ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಸ್ತಿಕ-ನಾಸ್ತಿಕರೆಲ್ಲರಿಗೂ ಮೆಚ್ಚುಗೆಯ ತಾಣ ಮೇಲುಕೋಟೆ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ಮಾರ್ಚ್ 25: ಬೆಟ್ಟದ ಮೇಲೆ ನೆಲೆ ನಿಂತ ಯೋಗನರಸಿಂಹ. ಅದರ ಕೆಳಭಾಗದಲ್ಲಿ ವಿಜೃಂಭಿಸುವ ಚೆಲುವನಾರಾಯಣನ ದೇಗುಲ. ಸ್ಫಟಿಕದಂತೆ ಹೊಳೆಯುವ ಸುಂದರ ಕಲ್ಯಾಣಿ. ಹಚ್ಚ ಹಸಿರಿನೊಂದಿಗೆ ಕಂಗೊಳಿಸುವ ನಿಸರ್ಗ.

ಇದು ದೇಗುಲಗಳ, ಕಲ್ಯಾಣಿ, ಮಠಗಳ ತಾಣವಾಗಿರುವ ಪೌರಾಣಿಕ ಮತ್ತು ಐತಿಹಾಸಿಕ ಮಹತ್ವ ಹೊಂದಿರುವ ಪ್ರವಾಸಿ ತಾಣ ಮೇಲುಕೋಟೆಗೆ ತೆರಳುವ ಪ್ರತಿಯೊಬ್ಬರನ್ನು ಆಕರ್ಷಿಸುವ ಸುಂದರ ದೃಶ್ಯಗಳಾಗಿವೆ. ಮೇಲುಕೋಟೆ ಆಸ್ತಿಕ-ನಾಸ್ತಿಕರೆನ್ನದೆ ಎಲ್ಲರನ್ನೂ ತನ್ನತ್ತ ಸೂಜಿಗಲ್ಲಿನಂತೆ ಸೆಳೆಯುವ ತಾಣವಾಗಿದ್ದು, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿಗೆ ಸೇರಿದೆ.

ಮಂಡ್ಯ; ಮೇಲುಕೋಟೆ ಚಲುವನಾರಾಯಣನಿಗೆ ಕಿರೀಟ ಧಾರಣೆ ಮಂಡ್ಯ; ಮೇಲುಕೋಟೆ ಚಲುವನಾರಾಯಣನಿಗೆ ಕಿರೀಟ ಧಾರಣೆ

ಮಂಡ್ಯದಿಂದ 28 ಕಿ. ಮೀ. ದೂರದಲ್ಲಿದ್ದು, ಸಮುದ್ರ ಮಟ್ಟದಿಂದ ಸುಮಾರು ಮೂರು ಸಾವಿರ ಅಡಿಯಷ್ಟು ಎತ್ತರದಲ್ಲಿದೆ. ಇದು ಭಾರತದಲ್ಲಿರುವ ಪವಿತ್ರ ಕ್ಷೇತ್ರಗಳ ಪೈಕಿ ಒಂದಾಗಿದ್ದು, ದಕ್ಷಿಣ ಭಾರತದ ಪ್ರಮುಖ ನಾಲ್ಕು ವೈಷ್ಣವ ಕ್ಷೇತ್ರ (ಶ್ರೀರಂಗ, ತಿರುಪತಿ, ಕಾಂಚೀಪುರ, ಮೇಲುಕೋಟೆ)ಗಳಲ್ಲಿ ಒಂದಾಗಿದೆ.

ತಿರುಪತಿ ಮಾದರಿಯಲ್ಲಿ ಮೇಲುಕೋಟೆ ಅಭಿವೃದ್ಧಿ ತಿರುಪತಿ ಮಾದರಿಯಲ್ಲಿ ಮೇಲುಕೋಟೆ ಅಭಿವೃದ್ಧಿ

ಮೆಲುಕೋಟೆಗೊಂದು ಸುತ್ತು ಹೊಡೆದರೆ ಇಲ್ಲಿ ಹಲವಾರು ದೇಗುಲಗಳು, ಕಲ್ಯಾಣಿಗಳು, ಕೆರೆಗಳು, ಮಠಗಳು ಇರುವುದನ್ನು ನಾವು ಕಾಣಬಹುದಾಗಿದೆ. ಮೇಲುಕೋಟೆಯಲ್ಲಿ ನಡೆಯುವ ವೈರಮುಡಿ ಬ್ರಹ್ಮೋತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗುತ್ತಾರೆ. ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳ ಭಕ್ತರು ಆಗಮಿಸುತ್ತಾರೆ.

