ಮಂಡ್ಯ: ಡಾಬಾದಲ್ಲಿ ವೇಶ್ಯಾವಾಟಿಕೆ, 7 ಮಹಿಳೆಯರ ರಕ್ಷಣೆ
ಮಂಡ್ಯ, ಆಗಸ್ಟ್ 20 : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗೇಟ್ ಬಳಿ ಇರುವ ಡಾಬಾದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ಶನಿವಾರ ರಾತ್ರಿ ದಾಳಿ ನಡೆಸಿದ್ದಾರೆ
ಡಾಬಾದಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿದ್ದ ಕುರಿತು ಮಾಹಿತಿ ಪಡೆದಿದ್ದ ಮಂಡ್ಯ ಎಸ್ಪಿ ರಾಧಿಕಾ ತಂಡ ಶನಿವಾರ ರಾತ್ರಿ ಕಾರ್ಯಾಚರಣೆ ನಡೆಸಿ 22 ಜನ ಪುರುಷರನ್ನು ಬಂಧಿಸಿ, 7 ಜನ ಮಹಿಳೆಯರನ್ನು ರಕ್ಷಿಸಿದ್ದಾರೆ.

ಈ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯರನ್ನು ರಕ್ಷಿಸಿದ್ದಾರೆ. ಅಲ್ಲದೇ ಸ್ಥಳದಲ್ಲಿದ್ದ 5 ಬೈಕ್, ಕಾರ್, ಆಟೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
2008ರಲ್ಲೂ ಇದೇ ಡಾಬಾ ಮೇಲೆ ದಾಳಿ ನಡೆಸಿದ್ದ ಪೊಲೀಸರು ಕಲ್ಕತ್ತಾ, ಮುಂಬೈ ಮತ್ತು ಬಾಂಗ್ಲಾ ಮೂಲದ ಮಹಿಳೆಯರನ್ನು ರಕ್ಷಣೆ ಮಾಡಿದ್ದರು. ಈ ಬಗ್ಗೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications