• search
 • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾ.31ರಂದು ವೈರಮುಡಿ ಬ್ರಹ್ಮೋತ್ಸವ, ಸಿದ್ಧತೆ ಹೇಗೆ ಸಾಗಿದೆ?

|

ಮಂಡ್ಯ ಫೆ.11: ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದ್ದ ವಿಶ್ವ ವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವವು ಮಾ.19 ರಿಂದ ಪ್ರಾರಂಭಗೊಳ್ಳಲಿದೆ. ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ಶ್ರೀವೈರಮುಡಿ ಬ್ರಹ್ಮೋತ್ಸವ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆ ನಡೆಸಲಾಯಿತು.

ಮಾರ್ಚ್ 24ರಂದು ವೈರಮುಡಿ ಕಿರೀಟಧಾರಣಾ ಮಹೋತ್ಸವ, ಮಾ.31ರಂದು ವೈರಮುಡಿ ಬ್ರಹ್ಮೋತ್ಸವ ಜರುಗಲಿದೆ. ಈ ಉತ್ಸವಕ್ಕೆ ರಾಜ್ಯ ನಾನಾ ಕಡೆಗಳಿಂದ ಆಗಮಿಸುವ ಭಕ್ತರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ಡಾ.ಎಂ ವಿ ವೆಂಕಟೇಶ್ ತಿಳಿಸಿದರು.

ವೈರಮುಡಿ ನಾರಾಯಣನ ವಜ್ರಖಚಿತ ಕಿರೀಟ

ಸಭೆಯಲ್ಲಿ ಮಾತನಾಡಿದ ವೆಂಕಟೇಶ್, ಶ್ರೀಕ್ಷೇತ್ರದಲ್ಲಿ ಕುಡಿಯುವ ನೀರು ಸರಬರಾಜು ಮಾಡುವುದು ಹಾಗೂ ಅಗತ್ಯ ಮೂಲ ಸೌಕರ್ಯದ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವೈರಮುಡಿ ಉತ್ಸವಕ್ಕೆ ರಾಜ್ಯ ಮತ್ತು ಹೊರರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಶುದ್ಧವಾದ ಕುಡಿಯುವ ನೀರು, ಸ್ವಚ್ಛತೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ, ಆಂಬ್ಯುಲೆನ್ಸ್ ವ್ಯವಸ್ಥೆ ಹಾಗೂ ಶಾಂತಿ ಸುವ್ಯವಸ್ಥೆ ಪಾಲನೆ ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳು ಕಾಳಜಿವಹಿಸಬೇಕು,'' ಎಂದು ಸೂಚನೆ ನೀಡಿದರು.

''ದೇವಾಲಯಕ್ಕೆ ವಿಶೇಷ ದೀಪಾಲಂಕಾರ, ವ್ಯವಸ್ಥಿತ ಸಂಚಾರ ಮತ್ತು ವಾಹನ ನಿಲುಗಡೆ ವ್ಯವಸ್ಥೆ, ಉತ್ಸವ ಪೂರ್ತಿ ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆ, ಮುಖ್ಯ ರಸ್ತೆಗಳ ದುರಸ್ತಿ, ಬ್ರಹ್ಮೋತ್ಸವಕ್ಕೆ ಆಗಮಿಸುವವರಿಗೆ ಸೂಕ್ತವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿ ಎಂದು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ದೇವಾಲಯದ ರಥದ ದುರಸ್ತಿ, ದೇವಾಲಯದ ಪ್ರಾಂಗಣ ಹಾಗೂ ಕಲ್ಯಾಣಿಗಳನ್ನು ಸ್ವಚ್ಛಗೊಳಿಸಬೇಕು,'' ಎಂದರು.

ಮೇಲುಕೋಟೆಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಸ್ವಚ್ಛತೆ ಕಾಪಾಡಲು ಅಲ್ಲಲ್ಲಿ ಕಸದಬುಟ್ಟಿಗಳನ್ನು ನಿರ್ಮಿಸಬೇಕು. ಬ್ಯಾರಿಗೇಟ್ ಗಳನ್ನು ನಿರ್ಮಿಸಿ ಸುಗಮ ಸಂಚಾರ ವ್ಯವಸ್ಥೆ ಮಾಡಿಕೊಡಬೇಕು. ಅಗತ್ಯವಿದ್ದರೆ ಕೆಲವು ಕಡೆ ಏಕ ಸಂಚಾರ ವ್ಯವಸ್ಥೆ ಕಲ್ಪಿಸಬೇಕು. ಗಣ್ಯರು ಉಳಿದುಕೊಳ್ಳಲು ವಸತಿ ವ್ಯವಸ್ಥೆ ಮಾಡಬೇಕು ಎಂದು ವಿವರಿಸಿದರು.

ಮೇಲುಕೋಟೆ ಶಾಸಕರಾದ ಸಿ.ಎಸ್ ಪುಟ್ಟರಾಜು ಮಾತನಾಡಿ, ಮುಖ್ಯವಾಗಿ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು. ಆದ್ದರಿಂದ ಕನಿಷ್ಟ ಮೂರ ರಿಂದ ನಾಲ್ಕು ಕಡೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಎಂದರು.

   ಯಡಿಯೂರಪ್ಪ ಅವರು ಒಂದು ಪಕ್ಷಕ್ಕೆ ಕೆಲ್ಸಾ ಮಾಡ್ತಿಲ್ಲ! | Oneindia Kannada

   ಯೋಗನರಸಿಂಹ ಸ್ವಾಮಿ ದೇವಸ್ಥಾನದ ಬೆಟ್ಟದ ಕೆಳೆಗೆ ಸೇರಿದಂತೆ ಐದು ಕಡೆ ಶೌಚಾಲಯ ಗೃಹಗಳನ್ನು ನಿರ್ಮಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬೆಟ್ಟಕ್ಕೆ ಮೇಲಿನ ಯೋಗನರಸಿಂಹ ದೇವಸ್ಥಾನ, ಚಲುವನಾರಾಯಣಸ್ವಾಮಿ ದೇವಾಸ್ಥಾನ ಸೇರಿದಂತೆ ಗ್ರಾಮದ ಪ್ರತಿ ಬೀದಿ ಬೀದಿಗಳನ್ನು ದೀಪಾಲಂಕಾರದ ವ್ಯವಸ್ಥೆ ಮಾಡಬೇಕು. ವಿಶೇಷವಾಗಿ ಯೋಗನರಸಿಂಹ ಸ್ವಾಮಿ ಬೆಟ್ಟಕ್ಕೆ ವಿಶೇಷ ದೀಪಾಂಕಾರ ಮಾಡಬೇಕು ಎಂದು ಹೇಳಿದರು.

   ಸಭೆಯಲ್ಲಿ ಪಾಂಡವಪುರದ ಉಪವಿಭಾಗಾಧಿಕಾರಿಗಳಾದ ಶಿವಾನಂದಮೂರ್ತಿರವರು, ಅಪರ ಪೊಲೀಸ್ ವರಿಷ್ಠಾಧಿಕಾರಿ ಧನಂಜಯರವರು. ಪಾಂಡವಪುರ ತಹಶೀಲ್ದಾರ್ ಪ್ರಮೋದ ಪಾಟೀಲ್ ರವರು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಚೇಗೌಡರವರು, ವಾರ್ತಾಧಿಕಾರಿ ಟಿ.ಕೆ ಹರೀಶ್ ರವರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

   English summary
   Melukote Vairamudi Brahmotsava Prepration review meeting held in presence of MLA C.S Puttaraju and DC Dr MV Venkatesh.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X