7.30ಕ್ಕೆ ಬಾಗಿಲು ತೆರೆಯಲಿದೆ ಮೇಲುಕೋಟೆ ದೇವಾಲಯ 7.30ಕ್ಕೆ ಬಾಗಿಲು ತೆರೆಯಲಿದೆ ಮೇಲುಕೋಟೆ ದೇವಾಲಯ

ವಿಶಿಷ್ಟ ವಾಸ್ತುಶಿಲ್ಪದ ದೇಗುಲಗಳು

ವಿಶಿಷ್ಟ ವಾಸ್ತುಶಿಲ್ಪದ ದೇಗುಲಗಳು

ವಿಶಿಷ್ಟ ವಾಸ್ತುಶಿಲ್ಪದ ವಿಶಾಲವಾದ ಐತಿಹಾಸಿಕ ಪುರಾಣ ಪ್ರಸಿದ್ಧ ಶ್ರೀ ಚೆಲುವರಾಯಸ್ವಾಮಿ ದೇಗುಲ ಹಾಗೂ ಬೆಟ್ಟದ ಮೇಲೆ ನೆಲೆ ನಿಂತಿರುವ ಯೋಗನರಸಿಂಹ ದೇವಾಲಯದ ನಡುವೆ ಬದರಿ ನಾರಾಯಣ ದೇವಾಲಯ, ಪಟ್ಟಾಭಿರಾಮ ದೇವಾಲಯ, ಶಾಂಡಿಲ್ಯದ ಸನ್ನಿಧಿ, ಕುಲಶೇಖರ್ ಆಳ್ವಾರ್ ಸನ್ನಿಧಿ, ಜೀಯರ್ ಸನ್ನಿಧಿ, ವೇದಾಂತದೇಶಿಕರ ಸನ್ನಿಧಿ, ಕೇಶವ ದೇವರ ಸನ್ನಿಧಿ, ನಂಜೀಯರ್ ಸನ್ನಿಧಿ, ಮಾರಮ್ಮನ ಸನ್ನಿಧಿ, ಪೇಟೆ ಆಂಜನೇಯ ಸನ್ನಿಧಿ, ನಮ್ಮಾಳ್ವಾರ್ ಗುಡಿ, ತಿರುಮಂಗೈ ಆಳ್ವಾರ್ ಗುಡಿ, ಪೇಟೆ ಕೃಷ್ಣದೇವರ ಗುಡಿ, ಸೀತಾರಣ್ಯ ಕ್ಷೇತ್ರ, ಕರಣಿಕ ನಾರಾಯಣನ ಗುಡಿ, ವೆಂಕಟೇಶ್ವರ ಗುಡಿ, ಪರಕಾಲ ಮಠ, ಅಹೋಬಲ ನರಸಿಂಹ ಸ್ವಾಮಿ ಸನ್ನಿಧಿ, ಆದಿಶೇಷ ಸನ್ನಿಧಿ, ಪಂಚ ಭಾಗವತ ಕ್ಷೇತ್ರ ಸನ್ನಿಧಿ, ಪೇಯಾಳ್ವಾರ್ ಸನ್ನಿಧಿ, ವರಾಹ ದೇವಾಲಯ, ಬಿಂದು ಮಾಧವ ದೇವಾಲಯ, ಹನುಮಾನ್ ದೇವಾಲಯ, ಹಯಗ್ರೀವ ಸನ್ನಿಧಿ, ಲಕ್ಷ್ಮಿ ನಾರಾಯಣ ಸನ್ನಿಧಿ, ದತ್ತ ನಾರಾಯಣ ಗುಡಿ, ವರಸಿದ್ದಿ ವಿನಾಯಕ (ಏಕಶಿಲೆ ಗಣಪ), ಕೇಶವ (ನಯನಕ್ಷೇತ್ರ), ಶನೇಶ್ವರ ಗುಡಿ, ಕವಿಗಲ್ ಆಂಜನೇಯ ಗುಡಿ, ಕರಮೆಟ್ಟಿಲು ಆಂಜನೇಯ ಗುಡಿ, ಮೂಡ ಬಾಗಿಲು ಆಂಜನೇಯ ಗುಡಿ, ರಾಯರಗೋಪುರ ಆಂಜನೇಯ ಗುಡಿ, ಚೋಳರ ಬಂಡೆ, ಶ್ರೀನಿವಾಸ ದೇವಾಲಯ, ಸುಗ್ರೀವನ ಗುಡಿ, ಕಾಳಮ್ಮನ ಗುಡಿ, ಗರುಡ ದೇವರ ಗುಡಿ, ಆಂಜನೇಯ ಗುಡಿ(ಅಕ್ಕ ತಂಗಿಯರ ಹೊಂಡ), ಹೊರತಮ್ಮನ ದೇವಾಲಯ, ಶಿವನ ಗುಡಿ(ಉಳ್ಳಿಬಾವಿ) ಮೊದಲಾದ ದೇವಾಲಯಗಳು ಇಲ್ಲಿದ್ದು ದೇವರ ನಾಡೇನೋ ಎಂಬಂತೆ ಭಾಸವಾಗುತ್ತದೆ.

