• search
  • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ಒಂದು ಶುಗರ್ ಫ್ಯಾಕ್ಟರಿ ನಡೆಸೋಕೆ ಆಗದಷ್ಟು ಸರ್ಕಾರ ದಿವಾಳಿಯಾಗಿದೆಯಾ''

|
Google Oneindia Kannada News

ಮಂಡ್ಯ, ಜೂನ್ 7: ಒಂದು ಶುಗರ್ ಫ್ಯಾಕ್ಟರಿ ನಡೆಸೋಕೆ ಆಗದಷ್ಟು ಸರ್ಕಾರ ದಿವಾಳಿಯಾಗಿದೆಯಾ ಎಂಬ ಪ್ರಶ್ನೆ ಮೂಡುತ್ತಿದೆ. ಸಿಎಂ ಭರವಸೆ ಕೊಟ್ಟಿರುವಂತೆ ಮೈಶುಗರ್ ಅನ್ನು ಸರ್ಕಾರವೇ ನಡೆಸಬೇಕು, ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಶಾಸಕ ಕೆ.ಸುರೇಶ್ ಗೌಡ ಎಚ್ಚರಿಸಿದ್ದಾರೆ.

ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಸುರೇಶ್ ಗೌಡ ಮಾತನಾಡಿ, ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಖಾಸಗಿಗೆ ನೀಡಿರುವುದರ ಹಿಂದೆ ಅನುಮಾನ ಮೂಡಿಸುತ್ತಿದೆ. ಬಿಜೆಪಿ ಪಕ್ಷದ ಬಂಡಾಯ ಶಮನ ಮಾಡಲು ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ನೀಡಲಾಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ನಿರಾಣಿಗೆ ಮೈಶುಗರ್ ಮಾರಾಟಕ್ಕೆ ಡಿಕೆಶಿ, ಸಿದ್ದರಾಮಯ್ಯ ತೀವ್ರ ವಿರೋಧ ಯಾಕೆ?ನಿರಾಣಿಗೆ ಮೈಶುಗರ್ ಮಾರಾಟಕ್ಕೆ ಡಿಕೆಶಿ, ಸಿದ್ದರಾಮಯ್ಯ ತೀವ್ರ ವಿರೋಧ ಯಾಕೆ?

ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ನಿರಾಣಿ ಗ್ರೂಪ್ ಗೆ ನೀಡಿರುವುದು ಬಿಜೆಪಿಯಲ್ಲಿನ ಬಂಡಾಯ ಶಮನ ಮಾಡಲು ಎಂಬಂತಿದೆ. ಮೈಶುಗರ್ ಕಾರ್ಖಾನೆಯನ್ನು ಖಾಸಗಿಗೆ ನೀಡದೆ ಶೀಘ್ರವೇ ಸರ್ಕಾರಿ ಸ್ವಾಮ್ಯದಲ್ಲಿ ಆರಂಭಿಸಬೇಕೆಂದು ಒತ್ತಾಯಿಸಿದರು.

Mandya: MLA K Suresh Gowda React About My Sugar Factory Privatization

ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ""ನಾನು ಮಂಡ್ಯ ಜಿಲ್ಲೆಯ ಮಗ, ಯಾವುದೇ ಕಾರಣಕ್ಕೂ ಮೈಶುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದಿಲ್ಲ'' ಎಂದು ನಮಗೆ ಭರವಸೆ ನೀಡಿದ್ದಾರೆ. ಅದರಂತೆ ನಡೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಶಾಸಕ ಕೆ. ಸುರೇಶ್ ಗೌಡ ಎಚ್ಚರಿಕೆ ನೀಡಿದರು.

English summary
My Sugar Factory should be run by the government as CM has promised, MLA K.Suresh Gowda has warned.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X