ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡಲ್ಲ : ಚೆಲುವರಾಯಸ್ವಾಮಿ

Recommended Video

      Lok Sabha Elections 2019 : ಈ ಕಾಂಗ್ರೆಸ್ ನಾಯಕ ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡಲ್ವಂತೆ |Oneindia Kannada

      ಮಂಡ್ಯ, ಜೂನ್ 26 : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕ ಚೆಲುವರಾಯಸ್ವಾಮಿ ಅವರು, 'ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವುದಿಲ್ಲ' ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

      ಮಂಡ್ಯದಲ್ಲಿ ಮಂಗಳವಾರ ಮಾತನಾಡಿದ ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು, 'ಮಂಡ್ಯ ಕ್ಷೇತ್ರ ಕಾಂಗ್ರೆಸ್ ಬಳಿಯೇ ಇರಲಿದೆ. ಅದನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡುವುದಿಲ್ಲ' ಎಂದು ಹೇಳಿದರು.

      ಈಗಾಗಲೇ ಕಾಂಗ್ರೆಸ್‌-ಜೆಡಿಎಸ್‌ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಸುತ್ತಿವೆ. ಮಂಡ್ಯ ಕ್ಷೇತ್ರ ಜೆಡಿಎಸ್ ವಶದಲ್ಲಿತ್ತು, ಸಿ.ಎಸ್.ಪುಟ್ಟರಾಜು ಅವರು ಶಾಸಕರಾಗಿ ಆಯ್ಕೆಯಾದ ಬಳಿಕ ಮಂಡ್ಯ ಕ್ಷೇತ್ರದ ಸಂಸದ ಸ್ಥಾನ ತೆರವಾಗಿದೆ.

      No Congress JDS alliance in Mandya in 2019 Lok Sabha elections

      2018ರ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ 7 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಮಂಡ್ಯ ಜೆಡಿಎಸ್ ಭದ್ರಕೋಟೆಯಾಗಿದೆ. ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ನಡೆದರೆ ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟು ಕೊಡುವ ಬಗ್ಗೆ ಚರ್ಚೆಯಾಗಲಿದೆ.

      ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಮಂಡ್ಯವನ್ನು ಬಿಟ್ಟುಕೊಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಮಂಡ್ಯ ಕಾಂಗ್ರೆಸ್ ವಶದಲ್ಲಿಯೇ ಇರಲಿದೆ ಎಂದು ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದಲ್ಲಿ ಸೋತಿರುವ ಚೆಲುವರಾಯಸ್ವಾಮಿ ಅವರು ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

      2019ರ ಲೋಕಸಭೆ ಚುನಾವಣೆಗೆ ಮಂಡ್ಯದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಆದರೆ, ಈಗ ಚೆಲುವರಾಯಸ್ವಾಮಿ ಅವರು ನೀಡಿರುವ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+