ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ: ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು, ಬಹುತೇಕ ಖಾಸಗಿ ಶಾಲೆಗಳು ಓಪನ್

|
Google Oneindia Kannada News

ಮಂಡ್ಯ, ಜೂನ್ 16: ಸರ್ಕಾರದ ಆದೇಶವನ್ನು ಉಲ್ಲಂಘಿಸಿ, ಮಂಡ್ಯ ಜಿಲ್ಲೆಯಲ್ಲಿ ಬಹುತೇಕ ಖಾಸಗಿ ಶಾಲೆಗಳು ಓಪನ್ ಆಗಿದ್ದು, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಪರೀಕ್ಷಾ ಪೂರ್ವ ಪಾಠ ಆರಂಭಿಸಿದ್ದಾರೆ.

Recommended Video

ಕೆ ಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡ ಅಭಿಮಾನಿಗಳು | KL Rahul | Oneindia Kanada

ಜೂನ್ 25 ರಿಂದ SSLC ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ, ತರಗತಿಗಳನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

 ಮಂಡ್ಯದಲ್ಲಿ ಲಾಕ್‌ ಡೌನ್‌ ನಡುವೆ ಪಾರ್ಟಿ; 34 ಜನರ ಬಂಧನ ಮಂಡ್ಯದಲ್ಲಿ ಲಾಕ್‌ ಡೌನ್‌ ನಡುವೆ ಪಾರ್ಟಿ; 34 ಜನರ ಬಂಧನ

ಮಂಡ್ಯ ಶಾಸಕ ಎಂ.ಶ್ರೀನಿವಾಸ್ ಒಡೆತನದ ವಿವೇಕ ವಿದ್ಯಾಸಂಸ್ಥೆ, ರೋಟರಿ ಎಜುಕೇಶನ್ ಸೊಸೈಟಿ, ಆದರ್ಶ ಪ್ರೌಢಶಾಲೆ ಸೇರಿದಂತೆ ಜಿಲ್ಲೆಯ ಬಹುತೇಕ ಖಾಸಗಿ ಶಾಲೆಗಳು ತೆರೆದಿವೆ. ವಿದ್ಯಾರ್ಥಿಗಳ ನಡುವೆ ತರಗತಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಾಠ ಮಾಡುತ್ತಿದ್ದು, ಆದರೆ ತರಗತಿಯಲ್ಲಿ ಮಾಸ್ಕ್ ಧರಿಸದೆ ಶಿಕ್ಷಕರು ಟೀಚಿಂಗ್ ಮಾಡುತ್ತಿದ್ದಾರೆ.

Mandya: Many Private Schools Have Been Opened In Violation Of A Government Order

ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ತರಗತಿಗಳು ನಡೆಯುತ್ತಿದ್ದು, ಕಳೆದ ಒಂದು ವಾರದಿಂದ ಶಾಲೆಗಳು ಆರಂಭವಾಗಿವೆ. ಕೊರೊನಾ ವೈರಸ್ ಭೀತಿಯಿಂದಾಗಿ ಶಾಲೆ ತೆರೆಯಲು ಅನುಮತಿ ಇಲ್ಲದಿದ್ದರೂ ಆಡಳಿತ ಮಂಡಳಿಯಿಂದ ರೂಲ್ಸ್ ಬ್ರೇಕ್ ಮಾಡಲಾಗಿದೆ.

ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಒಪ್ಪದಿದ್ದರೂ, ಶಿಕ್ಷಕರು ಮಕ್ಕಳನ್ನು ಶಾಲೆಗೆ ಕರೆಸಿಕೊಂಡಿದ್ದಾರೆ. ಕೊರೊನಾ ವೈರಸ್ ಭಯದ ನಡುವೆಯೇ ತರಗತಿಯಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ.

English summary
Most of the private schools in Mandya district have been opened in violation of government orders and teachers have started pre test lessons for SSLC students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X