ಕಣ್ಮನ ಸೆಳೆಯುವ ಕಲ್ಯಾಣಿಗಳು

ಕಣ್ಮನ ಸೆಳೆಯುವ ಕಲ್ಯಾಣಿಗಳು

ಇನ್ನು ಇಲ್ಲಿರುವ ವಿಶಾಲ ಭವ್ಯ ಕಲ್ಯಾಣಿ, ತೆಪ್ಪಕೊಳ, ಅಕ್ಕತಂಗಿಕೊಳ(ಚಲುವರಸಿಯರ ಕೊಳ), ನಿಂಗಣ್ಣನ ಕಟ್ಟೆ, ನಕ್ಷತ್ರಕೊಳ, ವೃತ್ತಕೊಳ, ಬಸವರಾಜನಕೊಳ, ವೇದಪುಷ್ಕರಣಿ, ಚಿಕ್ಕಯ್ಯನಕೊಳ, ದರ್ಭತೀರ್ಥ, ಯಾದವತೀರ್ಥ, ಪಲಾಶ ತೀರ್ಥ, ಮೈತ್ರೇಯ ತೀರ್ಥ, ಪದ್ಮತೀರ್ಥ, ನಾರಾಯಣ ತೀರ್ಥ, ತೊಟ್ಟಿಲಮಡು, ಹಾಲುಕೊಲ, ಭಟ್ಟರಕೊಳ, ನರಸಿಂಹಮಡು(ಬೆಟ್ಟದಕೊಳ), ಅಜ್ಜನಕಟ್ಟೆ, ಅಕ್ಕತಂಗಿಕೊಳ(ಗಿರಿ ಪ್ರದಕ್ಷಿಣೆ), ಒಕ್ಕರಣೆ(ಪಂಚಬಾವಿ), ಒಂಭತ್ತು ಕಲ್ಲು ಬಾವಿ, ಹೊಸಬಾವಿ, ಛತ್ರಿಕೊಳ, ಸಂತೆಮಡು, ಗಣಪತಿ ಕಟ್ಟೆ, ಪುಟ್ಟನರಸೀಕೊಳ, ಸಿಹಿನೀರುಕೊಳ, ಕೆಳಗಿನ ಚಿಕ್ಕಯ್ಯನಕೊಳ ಮೊದಲಾದ ನೀರಿನಕೊಳಗಳು ಹಾಗೂ ದಳವಾಯಿ ಕೆರೆ, ಹೊಸಕೆರೆ, ಯಾದವ, ಹೆಬ್ಬಳ್ಳ ಕೆರೆಗಳು ಇಲ್ಲಿರುವುದು ವಿಶೇಷವಾಗಿದೆ.

