• search
 • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎಲ್ಲ ದೇಗುಲಗಳಲ್ಲಿ ಪ್ರತಿ ತಿಂಗಳು ಹುಂಡಿ ತೆಗೆಯಲು ಮುಜರಾಯಿ ಸಚಿವರ ಸೂಚನೆ

By ಮಂಡ್ಯ ಪ್ರತಿನಿಧಿ
|

ಮಂಡ್ಯ, ಸೆಪ್ಟೆಂಬರ್ 12: ಮಂಡ್ಯದ ಗುತ್ತಲಿನ ಅರ್ಕೇಶ್ವರ ದೇವಸ್ಥಾನದಲ್ಲಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣ ನಿನ್ನೆ ನಡೆದಿದ್ದ ಹಿನ್ನೆಲೆಯಲ್ಲಿ ಇಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ದೇವಸ್ಥಾನವನ್ನು ವೀಕ್ಷಣೆ ಮಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಪರಶುರಾಮ್ ಅವರ ಬಳಿ ಮಾಹಿತಿ ಕಲೆ ಹಾಕಿದರು. ಕೊಲೆ ಮಾಡಿದವರನ್ನು ಶೀಘ್ರ ಪತ್ತೆ ಹಚ್ಚುವಂತೆ ಸೂಚನೆ ನೀಡಿದರು.

ಮಂಡ್ಯ ತ್ರಿವಳಿ ಕೊಲೆ; ಅನುಮಾನ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್

ನಂತರ ಮಾತನಾಡಿದ ಅವರು, "ನಿನ್ನೆ ಮಂಡ್ಯದ ದೇವಸ್ಥಾನದಲ್ಲಿ ನಡೆದ ಈ ಬರ್ಬರ ಹತ್ಯೆ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು. ಮುಜರಾಯಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಲು ಮುಜರಾಯಿ ಇಲಾಖೆಯ ಆಯುಕ್ತರಿಗೆ ತಿಳಿಸಿದ್ದೇನೆ. ಇನ್ನು ಮುಂದೆ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಪ್ರತಿ ತಿಂಗಳು ಹುಂಡಿ ತೆಗೆಯಬೇಕು" ಎಂದು ಆದೇಶಿಸಿದರು.

   HD kumaraswamy : ನಾವು ಬೇರೆಯವರ ತರ ಕದ್ದು ಮುಚ್ಚಿ ಕೊಲಂಬೊ ಹೋಗಿರ್ಲಿಲ್ಲ | Oneindia Kannada

   ಕೊಲೆಯಾದ ಮೂವರ ಕುಟುಂಬಕ್ಕೆ ಸಾಂತ್ವನ ಹೇಳಿ, ತಲಾ ಐದು ಲಕ್ಷ ರೂಪಾಯಿ ಚೆಕ್ ವಿತರಣೆ ಮಾಡಿದರು. ಸಚಿವ ನಾರಾಯಣಗೌಡ ಹಾಗೂ ಮುಜರಾಯಿ ಆಯುಕ್ತೆ ರೋಹಿಣಿ ಸಿಂಧೂರಿ ಅವರೂ ಸಚಿವರ ಜೊತೆಗಿದ್ದರು.

   English summary
   Muzarai minister kota srinivas pujari visited mandya arakeshwara temple and insisted to open temple hundi's everymonth following to avoid crime,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X