ಮೇಲುಕೋಟೆ: ರೈತ ಸಂಘದ ಮುಖಂಡ ದರ್ಶನ್ ಪುಟ್ಟಣ್ಣಯ್ಯಗೆ ಆಪತ್ತು ತಂದ ನವಿಲು ಗರಿ ಹಾರ
ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿರುವ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯಗೆ ಬಂಧನದ ಭೀತಿ ಶುರುವಾಗಿದೆ.
ಮಂಡ್ಯ, ಮಾರ್ಚ್, 14: ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿರುವ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಬಂಧನದ ಭೀತಿ ಶುರುವಾಗಿದೆ.
ಕ್ಷೇತ್ರದಾದ್ಯಂತ ಪಾದಯಾತ್ರೆ ಮಾಡುತ್ತಿರುವ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಪಾಂಡವಪುರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅವರ ಅಭಿಮಾನಿಯೊಬ್ಬರು ಬೃಹತ್ ನವಿ ಲುಗರಿಯ ಹಾರವನ್ನು ಹಾಕಿದ್ದರು. ಇದೇ ಕಾರಣಕ್ಕೆ ದರ್ಶನ್ ಹಾಗೂ ಅವರ ಅಭಿಮಾನಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ
ಭರವಸೆಯ ಯಾನದ ಹೆಸರಿನಲ್ಲಿ ಪಾದಯಾತ್ರೆ ವೇಳೆ ಸ್ಥಳೀಯ ಹಳ್ಳಿಗಳಲ್ಲೇ ರಾತ್ರಿ ದರ್ಶನ್ ಪುಟ್ಟಣ್ಣಯ್ಯ ವಾಸ್ತವ್ಯ ಹೂಡುತ್ತಿದ್ದರು. ಈ ವೇಳೆ ಅವರ ಅಭಿಮಾನಿಯೊಬ್ಬರು ಬೃಹತ್ ನವಿಲುಗರಿಯ ಹಾರವನ್ನು ತಂದು ಹಾಕಿದ್ದರು. ಅವರು ಅಭಿಮಾನಿಯಿಂದ ಸಂತೋಷದಿಂದಲೇ ನವಿಲುಗರಿ ಹಾರವನ್ನು ಹಾಕಿಸಿಕೊಂಡಿದ್ದರು. ಆದರೆ ಇದೀಗ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದರ್ಶನ್ ಪುಟ್ಟಣ್ಣಯ್ಯ ಹಾಗೂ ಅವರ ಬೆಂಬಲಿಗನಿಗೂ ಬಂಧನದ ಭೀತಿ ಎದುರಾಗಿದೆ.
ದರ್ಶನ್ ಪಟ್ಟಣ್ಣಯ್ಯನವರು ಚುನಾವಣೆಗಾಗಿ ಇತ್ತೀಚೆಗೆ ಅಮೆರಿಕಾದಿಂದ ವಾಪಸ್ಸಾಗಿದ್ದರು. ಇದೀಗ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ಯು/ಎಸ್, 51, 1973, ಕಲಂ 3, 2, 5(ಇ) ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ ಅವರಿಗೆ ಭೀತಿ ಎದುರಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ದರ್ಶನ್‌ಗೆ ಟಿಕೆಟ್ ಕೊಡುವಂತೆ ಒತ್ತಾಯ
ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಇಂದು ಧ್ರುವನಾರಾಯಣ ಅಂತ್ಯಕ್ರಿಯೆ ನಡೆಯುವ ವೇಳೆ ಅಭಿಮಾನಿಗಳು ದೊಡ್ಡ ಹೈಡ್ರಾಮವನ್ನೇ ಸೃಷ್ಟಿ ಮಾಡಿದ್ದರು. ಧ್ರುವನಾರಾಯಣ ಅವರ ಹಿರಿಯ ಪುತ್ರ ದರ್ಶನ್ ಅವರಿಗೆ ನಂಜನಗೂಡು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೊಡಬೇಕೆಂದು ಘೋಷಣೆಗಳನ್ನು ಕೂಗಿದ್ದರು.
ಧ್ರುವನಾರಾಯಣ ಅವರ ಟಿಕೆಟ್ ಅನ್ನು ಅವರ ಮಗನಿಗೆ ಕೊಡಬೇಕೆಂದು ಅಭಿಮಾನಿಗಳು ಅರ್ಧ ತಾಸಿಗಿಂತಲೂ ಹೆಚ್ಚು ಕಾಲ ಘೋಷಣೆ ಕೂಗಿದ್ದರು. ಈ ವೇಳೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಅಭಿಮಾನಿಗಳಿಗೆ ಕೈ ಮುಗಿದು ಸಮಾಧಾನದಿಂದ ಇರುವಂತೆ ಮನವಿ ಮಾಡಿದರು. ಆದರೂ ಸುಮ್ಮನಾಗದ ಕಾರ್ಯಕರ್ತರು ಟಿಕೆಟ್‌ಗೆ ಒತ್ತಾಯಿಸಿ ಘೋಷಣೆ ಕೂಗಿದ್ದರು. ಅಂತ್ಯಕ್ರಿಯೆ ವೇಳೆಯೂ ದರ್ಶನ್ ಮುಂದಿನ ಎಂಎಲ್ಎ ಆಗಬೇಕು ಎಂದು ಘೋಷಣೆಗಳನ್ನು ಕೂಗಿದ್ದರು.












Click it and Unblock the Notifications