ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊನೆಗೂ ಜೆಡಿಎಸ್ ಗೆ ಗುಡ್ ಬೈ ಹೇಳಿದ ಬಂಡಾಯ ಶಾಸಕರು

|
Google Oneindia Kannada News

Recommended Video

Karnataka Elections 2018 : ಜೆಡಿಎಸ್ ಶಾಸಕ ರಮೇಶ್ ಬಂಡ ಸಿದ್ದೇಗೌಡ ರಾಜೀನಾಮೆ | Oneindia Kannada

ಮಂಡ್ಯ, ಮಾರ್ಚ್ 23 : ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ರಮೇಶ್ ಬಂಡಿಸಿದ್ದೇಗೌಡ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ.

ಜೆಡಿಎಸ್‌ ಬಂಡಾಯ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ರಮೇಶ್ ಬಂಡಿಸಿದ್ದೇಗೌಡ ಅವರು ಶುಕ್ರವಾರ ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ರಾಜೀನಾಮೆ ಸಲ್ಲಿಸಿದರು.

ದೇವೇಗೌಡರ ಟಾರ್ಗೆಟ್ ಕ್ಷೇತ್ರ ಶ್ರೀರಂಗಪಟ್ಟಣ!ದೇವೇಗೌಡರ ಟಾರ್ಗೆಟ್ ಕ್ಷೇತ್ರ ಶ್ರೀರಂಗಪಟ್ಟಣ!

2016ರ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ವಿಪ್ ಉಲ್ಲಂಘನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ್ದ ರಮೇಶ್ ಬಂಡಿಸಿದ್ದೇಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು.

Ramesh Bandi Siddegowda

ಇಂದು ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯಿತು. ವಿಧಾನಸೌಧದಲ್ಲಿ ಮತದಾನ ಮಾಡಿದ ಬಳಿಕ ರಮೇಶ್ ಬಂಡಿಸಿದ್ದೇಗೌಡ ಅವರು ಸ್ಪೀಕರ್ ಕೆ.ಬಿ.ಕೋಳಿವಾಡ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದರು. ಸ್ಫೀಕರ್ ರಾಜೀನಾಮೆಯನ್ನು ಅಂಗೀಕರಿಸಿದರು.

ಮಂಡ್ಯ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯಮಂಡ್ಯ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ. ಬೃಹತ್ ಸಮಾವೇಶ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಈ ಸಮಾವೇಶದಲ್ಲಿಯೇ ರಮೇಶ್ ಬಂಡಿಸಿದ್ದೇಗೌಡ ಅವರು ಕಾಂಗ್ರೆಸ್ ಸೇರಲಿದ್ದಾರೆ.

2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಅವರು ಶ್ರೀರಂಗಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 55,204 ಮತಗಳನ್ನು ಪಡೆದು ಜಯಗಳಿಸಿದ್ದರು.

ಕಾಂಗ್ರೆಸ್ ಪಕ್ಷ ಸೇರಲಿರುವ ಅವರು ಶ್ರೀರಂಗಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ 2018ರ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಜೆಡಿಎಸ್‌ ಪಕ್ಷ ಕ್ಷೇತ್ರಕ್ಕೆ ರವೀಂದ್ರ ಶ್ರೀಕಂಠಯ್ಯ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

English summary
Srirangapatna MLA Ramesh Bandi Siddegowda tendered his resignation from his post in the Legislative Assembly on Friday. Ramesh Bandi Siddegowda suspend from JD(S) for voting Congress candidate in 2016 Rajya Sabha election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X