Mandya Rain: ಆಲಿಕಲ್ಲು ಮಳೆಗೆ ನೆಲ ಕಚ್ಚಿದ ಭತ್ತ-ಕಬ್ಬು; ನಷ್ಟದ ಭೀತಿಯಲ್ಲಿ ರೈತ
ಸೋಮವಾರ ರಾತ್ರಿ ಬಿದ್ದ ಆಲಿಕಲ್ಲು ಮಳೆಗೆ ಮಂಡ್ಯ ತಾಲೂಕಿನ ಗೋಪಾಲಪುರ ಮತ್ತು ಸಾತನೂರಿನಲ್ಲಿ ಕಬ್ಬು ಮತ್ತು ಭತ್ತದ ಬೆಳೆಗೆ ತೀವ್ರ ಹಾನಿ ಸಂಭವಿಸಿದೆ. ಮಳೆಯ ಹೊಡೆತಕ್ಕೆ ಭತ್ತದ ತೆನೆ ಉದುರಿಹೋಗಿದ್ದರೆ, ಕಬ್ಬಿನ ಸುಳಿ ಮುರಿದುಕೊಂಡಿದೆ. ಇದರಿಂದ ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ.
ಬರಗಾಲದ ನಡುವೆಯೂ ಗೋಪಾಲಪುರ ಗ್ರಾಮದ ರೈತರು ಸುಮಾರು 30 ರಿಂದ 40 ಎಕರೆ ಪ್ರದೇಶದಲ್ಲಿ ಕೆರೆಯಲ್ಲಿದ್ದ ಅಲ್ಪಸ್ವಲ್ಪ ನೀರನ್ನು ಬಳಸಿಕೊಂಡು ಭತ್ತದ ಬೆಳೆ ಬೆಳೆದಿದ್ದರು. ಇನ್ನೂ ಹಲವು ರೈತರು ಕಬ್ಬು ಬೆಳೆದಿದ್ದರು. ಕೆರೆಯಿಂದ ಪೈಪ್‌ಲೈನ್ ಸಂಪರ್ಕ ಆಳವಡಿಸಿಕೊಂಡು ನೀರು ಹಾಯಿಸಿಕೊಂಡು ಬೆಳೆ ರಕ್ಷಣೆ ಮಾಡಿದ್ದರು.

ನಿರೀಕ್ಷೆಯಂತೆ ಭತ್ತದ ಬೆಳೆ ಕೊಯ್ಲಿನ ಹಂತ ತಲುಪಿತ್ತು. ಕೊಯ್ಲಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನೂ ಮಾಡಿಕೊಂಡಿದ್ದರು. ಬರಗಾಲದ ನಡುವೆಯೂ ಬೆಳೆಯನ್ನು ಮನೆಗೆ ಕೊಂಡೊಯ್ಯುವುದಕ್ಕೆ ರೈತರು ಉತ್ಸುಕರಾಗಿದ್ದರು.
