ತಮಿಳುನಾಡಿಗೆ ನೀರು ಹರಿಸುತ್ತಿರುವ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆ

By: ಮಂಡ್ಯ ಪ್ರತಿನಿಧಿ
Subscribe to Oneindia Kannada

ಮಂಡ್ಯ, ಜುಲೈ 25: ದೀಪದ ಕೆಳಗೆ ಕತ್ತಲು ಎಂಬಂತೆ ಕೆಆರ್ ಎಸ್ ನಿಂದ ತಮಿಳುನಾಡಿಗೆ ನೀರು ಹರಿದು ಹೋಗುತ್ತಿದೆ. ಆದರೆ ಶ್ರೀರಂಗಪಟ್ಟಣ ತಾಲೂಕು ಅಲ್ಲಾಪಟ್ಟಣ ಗ್ರಾಮಸ್ಥರು ಕುಡಿಯುವ ನೀರಿಲ್ಲದೆ ಪರದಾಡುತ್ತಿದ್ದು, ನೀರಿಗಾಗಿ ಖಾಲಿ ಕೊಡ ಹಿಡಿದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವಂತಹ ಪರಿಸ್ಥಿತಿ ಬಂದಿರುವುದು ವಿಪರ್ಯಾಸವಾಗಿದೆ.

ಹಾರಂಗಿ ಕಟ್ಟೇಪುರ ಗೊರೂರು ನಾಲೆಗೆ ನೀರು ಹರಿಸಲು ಒತ್ತಾಯ

ಜುಲೈ 24 ರಂದು ತಮ್ಮ ಗ್ರಾಮದಿಂದ ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಆಗಮಿಸಿದ ಗ್ರಾಮಸ್ಥರು ಖಾಲಿ ಕೊಡ ಪ್ರದರ್ಶನ ಮಾಡುತ್ತಾ ಸರ್ಕಾರದ ವಿರುದ್ಧ ಘೋಷಣೆ ಕೂಗಿದರಲ್ಲದೆ, ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Mandya people protest against releasing of Cauvery water to Tamil Nadu

ತಮ್ಮ ಗ್ರಾಮದಲ್ಲಿ ಆರೇಳು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು. ಜನ ನೀರಿಗಾಗಿ ಬೇರೆಯವರ ಕೃಷಿ ಭೂಮಿಗೆ ತೆರಳುವಂತಾಗಿದೆ.

Tamilnadu States Karnataka Is Polluting Cauvery River | Oneindia Kannada

ಇನ್ನು ಇರುವ ಬೋರ್‍ವೆಲ್ ಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ಸಂಬಂಧಿಸಿದವರಾರು ಗಮನಹರಿಸದ ಕಾರಣ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದರಲ್ಲದೆ, ಸಮಸ್ಯೆ ಪರಿಹರಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Manadya people protested against releasing of Cauvery water to Tamil Nadu by showing empty vessels infront of Mandya DC Office.
Please Wait while comments are loading...