ಕೃಷ್ಣರಾಜಸಾಗರ ಜಲಾಶಯದ ಬಳಿ ಟ್ರಯಲ್ ಬ್ಲಾಸ್ಟ್: ಆತಂಕ ಬೇಡ ಎಂದ ಸಚಿವ ಚಲುವರಾಯಸ್ವಾಮಿ
ಮಂಡ್ಯ : ಕೃಷ್ಣರಾಜಸಾಗರ ಜಲಾಶಯದ ಬಳಿ ಟ್ರಯಲ್ ಬ್ಲಾಸ್ಟ್ ನಡೆಸುವ ವಿಚಾರವಾಗಿ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ. ರೈತರ ಅಭಿಪ್ರಾಯಕ್ಕೆ ವಿರುದ್ಧವಾಗಿ ಮತ್ತು ಜಿಲ್ಲೆಯ ಜನರ ಹಿತವನ್ನು ಕಡೆಗಣಿಸಿ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳುವುದಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು.
ಜಿಲ್ಲಾ ಪಂಚಾಯತಿಯ ಕಾವೇರಿ ಸಭಾಂಗಣದಲ್ಲಿ ಟ್ರಯಲ್ ಬ್ಲಾಸ್ಟ್ ಮತ್ತು ಮೈಷುಗರ್ ಕಾರ್ಖಾನೆ ಕುರಿತು ಆಯೋಜಿಸಿದ್ದ ರೈತಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ನಾನು ಉದ್ಯಮಿಯಲ್ಲ, ವ್ಯಾಪಾರಿಯೂ ಅಲ್ಲ. ಸ್ವಹಿತ, ಅಧಿಕಾರಕ್ಕೆ ಅಂಟಿಕೂರುವ ವ್ಯಕ್ತಿಯೂ ನಾನಲ್ಲ. ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಅಣೆಕಟ್ಟು ಸುರಕ್ಷತಾ ಕಾಯಿದೆಯನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತವಾದ ತೀರ್ಮಾನವನ್ನು ಸರಿಯಾದ ಸಮಯದಲ್ಲಿ ತೆಗೆದುಕೊಳ್ಳುವುದಾಗಿ ಹೇಳಿದರು.

ಕೆಆರ್‌ಎಸ್ ಅಣೆಕಟ್ಟು ಸುರಕ್ಷತೆಯನ್ನು ಕಡೆಗಣಿಸಿ ಟ್ರಯಲ್ ಬ್ಲಾಸ್ಟ್ ಮಾಡಲೇಬೇಕೆಂಬ ಹಠ ನನಗಾಗಲೀ, ಸರ್ಕಾರಕ್ಕೆ ಅಥವಾ ಜಿಲ್ಲಾಡಳಿತಕ್ಕಾಗಲೀ ಇಲ್ಲ. ಟ್ರಯಲ್ ಬ್ಲಾಸ್ಟ್‌ನಿಂದ ಗಣಿಗಾರಿಕೆಗೆ ಅವಕಾಶ ದೊರೆತಲ್ಲಿ ಅಪಾಯ ಸೃಷ್ಟಿಯಾಗಬಹುದೆಂಬ ಆತಂಕ ರೈತರಲ್ಲಿದೆ. ಟ್ರಯಲ್ ಬ್ಲಾಸ್ಟ್ ನಡೆಸುವುದಕ್ಕೆ ಹೈಕೋರ್ಟ್ ಆದೇಶ ಮಾಡಿದೆ. ಅದನ್ನು ತಡೆಯಲು ಏನು ಮಾಡಬೇಕೆಂಬ ಬಗ್ಗೆ ನಾವೂ ಆಲೋಚಿಸುತ್ತಿದ್ದೇವೆ. ಅದಕ್ಕಾಗಿ ಅಡ್ವೋಕೇಟ್ ಜನರಲ್ ಅಭಿಪ್ರಾಯವನ್ನು ಪಡೆಯಲಿದ್ದೇವೆ. ಅಣೆಕಟ್ಟು ಸುರಕ್ಷತಾ ಸಮಿತಿ ಕಾಯಿದೆಯನ್ನು ಜೊತೆಗಿಟ್ಟುಕೊಂಡೇ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಿಕೊಡಲಿದ್ದೇವೆ ಎಂದರು.