ಗಮನಸೆಳೆಯುವ ಹಲವು ಮಠಗಳು

ಗಮನಸೆಳೆಯುವ ಹಲವು ಮಠಗಳು

ಇಷ್ಟೇ ಅಲ್ಲದೆ ಯತಿರಾಜ ಮಠ, ವಾನಮಾಮಲೈ ಮಠ, ಪರಕಾಲ ಮಠ, ಅಹೋಬಲ ಮಠ, ಆಂಡವನ್ ಆಶ್ರಮಂ, ಕಂಚಿವಾದ ಕೇಸರಿ ಆಳಹಿಯ ಮಣವಾದ ಮಠ, ತ್ರಿದಂಡಿ ಚಿನ್ನಜೀಯಾರ್ ಮಠ, ತಿರುಪತಿ ಪೆರಿಯ ಜೀಯಾರ್ ಮಠ, ಬೈರಾಗಿ ಮಠಗಳನ್ನು ಕಾಣಬಹುದಾಗಿದೆ.

ಇದರೊಂದಿಗೆ ಮೇಲುಕೋಟೆಯಲ್ಲಿ ಪ್ರೇಕ್ಷಣೀಯ ತಾಣಗಳಾಗಿ ಪ್ರವಾಸಿಗರನ್ನು ರಾಯಗೋಪುರ(ಪಟ್ಟಣದ ಬಾಗಿಲು), ನಯನಕ್ಷೇತ್ರ(ಗುಹಾಂತರ ದೇವಾಲಯ), ತಾಕ್ಷ್ರ್ಯ ಕ್ಷೇತ್ರ, ಏಕಶಿಲಾ ಗಣಪತಿ, ಅಕ್ಕತಂಗಿಯರ ಕೊಳ, ಭುವನೇಶ್ವರಿ ಮಂಟಪ, ದಳವಾಯಿಕೆರೆ, ಹೊಗರಮ್ಮನ ಗುಡಿ ಸೆಳೆಯುತ್ತದೆ.

Recommended Video

ವ್ಯಂಗ್ಯ ಭರಿತ ಕಿರು ನಾಟಕ ಪ್ರದರ್ಶಿಸಿ ಆರೋಗ್ಯ ಸಚಿವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ | Oneindia Kannada
ಪ್ರಮುಖ ಆಕರ್ಷಣೆ

ಪ್ರಮುಖ ಆಕರ್ಷಣೆ

ದಕ್ಷಿಣ ಭಾರತದಲ್ಲಿರುವ ಪ್ರಮುಖ ವೈಷ್ಣವ ಕ್ಷೇತ್ರಗಳಾದ ಶ್ರೀರಂಗ, ತಿರುಪತಿ, ಕಾಂಚೀಪುರದೊಂದಿಗೆ ಮೇಲುಕೋಟೆಯೂ ಸೇರಿದೆ. ಇಲ್ಲಿ ನಡೆಯುವ ವೈರಮುಡಿ ಬ್ರಹ್ಮೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಪೌರಾಣಿಕ ಮತ್ತು ಐತಿಹಾಸಿಕ ಮಹಿಮೆ ಹೊಂದಿರುವ ಮೇಲುಕೋಟೆಯಲ್ಲಿ ಹಲವು ಉತ್ಸವ, ಕಾರ್ಯಕ್ರಮಗಳು ವರ್ಷಪೂರ್ತಿ ನಡೆಯುತ್ತವೆ. ಆದರೆ, ಚೆಲುವರಾಯಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಪ್ರಮುಖವಾಗಿದೆ. ಈ ಉತ್ಸವದಲ್ಲಿ ವಜ್ರ ಖಚಿತ ಕಿರೀಟ ಅರ್ಥಾತ್ ವೈರಮುಡಿಯೇ ಪ್ರಮುಖ ಆಕರ್ಷಣೆ.

English summary
Melukote is not only famous for Cheluvanarayana swamy temple. Mandya district Pandavapura taluk Melukote is tourist place also.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X