• search
 • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಡ್ಯದಲ್ಲಿ ಟಿಪ್ಪರ್ ಹರಿದು ತಾಯಿ-ಮಗು ಸಾವು

By ಮೈಸೂರು ಪ್ರತಿನಿಧಿ
|

ಮಂಡ್ಯ, ಸೆಪ್ಟೆಂಬರ್ 21: ಟಿಪ್ಪರ್ ಲಾರಿಯೊಂದು ಹರಿದು ತಾಯಿ, ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಮೃತಪಟ್ಟ ತಾಯಿ-ಮಗುವನ್ನು ಹಾಡ್ಯ ಗ್ರಾಮದ ಶಶಿಕಲಾ (35), ಲಾವಣ್ಯ (4) ಎಂದು ಗುರುತಿಸಲಾಗಿದೆ. ಪತಿ ದೇವರಾಜು (45) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಡ್ಯ ಗ್ರಾಮದ ದೇವರಾಜು ಅವರು ಇಂದು ಬೆಳಿಗ್ಗೆ ಅನಾರೋಗ್ಯದ ನಿಮಿತ್ತ ಮಗಳಿಗೆ ಚಿಕಿತ್ಸೆ ಕೊಡಿಸಲು ತಮ್ಮ ಸ್ಕೂಟರ್ ನಲ್ಲಿ ಹೆಂಡತಿಯೊಂದಿಗೆ ಆಸ್ಪತ್ರೆಗೆ ಹೋಗಿದ್ದರು.

ಮಗುವಿಗೆ ಚಿಕಿತ್ಸೆ ಕೊಡಿಸಿ ವಾಪಸ್ ಊರಿಗೆ ತೆರಳುವ ಮಾರ್ಗ ಮಧ್ಯೆ ಹೊಳಲು ಗ್ರಾಮದ ಸರ್ಕಲ್‌ನಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಸ್ಕೂಟರ್ ಗೆ ಡಿಕ್ಕಿಯೊಡೆದಿದೆ. ಕೆಳಗೆ ಬಿದ್ದ ತಾಯಿ, ಮಗು ಮೇಲೆ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದೇವರಾಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

   Bangalore ಇನ್ನೂ ಕೆಲವು ದಿನ ಮಳೆ ಮುಂದುವರೆಯಲಿದೆ | Oneindia Kannada

   ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆಂಬುಲೆನ್ಸ್ ನಲ್ಲಿ ಶವಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   English summary
   A mother and child were Died In Bike Accident on Monday afternoon in the Holalu village of Mandya Taluk.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X