ಹುತಾತ್ಮ ಯೋಧ ಗುರು ಪತ್ನಿಗೆ ಸರ್ಕಾರಿ ಉದ್ಯೋಗದ ಭರವಸೆ

ಮಂಡ್ಯ, ಫೆಬ್ರವರಿ 15: ನಿನ್ನೆ ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮನಾದ ಮಂಡ್ಯದ ಯೋಧ ಗುರು ಅವರ ಪತ್ನಿಗೆ ಸರ್ಕಾರಿ ನೌಕರಿಯ ಭರವಸೆಯನ್ನು ಸಚಿವ ಪುಟ್ಟರಾಜು ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸರ್ಕಾರದ ಜೊತೆ ಮಾತನಾಡಿ ಯೋಧ ಗುರು ಅವರ ಪತ್ನಿ ಕಲಾವತಿ ಅವರಿಗೆ ಸರ್ಕಾರಿ ಉದ್ಯೋಗದ ಜೊತೆಗೆ ಆರ್ಥಿಕ ಸಹಾಯ ಕೊಡಿಸುವುದಾಗಿ ಅವರು ಹೇಳಿದ್ದಾರೆ. ಪುಟ್ಟರಾಜು ಅವರು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ.

ಈಗಾಗಲೇ ಜಿಲ್ಲಾಧಿಕಾರಿಗಳು ಗುರು ಅವರ ಹುಟ್ಟೂರು ಮಂಡ್ಯದ ಮದ್ದೂರು ತಾಲ್ಲೂಕಿನ ಗುಡಿಗೆರೆ ಗ್ರಾಮಕ್ಕೆ ತೆರಳಿ ಹುತಾತ್ಮ ಯೋಧನ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಮತ್ತು ಗುರು ಮೃತ ದೇಹವನ್ನು ಸಕಲ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಿದ್ದಾರೆ ಎಂದು ಪುಟ್ಟರಾಜು ಹೇಳಿದ್ದಾರೆ.

martyr soldier Gurus wife will get government job from state government

ಯೋಧ ಗುರು ಅವರು ಕಲಾವತಿ ಅವರನ್ನು ಆರು ತಿಂಗಳ ಹಿಂದಷ್ಟೆ ವಿವಾಹವಾಗಿದ್ದರು. ರಜೆ ಹಾಕಿ ಬಂದಿದ್ದ ಅವರು ಫೆಬ್ರವರಿ 10 ರಂದು ಪುನಃ ಸೇವೆಗೆ ತೆರಳಿದ್ದರು. ಆದರೆ ಗುರು ಇನ್ನೆಂದೂ ಮರಳುವುದಿಲ್ಲವೆಂದು ಗೊತ್ತಾದ ಗುರು ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+