ಬಿಜೆಪಿ ಅಭ್ಯರ್ಥಿಗಳಿಗೆ ಸಂಸದೆ ಸುಮಲತಾ ಬೆಂಬಲ..!
Recommended Video
ಮಂಡ್ಯ, ನವೆಂಬರ್ 17: ರಾಜ್ಯದಲ್ಲಿ ಡಿಸೆಂಬರ್ 05 ರಂದು ನಡೆಯಲಿರುವ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ರವರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ ಎಂದು ತಿಳಿದು ಬಂದಿದೆ. ಲೋಕಸಬಾ ಚುನಾವಣೆಯಲ್ಲಿ ಸುಮಲತಾಗೆ ಭಾರತೀಯ ಜನತಾ ಪಾರ್ಟಿ ತನ್ನ ಅಭ್ಯರ್ಥಿ ಹಾಕದೇ ಸಂಪೂರ್ಣ ಬೆಂಬಲ ನೀಡಿತ್ತು. ಹಾಗಾಗಿ ಈ ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆ ಹಾಗೂ ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯಥಿಗಳಿಗೆ ಸಪೋರ್ಟ್ ಮಾಡಲಿದ್ದಾರೆ.
ಸುಮಲತಾಗೆ ಸ್ವತಃ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆನ್ನಲಾಗಿದೆ. ಈಗಾಗಲೇ ಸಿಎಂ ಜೊತೆ ಮಾತುಕತೆ ನಡೆಸಿರುವ ಸುಮಲತಾ 2 ಕ್ಷೇತ್ರಗಳಲ್ಲಿ ಬಿಜೆಪಿ ಪರ ಕೆಲಸ ಮಾಡಲು ಒಲವು ತೋರಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅನುದಾನ ಕೊಡಲು ಮುಖ್ಯಮಂತ್ರಿ ಸಮ್ಮತಿಸಿದ್ದಾರೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವಿಗೆ ಶ್ರಮಿಸಿದ್ದ ಮಂಡ್ಯ ಹಿರಿಯ ಮುಖಂಡ ಹಾಗೂ ಬೆಂಬಲಿಗ ಸಚ್ಚಿದಾನಂದ್ ಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಯಡಿಯೂರಪ್ಪ ಭರವಸೆ ಕೊಟ್ಟಿದ್ದಾರೆ.












Click it and Unblock the Notifications