ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳು ಗಡಿಪಾರು: ಬಿಗ್‌ ಅಪ್‌ಡೇಟ್‌ ಕೊಟ್ಟ ಸಿದ್ದರಾಮಯ್ಯ

ಮಂಡ್ಯ, ಮೇ 08: ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ಬಿಜೆಪಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳನ್ನ ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ, ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು(ಗುರುವಾರ) ಮಂಡ್ಯ ಜಿಲ್ಲೆಯ ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮವದರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Most of the Pakistani nationals from the state have fled the border Siddaramaiah

ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದ ಅವರು, ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಮಾಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+