Get Updates
Get notified of breaking news, exclusive insights, and must-see stories!

ಮೇಲುಕೋಟೆ ಚುನಾವಣಾ ಫಲಿತಾಂಶ 2023: ಸಿಎಸ್‌ ಪುಟ್ಟರಾಜು ಸೋಲಿಸಿದ ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ, ಮೇ 13: ಜೆಡಿಎಸ್‌ ಭದ್ರಕೋಟೆಯನ್ನು ಛಿದ್ರಗೊಳಿಸಿ ರೈತ ನಾಯಕ ದಿ. ಪುಟ್ಟಣ್ಣಯ್ ಅವರ ಮಗ ದರ್ಶನ್‌ ಪುಟ್ಟಣ್ಣಯ್ಯ ಕೊನೆಗೂ ಗೆಲುವು ಸಾಧಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಪ್ರಮುಖ ವಿಧಾನಸಭಾ ಕ್ಷೇತ್ರವಾದ ಮೇಲುಕೋಟೆಯಲ್ಲಿ ಸರ್ವೋದಯ ಪಕ್ಷದ ಅಭ್ಯರ್ಥಿ ದರ್ಶನ್‌ ಪುಟ್ಟಣ್ಣಯ್ಯ ಅವರು 90,387 ಮತಗಳನ್ನು ಪಡೆದಿದ್ದಾರೆ. ಅವರ ಸಮೀಪ ಅಭ್ಯರ್ಥಿ ಸಿಎಸ್ ಪುಟ್ಟರಾಜು ಅವರು 79,424 ಮತಗಳನ್ನು ಪಡೆದಿದ್ದಾರೆ. ಅವರು 9151 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

ಈ ಬಾರಿ ರಾಜ್ಯ ರೈತ ನಾಯಕ ಪುಟ್ಟಣ್ಣಯ್ಯ ಅವರ ಮಗ ದರ್ಶನ್‌ ಪುಟ್ಟಣ್ಣಯ್ಯ ಅವರು ಸರ್ಧೆ ಮಾಡಿದ್ದರು. ಬಿಜೆಪಿಯಿಂದ ಡಾ. ಇಂದ್ರೇಶ್ ಸ್ಪರ್ಧಿಸಿದ್ದಾರೆ. ಜೆಡಿಎಸ್‌ನಿಂದ ಹಾಲಿ ಶಾಸಕ ಸಿ.ಎಸ್. ಪುಟ್ಟರಾಜು ಮತ್ತೊಮ್ಮೆ ಅದೃಷ್ಠ ಪರೀಕ್ಷೆಗೆ ಸಿದ್ಧರಾಗಿದ್ದಾರೆ. ಇವರೊಂದಿಗೆ ಹಲವರು ಕಣದಲ್ಲಿದ್ದು, ತೀವ್ರ ಪೈಪೋಟಿ ನಡೆಸಿದ್ದಾರೆ.

ಐತಿಹಾಸಿಕ ಕ್ಷೇತ್ರವಾಗಿರುವ ಮೇಲುಕೋಟೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೂ, ಚಳವಳಿಗೆ ಹೆಸರಾದ ಕೆ.ಎಸ್. ಪುಟ್ಟಣ್ಣಯ್ಯ ಅವರ ಪುತ್ರ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಿತ್ತು. 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಸಿಎಸ್‌ ಪುಟ್ಟರಾಜು 96,003 ಮತಗಳನ್ನು ಪಡೆದು 22,224 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಅವರಿಗೆ ಶೇಕಡ 54.87

Melukote Election Results 2023

ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್‌ ಪುಟ್ಟಣಯ್ಯ ಅವರು 73,779 ಮತಗಳನ್ನು ಪಡೆದಿದ್ದರು. ಅವರಿಗೆ ಶೇಕಡ 42.17 ರಷ್ಟು ಮತಗಳು ಲಭಿಸಿದ್ದವು. ಇನ್ನು ಬಿಜೆಪಿಯಿಂದ ಸ್ಪರ್ಧಿಸಿದ್ದ ಸುಂಡಹಳ್ಳಿ ಸೋಮಶೇಖರ್‌ ಅವರು 1,595 ಮತಗಳನ್ನು ಪಡೆದಿದ್ದರು . ಅವರಿಗೆ ಶೇಕಡ 0.91ರಷ್ಟು ಮತಗಳು ಲಭಿಸಿದ್ದವು.

ಮೇಲುಕೋಟೆ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ ಪಕ್ಷದಿಂದ ಕಣಕ್ಕಿಳಿದಿರುವ ದರ್ಶನ್ ಪುಟ್ಟಣ್ಣಯ್ಯ ಅವರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಗುರುವಾರ ಸಾವಿರಾರು ಜನರು ಈ ಸಂದರ್ಭದಲ್ಲಿ ಅವರಿಗೆ ಬೆಂಬಲ ನೀಡಿದರು. ಅಭಿಮಾನಿಗಳ ಪಾಲಿನ ಪ್ರೀತಿಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗದೀಪ ಅವರು ದರ್ಶನ್‌ ಪುಟ್ಟಣ್ಣಯ್ಯಗೆ ಬೆಂಬಲ ಸೂಚಿಸಿದರು. ಬೃಹತ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ್ದರು.

ದರ್ಶನ್ ಪುಟ್ಟಣ್ಣಯ್ಯ ರೈತ ಹೋರಾಟಗಾರ ದಿ. ಕೆ. ಎಸ್. ಪುಟ್ಟಣ್ಣಯ್ಯ ಪುತ್ರ. ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಯಾದ ಅವರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡಿದೆ. ಆದ್ದರಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕಿಲ್ಲ. ದಿ. ಕೆ. ಎಸ್. ಪುಟ್ಟಣ್ಣಯ್ಯ ಮೇಲುಕೋಟೆ ಕ್ಷೇತ್ರದಲ್ಲಿ 1994ರ ಚುನಾವಣೆಯಲ್ಲಿ ರೈತ ಸಂಘದ ಮೂಲಕ ಮತ್ತು 2013ರ ಚುನಾವಣೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದಿಂದ ಗೆಲುವು ಕಂಡು ಶಾಸಕರಾಗಿದ್ದರು. 2018ರ ಫೆಬ್ರವರಿಯಲ್ಲಿ ಕೆ. ಎಸ್. ಪುಟ್ಟಣ್ಣಯ್ಯ ಹೃದಯಘಾತದಿಂದ ನಿಧನ ಹೊಂದಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+