PM Modi Mandya Visit : ಮಾರ್ಚ್‌ 12ರಂದು ಮಂಡ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಕಾರ್ಯಕ್ರಮಕ್ಕೆ ಸಿದ್ಧತೆ ಹೇಗಿದೆ?

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಗಾಗಿ ಮಾರ್ಚ್‌ 12ರಂದು ಪ್ರಧಾನಿ ನರೇಂದ್ರಮೋದಿ ಅವರು ಆಗಮಿಸುತ್ತಿದ್ದು, ಕಾರ್ಯಕ್ರಮಕ್ಕಾಗಿ ಅಗತ್ಯ ಸಿದ್ಧತೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಎಚ್.ಎನ್. ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಡ್ಯ, ಮಾರ್ಚ್‌, 05: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆಗಾಗಿ ಮಾರ್ಚ್‌ 12ರಂದು ಪ್ರಧಾನಿ ನರೇಂದ್ರಮೋದಿ ಅವರು ಆಗಮಿಸುತ್ತಿದ್ದು, ಕಾರ್ಯಕ್ರಮಕ್ಕಾಗಿ ಅಗತ್ಯ ಸಿದ್ಧತೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಎಚ್.ಎನ್. ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಯಾವುದೇ ಲೋಪ ಉಂಟಾಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದರು. ಪ್ರಧಾನ ಮಂತ್ರಿಗಳು ಮಂಡ್ಯ ಜಿಲ್ಲೆಯಲ್ಲಿ ರೋಡ್ ಶೋ, ದಶಪಥ ರಸ್ತೆಯ ಒಂದು ಭಾಗದಲ್ಲಿ ರಸ್ತೆಯ ಸಂಕೇತಿಕ ಉದ್ಘಾಟನೆ ಹಾಗೂ ಗೆಜ್ಜಲಗೆರೆ ಕಾಲೋನಿಯಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

Narendra Modi will be arrive to Mandya on March 12th, how is preparations for program

ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗಿ ಸಾಧ್ಯತೆ

ವೇದಿಕೆ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ವಾಹನ ನಿಲುಗಡೆ, ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯದ ವ್ಯವಸ್ಥೆಗಳಾಗಬೇಕು. ರೋಡ್ ಶೋಗೆ ಉತ್ತಮವಾಗಿ ಬ್ಯಾರಿಕ್ಯಾಡಿಂಗ್ ವ್ಯವಸ್ಥೆಯಾಗಬೇಕು. ನಾಡಗೀತೆ, ರಾಷ್ಟ್ರಗೀತೆಗಳನ್ನು ಹಾಡಲು ನುರಿತ ಕಲಾವಿದರನ್ನು ಆಯ್ಕೆ ಮಾಡಿ ತರಬೇತಿ ನೀಡಬೇಕು. ದಶಪಥ ರಸ್ತೆಯ ಸಾಂಕೇತಿಕ ಉದ್ಘಾಟನಾ ಸ್ಥಳದಲ್ಲಿ ವಿವಿಧ ಕಲಾತಂಡಗಳ ಪ್ರದರ್ಶನ ಆಯೋಜಿಸಬೇಕು ಎದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್. ಹುಲ್ಮನಿ , ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್ ನಾಗರಾಜು, ಎನ್.ಹೆಚ್.ಎ.ಐ ಯೋಜನಾ ನಿರ್ದೇಶಕ ಶ್ರೀಧರ್, ಉಪವಿಭಾಗಾಧಿಕಾರಿ ಕೀರ್ತನಾ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾ. 12ಕ್ಕೆ ರಾಜ್ಯಕ್ಕೆ ಆಗಮಿಸಲಿರುವ ಮೋದಿ

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ರಾಷ್ಟ್ರೀಯ ನಾಯಕರ ರಾಜ್ಯ ಭೇಟಿ, ಸಮಾವೇಶ, ರೋಡ್ ಶೋ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 12ರಂದು ಮತ್ತೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈಗಾಗಲೇ ಹುಬ್ಬಳ್ಳಿ, ಬೆಳಗಾವಿಯಲ್ಲಿ ರೋಡ್ ಶೋ ನಡೆಸಿರುವ ಮೋದಿ ಮಂಡ್ಯದಲ್ಲಿಯೂ ರೋಡ್ ಶೋ ಮಾಡಲಿದ್ದಾರೆ. ಆ ಮೂಲಕ ಹಳೆ ಮೈಸೂರು ಭಾಗದ ಮತಗಳನ್ನು ಪಕ್ಷಕ್ಕೆ ಸೆಳೆಯಲಿದ್ದಾರೆ.

Narendra Modi will be arrive to Mandya on March 12th, how is preparations for program

ಮಂಡ್ಯ ಜಿಲ್ಲಾಧಿಕಾರಿ ಡಾ. ಹೆಚ್. ಎನ್. ಗೋಪಾಲಕೃಷ್ಣ ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಭೇಟಿ ಬಗ್ಗೆ ಮಾಹಿತಿ ನೀಡಿದ್ದಾರೆ. ಮೋದಿ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಯಾವುದೇ ಲೋಪ ಉಂಟಾಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+