ಎಲ್ಲರ ಒಪ್ಪಿಗೆ ಪಡೆದೇ ಮುಂದಿನ ಹೆಜ್ಜೆ
ಒಮ್ಮೆ ಟ್ರಯಲ್ ಬ್ಲಾಸ್ಟ್ ನಡೆಸಲೇಬೇಕಾದ ಅನಿವಾರ್ಯತೆ ಎದುರಾದರೆ ಮತ್ತೆ ನಿಮ್ಮೆಲ್ಲರ ಜೊತೆ ಸಭೆ ನಡೆಸಿ ಅಭಿಪ್ರಾಯವನ್ನು ಪಡೆದು ಮುಂದಿನ ಹೆಜ್ಜೆ ಇಡಲಿದ್ದೇವೆ. ಮುಂದಿನ ಹತ್ತು ವಾರಗಳೊಳಗೆ ಏನೇನು ಕಾನೂನಾತ್ಮಕ ಕ್ರಮ ಕೈಗೊಳ್ಳಬಹುದೋ ಅವೆಲ್ಲವನ್ನೂ ತೆಗೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದರು.ಕೆಆರ್‌ಎಸ್ ಅಣೆಕಟ್ಟು ಬಳಿ ಪರೀಕ್ಷಾರ್ಥ ಸ್ಪೋಟ ನಡೆಸಿ 10 ವಾರದೊಳಗೆ ವರದಿ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಸಭೆಯ ಗಮನಕ್ಕೆ ತಂದರು.
20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿರುವ ಜಿಲ್ಲಾಧಿಕಾರಿ ಆದೇಶ ಪ್ರಶ್ನಿಸಿ 17 ಮಂದಿ ಕ್ರಷರ್ ಮಾಲೀಕರು 2021ರಲ್ಲಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ 2022 ಡಿಸೆಂಬರ್ 1ರಂದು ಗಣಿಗಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ವೈಜ್ಞಾನಿಕ ವರದಿ ಪಡೆದು, ಟ್ರಯಲ್ ಬ್ಲಾಸ್ಟ್ ನಡೆಸಿ ನಂತರ ಅನುಮತಿ ನೀಡುವಂತೆ ತಿಳಿಸಿತ್ತು.
ಅಣೆಕಟ್ಟು ಸುರಕ್ಷತಾ ಸಮಿತಿ ವರದಿ ಆಧರಿಸಿ ಕಾವೇರಿ ನೀರಾವರಿ ನಿಗಮದವರು ಜಾರ್ಖಂಡ್‌ನ ಧನಾಬಾದ್‌ನಲ್ಲಿರುವ ಸಿಐಎಂಎಆರ್ ತಂಡವನ್ನು ಕರೆಸಿ ಮೇ 25, 2022ರಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಮುಂದಾದಾಗ ರೈತರಿಂದ ವಿರೋಧ ವ್ಯಕ್ತವಾಗಿತ್ತು.
ಮತ್ತೆ ಕೆಆರ್‌ಎಸ್ ಬಳಿ ಗಣಿಗಾರಿಕೆಗೆ ಅನುಮತಿ ನೀಡುವಾಗ ಜಿಲ್ಲಾಧಿಕಾರಿಗಳು ಟ್ರಯಲ್ ಬ್ಲಾಸ್ಟ್ ನಡೆಸಿ ಅನುಮತಿ ನೀಡಬೇಕು ಎಂದು ರಾಜ್ಯಸರ್ಕಾರದ ಸಮಿತಿ ನಿರ್ಧಾರ ಕೈಗೊಂಡು 25 ಕಿ.ಮೀ. ವ್ಯಾಪ್ತಿಯಲ್ಲಿ ಗಣಿ ನಿಷೇಧ ಜಾರಿಗೊಳಿಸಿತು.
ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಗಣಿ ಮಾಲೀಕರು ಹೋದಾಗ ಜನವರಿ 1, 2024ರಲ್ಲಿ ಕೆಆರ್‌ಎಸ್ ಅಣೆಕಟ್ಟು ವ್ಯಾಪ್ತಿಯ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಆದೇಶ ಹೊರಡಿಸಿತು. ಅದರ ಮರುದಿನವೇ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದಾಗ ಟ್ರಯಲ್ ಬ್ಲಾಸ್ಟ್ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿತ್ತು. ಅದರಂತೆ ಕಾವೇರಿ ನೀರಾವರಿ ನಿಗಮದವರು 18 ರಿಂದ 20 ಲಕ್ಷ ರು. ಖರ್ಚು ಮಾಡಿ ವಿಜ್ಞಾನಿಗಳ ತಂಡವನ್ನು ಕರೆಸಿದ್ದರು. ಆದರೆ, ಟ್ರಯಲ್ ಬ್ಲಾಸ್ಟ್‌ಗೆ ವಿರೋಧ ಎದುರಾಗಿದ್ದರಿಂದ ನಡೆಯಲಿಲ್ಲ. ಇದೀಗ ಹೈಕೋರ್ಟ್ 10 ವಾರಗಳೊಳಗೆ ಟ್ರಯಲ್ ಬ್ಲಾಸ್ಟ್ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚಿಸಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications