ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾ.25ರಂದು ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೆ ತೀರ್ಮಾನ

|
Google Oneindia Kannada News

Recommended Video

ಮಂಡ್ಯದಲ್ಲಿ ಮಾರ್ಚ್ 25ರಂದು ನಾಮಪತ್ರ ಸಲ್ಲಿಸಲು ನಿಖಿಲ್ ಕುಮಾರಸ್ವಾಮಿ ನಿರ್ಧಾರ

ಮಂಡ್ಯ, ಮಾರ್ಚ್ 19: ಸುಮಲತಾ ಅವರು ಮಂಡ್ಯ ಲೋಕ ಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕುರಿತು ಅಧಿಕೃತ ಘೋಷಣೆ ಮಾಡಿದ ಬೆನ್ನಲ್ಲೇ ಚುನಾವಣಾ ಕಣ ರಂಗೇರಿದ್ದು, ಜೆಡಿಎಸ್ ಅಭ್ಯರ್ಥಿ ನಿಖಲ್ ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಿದ್ದು, ಮಾ.25ರ ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಲು ತೀರ್ಮಾನಿಸಿದ್ದಾರೆ.

ಮಂಗಳವಾರ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ರೋಡ್ ಶೋ ನಡೆಸಿದ ನಿಖಿಲ್ ಗೆ ಸಚಿವ ಡಿ.ಸಿ. ತಮ್ಮಣ್ಣ, ದೇವರಾಜ ಅರಸು ನಿಗಮದ ಅಧ್ಯಕ್ಷ, ಶಾಸಕ ಅನ್ನದಾನಿ ಸಾಥ್ ನೀಡಿದ್ದಾರೆ. ಮತಯಾಚನೆ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ತಂದೆ ಕುಮಾರಸ್ವಾಮಿ ಹಾಗೂ ತಾತ ಎಚ್.ಡಿ. ದೇವೇಗೌಡರ ಹೆಸರಿನಲ್ಲಿ ಮತ ಯಾಚಿಸಿದ್ದು ವಿಶೇಷವಾಗಿತ್ತು.

ನಿಖಿಲ್ ಬೆಂಬಲಕ್ಕೆ ಜೆಡಿಎಸ್ ಭದ್ರಕೋಟೆ ಮಂಡ್ಯದ ತುಂಬ ಬಲಿಷ್ಠ 'ಸೈನಿಕರು'!ನಿಖಿಲ್ ಬೆಂಬಲಕ್ಕೆ ಜೆಡಿಎಸ್ ಭದ್ರಕೋಟೆ ಮಂಡ್ಯದ ತುಂಬ ಬಲಿಷ್ಠ 'ಸೈನಿಕರು'!

ಈ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಗ ಅಂತ ನನಗೆ ಮತ ಕೊಡಿ. ಅಪ್ಪನಂತೆ ಅಭಿವೃದ್ಧಿ ಕೆಲಸ ಮಾಡುತ್ತೇನೆ.ಜೆಡಿಎಸ್- ಕಾಂಗ್ರೆಸ್ ಮುಖಂಡರ ಜೊತೆ ಚರ್ಚೆ ಮಾಡಿ ನನ್ನ ಅಭ್ಯರ್ಥಿ ಮಾಡಲಾಗಿದೆ. ದೇವೇಗೌಡ, ಕುಮಾರಸ್ವಾಮಿ ಹಾದಿಯಲ್ಲಿ ನಾನು ನಡೆಯುತ್ತೇನೆ ಎಂದು ಮನವಿ ಮಾಡುವ ಮೂಲಕ ಗಮನಸೆಳೆದರು. ಮುಂದೆ ಓದಿ..

 ಕುಮಾರಸ್ವಾಮಿ ಮಗ ಅಂತ ಮತ ಕೊಡಿ

ಕುಮಾರಸ್ವಾಮಿ ಮಗ ಅಂತ ಮತ ಕೊಡಿ

"2004ರಲ್ಲಿ ಕನಕಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗಿದ್ದ ಕುಮಾರಸ್ವಾಮಿಗೆ ಮಳವಳ್ಳಿ ಜನ ದೇವೇಗೌಡರ ಮಗ ಅಂತ ಮತ ಕೊಟ್ರಿ. ಈಗ ಕುಮಾರಸ್ವಾಮಿ ಮಗ ಅಂತ ನನಗೆ ಮತ ಕೊಡಿ" ಎಂದು ನಿಖಿಲ್ ರೋಡ್ ಶೋನಲ್ಲಿ ಜನತೆಗೆ ಮನವಿ ಮಾಡಿದರು.

