ಮಂಡ್ಯ : ರವೀಂದ್ರ ಶ್ರೀಕಂಠಯ್ಯ ಜೆಡಿಎಸ್‌ ಸೇರ್ಪಡೆ?

Posted By: Gururaj
Subscribe to Oneindia Kannada

ಮಂಡ್ಯ, ಆಗಸ್ಟ್. 28 : ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡ ರವೀಂದ್ರ ಶ್ರೀಕಂಠಯ್ಯ ಜೆಡಿಎಸ್ ಸೇರುವ ನಿರೀಕ್ಷೆ ಇದೆ. ಎಸ್‌.ಎಂ.ಕೃಷ್ಣ ಬೆಂಬಲಿಗರಾದ ರವೀಂದ್ರ ಅವರು, ಎಸ್‌.ಎಂ.ಕೃಷ್ಣ ರಾಜೀನಾಮೆ ಬಳಿಕ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ರವೀಂದ್ರ ಶ್ರೀಕಂಠಯ್ಯ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಪಕ್ಷ ಸೇರಲು ಒಪ್ಪಿಗೆ ಸಿಕ್ಕಿದೆ ಎಂದು ತಿಳಿದುಬಂದಿದೆ. ಸೆ.3ರಂದು ಅವರು ಬೆಂಬಲಿಗರ ಸಭೆ ಕರೆದಿದ್ದು, ಅಂದು ನಿರ್ಧಾರ ಪ್ರಕಟಿಸುವ ನಿರೀಕ್ಷೆ ಇದೆ.

   S M Krishna's Close Aide Raveendra Srikantaiah May Joins JDS very soon | Oneindia Kannada

   ಶ್ರೀರಂಗ ಪಟ್ಟಣ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ರಾಜಿನಾಮೆ

   Mandya : Raveendra Srikantaiah may join JDS soon

   ರವೀಂದ್ರ ಶ್ರೀಕಂಠಯ್ಯ ಶ್ರೀರಂಗಪಟ್ಟಣ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಕಟ್ಟಾ ಬೆಂಬಲಿಗರಾಗಿದ್ದರು. ಎಸ್.ಎಂ.ಕೃಷ್ಣ ಅವರು ಬಿಜೆಪಿ ಸೇರುತ್ತಿದ್ದಂತೆ ರವೀಂದ್ರ ಅವರು ಕಾಂಗ್ರೆಸ್ ಪಕ್ಷ ತೊರೆದಿದ್ದರು.

   ವರ್ಣರಂಜಿತ ರಾಜಕಾರಣಿ ಎಸ್ ಎಂ ಕೃಷ್ಣ ನೇಪಥ್ಯಕ್ಕೆ ಸರಿದರೆ?

   ಎಸ್.ಎಂ.ಕೃಷ್ಣ ಅವರಂತೆಯೇ ರವೀಂದ್ರ ಅವರು ಬಿಜೆಪಿ ಸೇರಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅವರು ಜೆಡಿಎಸ್ ಸೇರುವ ತಯಾರಿ ನಡೆಸಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟಾಗಲಿದೆ.

   ಕಾಂಗ್ರೆಸ್ ಪಕ್ಷದಲ್ಲಿದ್ದ ಕೆ.ಸುರೇಶ್ ಗೌಡ ಮತ್ತು ಎಲ್.ಆರ್.ಶಿವರಾಮೇಗೌಡ ಅವರು ಕೆಲವು ದಿನಗಳ ಹಿಂದೆ ಜೆಡಿಎಸ್ ಸೇರಿದ್ದರು. ನಾಗಮಂಗಳ ಶಾಸಕ ಚಲುವರಾಯಸ್ವಾಮಿ ಕಾಂಗ್ರೆಸ್ ಸೇರುವುದನ್ನು ವಿರೋಧಿಸಿದ್ದ ಈ ನಾಯಕರು ಜೆಡಿಎಸ್ ಸೇರ್ಪಡೆಗೊಂಡಿದ್ದರು.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Former KPCC member and close aide of former chief minister S.M.Krishna Raveendra Srikantaiah may join JDS soon. Raveendra Srikantaiah quit Congress party after SM Krishna joins BJP.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