada News

Recommended Video

Mandya: ನಿಖಿಲ್ ಕುಮಾರಸ್ವಾಮಿ ಗೆಲ್ಲದೇ ಇದ್ದಾರೆ, ರಾಜಕೀಯ ನಿವೃತ್ತಿ ಘೋಷಿಸಿದ ಜೆಡಿಎಸ್ ಮುಖಂಡ

ಮಂಡ್ಯ, ಏ 22: ತುಮಕೂರಿನಲ್ಲಿ ದೇವೇಗೌಡ್ರನ್ನು ಗೆಲ್ಲಿಸಲಾಗದಿದ್ದರೆ, ರಾಜೀನಾಮೆ ಪತ್ರದೊಂದಿಗೆ ಬರುತ್ತೇನೆ ಎಂದು ಗುಬ್ಬಿ ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್, ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದದ್ದು ವೈರಲ್ ಆಗಿತ್ತು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಈಗ, ಮತ್ತೋರ್ವ ಜೆಡಿಎಸ್ ಮುಖಂಡರು ನಿವೃತ್ತಿಯ ಮಾತನ್ನಾಡಿದ್ದಾರೆ. ಮಂಡ್ಯದಲ್ಲಿ ನಾನು ನಿರೀಕ್ಷಿಸಿದಷ್ಟು ಲೀಡ್ ನಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲದಿದ್ದರೆ, ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಲುತ್ತೇನೆ ಎಂದು ಸಚಿವ ಸಿ ಎಸ್ ಪುಟ್ಟರಾಜು ಶಪಥ ಮಾಡಿದ್ದಾರೆ.

ಪಶ್ಚಾತ್ತಾಪ ಪಡುತ್ತೀರಾ: 'ಜೋಡೆತ್ತು'ಗಳಿಗೆ ಕುಮಾರಸ್ವಾಮಿ ವಾರ್ನಿಂಗ್ಪಶ್ಚಾತ್ತಾಪ ಪಡುತ್ತೀರಾ: 'ಜೋಡೆತ್ತು'ಗಳಿಗೆ ಕುಮಾರಸ್ವಾಮಿ ವಾರ್ನಿಂಗ್

ನಮ್ಮ ಮೈತ್ರಿ ಅಭ್ಯರ್ಥಿ ನಿಖಿಲ್ ಸುಮಾರು ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಈ ಅಂತರದಲ್ಲಿ ಸ್ವಲ್ಪ ಕಮ್ಮಿಯಾದರೂ ನಾನು ರಾಜಕೀಯದಲ್ಲಿ ಇರುವುದಿಲ್ಲ ಎಂದಿರುವ ಪುಟ್ಟರಾಜು, ಸುಮಲತಾ ಅವರು ಸೋತರೆ ಯಡಿಯೂರಪ್ಪ ನಿವೃತ್ತಿ ತೆಗೆದುಕೊಳ್ಳುತ್ತಾರಾ ಎಂದು ಪ್ರಶ್ನಿಸಿದ್ದಾರೆ.

Mandya: Nikhil Kumaraswamy will win with huge lead, else I will take political retirement

ನಾವೆಲ್ಲರೂ ಮಂಡ್ಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ, ನಮ್ಮ ಅಭ್ಯರ್ಥಿ ಭಾರೀ ಅಂತರದಿಂದ ಗೆಲ್ಲಲಿದ್ದಾರೆ ಎಂದು ಮೇಲುಕೋಟೆ ಶಾಸಕರೂ ಆಗಿರುವ ಸಿ ಎಸ್ ಪುಟ್ಟರಾಜು ಹೇಳಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದ ನಂತರ, ಏನೆಲ್ಲಾ ಆಗಿದೆ ಎನ್ನುವುದನ್ನು ತಿಳಿದಿದೆ. ದರ್ಶನ್ ಮತ್ತು ಯಶ್, ಚುನಾವಣಾ ಫಲಿತಾಂಶದ ನಂತರ ಪಶ್ಚಾತ್ತಾಪ ಪಡಬೇಕಾಗುತ್ತದೆ. ಪ್ರಾಯಶ್ಚಿತ್ತವನ್ನೂ ಮಾಡಿಕೊಳ್ಳಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದರು.

ಎಚ್ಡಿಕೆಯನ್ನು ಎದುರಾಕಿಕೊಂಡ 'ಜೋಡೆತ್ತು'ಗಳ ಧೈರ್ಯ ಮೆಚ್ಚಲೇಬೇಕು: ಏನಂತೀರಾ?ಎಚ್ಡಿಕೆಯನ್ನು ಎದುರಾಕಿಕೊಂಡ 'ಜೋಡೆತ್ತು'ಗಳ ಧೈರ್ಯ ಮೆಚ್ಚಲೇಬೇಕು: ಏನಂತೀರಾ?

ಈಗಾಗಲೇ ನಮ್ಮದೇ ಗೆಲುವು ಎಂದು ನಿಖಿಲ್ ಮತ್ತು ಸುಮಲತಾ ಅಂಬರೀಶ್ ಅವರು ಹೇಳಿಕೊಳ್ಳುತ್ತಿದ್ದಾರೆಯಾದರೂ ಒಳಮರ್ಮ ಗೊತ್ತಾಗಲು ಮೇ 23ರ ವರೆಗೆ ಕಾಯಬೇಕಿದೆ.

English summary
Mandya Loksabha elections 2019: Nikhil Kuamraswamy will win with minimum 2.5 lac votes, else I will take political retirement, C S Puttaraju.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X