ಮಂಡ್ಯದಿಂದ ಸ್ಪರ್ಧಿಸುವ ಕುರಿತು ಮೌನ ಮುರಿದ ನಿಖಿಲ್ ಕುಮಾರಸ್ವಾಮಿ
ಮಂಡ್ಯ, ಅಕ್ಟೋಬರ್ 04 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ 2019ರ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ?. ಹಲವು ದಿನಗಳಿಂದ ಈ ಕುರಿತು ಚರ್ಚೆಗಳು ನಡೆಯುತ್ತಿವೆ.
ಗುರುವಾರ ನಿಖಿಲ್ ಕುಮಾರಸ್ವಾಮಿ ಮಂಡ್ಯಕ್ಕೆ ಭೇಟಿ ನೀಡಿದ್ದರು ಈ ಸಂದರ್ಭದಲ್ಲಿ ಅವರು ಈ ಕುರಿತು ಮೌನ ಮುರಿದು ಮಾತನಾಡಿದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ರಾಜಕೀಯ ನನ್ನ ಕಣದಲ್ಲಿ ಬಂದಿದೆ. ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರ ಒತ್ತಡವಿದೆ' ಎಂದರು.
'ಅನಿವಾರ್ಯವಾದರೆ ಮಂಡ್ಯದಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಒಂದು ವೇಳೆ ಚುನಾವಣೆಗೆ ಸ್ಪರ್ಧೆ ಮಾಡಿದರೆ ಸಿನಿಮಾ, ರಾಜಕಾರಣ ಎರಡನ್ನೂ ನೋಡಿಕೊಂಡು ಹೋಗುತ್ತೇನೆ' ಎಂದು ಹೇಳಿದರು.

'ಮಂಡ್ಯದಿಂದ ಪ್ರಜ್ವಲ್ ರೇವಣ್ಣ, ನಿಖಿಲ್ ಯಾರು ಸ್ಪರ್ಧೆ ಮಾಡಬೇಕು ಎಂಬ ಬಗ್ಗೆ ನಮ್ಮ ತಂದೆ ಹಾಗೂ ಜೆಡಿಎಸ್ ಪಕ್ಷ ತೀರ್ಮಾನ ತೆಗೆದುಕೊಳ್ಳಬೇಕು. ಪಕ್ಷದ ನಾಯಕರ ತೀರ್ಮಾನ, ಕಾರ್ಯಕರ್ತರ ಸಲಹೆಗೆ ನಾನು ಬದ್ಧನಾಗಿರುತ್ತೇನೆ' ಎಂದು ತಿಳಿಸಿದರು.
'ಮಂಡ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾದಲ್ಲಿ ಮೃತಪಟ್ಟ ಕುಟುಂಬದವನ್ನು ಭೇಟಿಯಾಗಲು ಕುಮಾರಸ್ವಾಮಿ ಅವರು ಬರಬೇಕಿತ್ತು. ಆದರೆ, ಕೆಲಸದ ಒತ್ತಡದಿಂದಾಗಿ ಬರಲಾಗಲಿಲ್ಲ. ಆದ್ದರಿಂದ, ನಾನು ಬಂದಿದ್ದೇನೆ. ಕುಟುಂಬದವರಿಗೆ ಸಾಂತ್ವನ ಹೇಳಿದ್ದೇನೆ' ಎಂದರು.
ಮಂಡ್ಯದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಕಳೆದ ವಾರದಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹಬ್ಬಿದ್ದು












Click it and Unblock the Notifications