ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್ ಗೆಲುವಿಗಾಗಿ ಧರ್ಮಸ್ಥಳಕ್ಕೆ ಪಾದಯಾತ್ರೆ

By ಬಿ.ಎಂ. ಲವಕುಮಾರ್
|
Google Oneindia Kannada News

ಪಾಂಡವಪುರ, ಮಾರ್ಚ್ 5: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದು ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಹಾಗೂ ಸಿ.ಎಸ್.ಪುಟ್ಟರಾಜು ಶಾಸಕರಾಗಿ ಗೆದ್ದು ಮಂತ್ರಿಗಳಾಗಬೇಕೆಂದು ಹರಕೆ ಹೊತ್ತು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಸುಮಾರು 25ಕ್ಕೂ ಹೆಚ್ಚು ಅಭಿಮಾನಿಗಳು ಕಾಲ್ನಡಿಗೆಯ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸೋಮವಾರ ಪಾದಯಾತ್ರೆ ಹೊರಟಿದ್ದಾರೆ.

ತಾಲೂಕಿನ ಚಿನಕುರಳಿ ಗ್ರಾಮದ ಶ್ರೀ ಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆ ಪೂಜೆ ಸಲ್ಲಿಸಿ ಕಾಲ್ನಡಿಗೆಯ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರಕ್ಕೆ ಹೊರಟ ಅಭಿಮಾನಿಗಳ ಪಾದಯಾತ್ರೆಗೆ ಸಂಸದ ಸಿ.ಎಸ್.ಪುಟ್ಟರಾಜು ಚಾಲನೆ ನೀಡಿದರು.

Padayatra to Dharmasthala for the JDS victory

ಈ ವೇಳೆ ಮಾತನಾಡಿದ ಸಂಸದ ಸಿ.ಎಸ್.ಪುಟ್ಟರಾಜು, "ನಮ್ಮ ನಾಯಕರಾದ ಎಚ್.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಅಭಿಮಾನವಿಟ್ಟು ಮುಂದೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಬೇಕೆಂದು ಬಯಸಿ ಧರ್ಮಸ್ಥಳ ಮಂಜುನಾಥಸ್ವಾಮಿಗೆ ಹರಕೆ ಹೊತ್ತು ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ಕಾಲ್ನಡಿಗೆಯ ಮೂಲಕ ಪಾದಯಾತ್ರೆ ಹೊರಟಿರುವುದು ನಿಜಕ್ಕೂ ಸಂತೋಷವಾಗುತ್ತಿದೆ. ಅಭಿಮಾನಿಗಳು ಇಷ್ಟೊಂದು ಅಭಿಮಾನ ತೋರಿಸುತ್ತಿರುವುದಕ್ಕೆ ನಿಜಕ್ಕೂ ಆಭಾರಿಯಾಗುರುತ್ತೇನೆ," ಎಂದರು.

"ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತಂದು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಬೇಕೆನ್ನುವ ಬಯಕೆ ರಾಜ್ಯದ ಜನರಲ್ಲಿ ಮೂಡಿದೆ. ಅದಕ್ಕಾಗಿ ಕುಮಾರಸ್ವಾಮಿ ಅವರು ಎಲ್ಲೇ ಕಾರ್ಯಕ್ರಮ ಮಾಡಿದರೂ ಉತ್ತಮವಾದ ಸ್ಪಂದನೆ ದೊರೆಯುತ್ತಿದೆ," ಎಂದರು.

ಜೆಡಿಎಸ್ ಅಧಿಕಾರಕ್ಕೆ ಬಂದು ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಭವಿಷ್ಯ ನುಡಿದರು.

English summary
JDS came to power in the state and HD Kumaraswamy should become the chief minister. And CS Puttaraju must win the MLA election and become Minister. For this more than 25 fans from Melukote assembly constituency are leaving with Padayatra to Dharmasthala on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X