 ದರ್ಶನ್, ಯಶ್ ವಿರುದ್ಧ ಗೋ ಬ್ಯಾಕ್ ಘೋಷಣೆ

ದರ್ಶನ್, ಯಶ್ ವಿರುದ್ಧ ಗೋ ಬ್ಯಾಕ್ ಘೋಷಣೆ

ಇನ್ನೊಂದೆಡೆ ಹಲಗೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ನಟರಾದ ದರ್ಶನ್, ಯಶ್ ವಿರುದ್ಧ ಗೋ ಬ್ಯಾಕ್ ಘೋಷಣೆ ಕೂಗಿದ್ದು ಕಂಡು ಬಂದಿದೆ. ಈ ಹಿಂದೆ ನಿಖಿಲ ಗೋ ಬ್ಯಾಕ್ ಎಂಬ ಅಭಿಯಾನ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿತ್ತು.

 ಸುಮಲತಾ ವರ್ಸಸ್ ನಿಖಿಲ್ ಕುಮಾರಸ್ವಾಮಿ; ಯಾರಿಗುಂಟು ಗ್ರಹ ಬಲ? ಸುಮಲತಾ ವರ್ಸಸ್ ನಿಖಿಲ್ ಕುಮಾರಸ್ವಾಮಿ; ಯಾರಿಗುಂಟು ಗ್ರಹ ಬಲ?

 ಜಿದ್ದಾಜಿದ್ದಿನ ಪ್ರಚಾರಕ್ಕೆ ಚಾಲನೆ

ಜಿದ್ದಾಜಿದ್ದಿನ ಪ್ರಚಾರಕ್ಕೆ ಚಾಲನೆ

ಇದೀಗ ಜೆಡಿಎಸ್ ಕಾರ್ಯಕರ್ತರು ಗೋ ಬ್ಯಾಕ್ ಘೋಷಣೆ ಆರಂಭಿಸಿದ್ದು, ಹಲಗೂರಿನಲ್ಲಿ ಪ್ರಚಾರ ನಡೆಸುತ್ತಿದ್ದ ನಿಖಿಲ್ ಎದುರೇ ಗೋ ಬ್ಯಾಕ್ ದರ್ಶನ್, ಗೋ ಬ್ಯಾಕ್ ಯಶ್ ಎಂದು ಜೆಡಿಎಸ್ ಕಾರ್ಯಕರ್ತರು ಘೋಷಣೆ ಕೂಗುವ ಮೂಲಕ ಜಿದ್ದಾಜಿದ್ದಿನ ಪ್ರಚಾರಕ್ಕೆ ಚಾಲನೆ ನೀಡಿರುವುದು ಕಂಡು ಬಂದಿದೆ.

 ಅವರೇ ಜೆಡಿಎಸ್ ಗೆ ಸ್ಟಾರ್ ಗಳು...

ಅವರೇ ಜೆಡಿಎಸ್ ಗೆ ಸ್ಟಾರ್ ಗಳು...

ಇನ್ನೊಂದೆಡೆ ಶಾಸಕಿ ಅನಿತಾಕುಮಾರಸ್ವಾಮಿ ಮಾತನಾಡಿ, ದೇವೇಗೌಡರು ತುಮಕೂರಿನಿಂದ ಸ್ಪರ್ಧೆ ಮಾಡುವ ಸುಳಿವನ್ನು ನೀಡಿದ್ದಾರೆ. ಎಲ್ಲ ಸ್ಟಾರ್‌ಗಳಿಗಿಂತ ಜಿಲ್ಲೆಯ ಜನತೆ ಇಷ್ಟಪಡುವುದು ದೇವೇಗೌಡ್ರು ಮತ್ತು ಕುಮಾರಸ್ವಾಮಿ ಅವರನ್ನು. ಹೀಗಾಗಿ ಅವರೇ ಜೆಡಿಎಸ್ ಗೆ ಸ್ಟಾರ್ ಗಳು, ನಮಗೆ ಬೇರೆ ಸ್ಟಾರ್ ಪ್ರಚಾರಕರು ಬೇಕಿಲ್ಲ ಎಂದು ಪರೋಕ್ಷವಾಗಿ ಸುಮಲತಾ ಅವರಿಗೆ ಟಾಂಗ್ ನೀಡಿದ್ದಾರೆ.

 ಮಗನ ಹಾದಿಯಲ್ಲೇ ಸಾಗಿ, ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡ ಪಾಟೀಲ್ ಮಗನ ಹಾದಿಯಲ್ಲೇ ಸಾಗಿ, ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡ ಪಾಟೀಲ್

English summary
Lok Sabha Election 2019:JDS candidate Nikhil Kumaraswamy decided to file nomination on March 25.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X