ಈ ಮಧ್ಯೆ ದಿಢೀರನೆ ಬಿದ್ದ ಆಲಿಕಲ್ಲು ಮಳೆ ರೈತರ ನಿರೀಕ್ಷೆಯನ್ನೆಲ್ಲಾ ಹುಸಿಗೊಳಿಸಿತು. ಆರು ತಿಂಗಳ ಕಾಲ ಶ್ರಮಪಟ್ಟು ಬೆಳೆದ ಬೆಳೆಯನ್ನು ಅರ್ಧ ಗಂಟೆ ಕಾಲ ಸುರಿದ ಆಲಿಕಲ್ಲು ಮಳೆ ತೀವ್ರವಾಗಿ ಹಾನಿ ಮಾಡಿತು. ಆಲಿಕಲ್ಲು ಮಳೆಯ ಹೊಡೆತಕ್ಕೆ ಭತ್ತದ ತೆನೆ ಗದ್ದೆಯಲ್ಲೇ ಉದುರಿಹೋಗಿವೆ. ಮತ್ತೆ ಕೆಲವು ಭತ್ತದ ತೆನೆಗಳು ನೆಲಕಚ್ಚಿವೆ. ಕೆಲವರು ಭತ್ತವನ್ನು ಕೊಯ್ಲು ಮಾಡಿ ಗದ್ದೆಯಲ್ಲೇ ಒಣಗಿಹಾಕಿದ್ದರು. ಅದೂ ಕೂಡ ಮಳೆಯ ಹೊಡೆತಕ್ಕೆ ಸಿಕ್ಕಿದೆ. ಇದರಿಂದ ಮಳೆಯಿಲ್ಲದೆ ಹಲವು ರೈತರು ಜಮೀನಿನಲ್ಲಿ ಬೆಳೆ ಬೆಳೆಯದೆ ಖಾಲಿ ಬಿಟ್ಟಿದ್ದರೆ, ಇನ್ನೂ ಹಲವು ರೈತರು ಕೆರೆಯ ನೀರನ್ನೇ ಬಳಸಿಕೊಂಡು ಭತ್ತ ಬೆಳೆದರೂ ಕೈಗೆ ಸೇರಿಸಿಕೊಳ್ಳಲಾಗದೆ ನಷ್ಟ ಅನುಭವಿಸಿದ್ದಾರೆ.
ಕಬ್ಬು ಬೆಳೆದವರ ಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ಆಲಿಕಲ್ಲು ಮಳೆಯ ಹೊಡೆತ ತಿಂದ ಕಬ್ಬಿನ ಸುಳಿಗಳು ಮುರಿದುಹೋಗಿವೆ. ಗರಿಗಳು ಸೀಳುಬಿಟ್ಟಿವೆ. ಕಬ್ಬಿನ ಸುಳಿ ಹಾಳಾಗಿರುವುದರಿಂದ ತೀವ್ರ ಬೆಳೆನಷ್ಟ ಉಂಟಾಗಿದೆ. ರೈತರು ಹಗಲು-ರಾತ್ರಿ ಎನ್ನದೆ ನೀರು ಹರಿಸಿ ಬೆಳೆಯನ್ನು ಕಾಪಾಡಿಕೊಂಡು ಬಂದಿದ್ದರು. ಆ ಬೆಳೆಯನ್ನು ಉಳಿಸಿಕೊಳ್ಳಲಾಗಲಿಲ್ಲವೆಂಬ ಸಂಕಟ ಅವರನ್ನು ತೀವ್ರವಾಗಿ ಬಾಧಿಸುತ್ತಿದೆ.
ಸಾತನೂರಿನಲ್ಲೂ ನೂರಾರು ಎಕರೆ ಕಬ್ಬು ಹಾನಿ
ಸೋಮವಾರ ರಾತ್ರಿ ಸುರಿದ ಅಕಾಲಿಕ ಆಲಿಕಲ್ಲು ಮಳೆ, ಬಿರುಗಾಳಿಯಿಂದಾಗಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಳೆಗಳು ಹಾನಿಗೊಳಗಾಗಿವೆ. ತಾಲೂಕಿನ ಸಾತನೂರು ಗ್ರಾಮದ ಹಾನಿಯಾದ ಪ್ರದೇಶಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆ ಕೊರತೆ ಹಿನ್ನೆಲೆಯಲ್ಲಿ ಕೊಳವೆ ಬಾವಿ ಆಶ್ರಯಿಸಿಕೊಂಡು ರೈತರು ಕಬ್ಬಿನ ಬೆಳೆ ಬೆಳೆದಿದ್ದರು. ಬೆಳೆಯೂ ಉತ್ತಮವಾಗಿ ಬಂದಿದ್ದರಿಂದ ಖುಷಿಯಾಗಿದ್ದರು. ವಿದ್ಯುತ್ ಕೊರತೆ ನಡುವೆಯೂ ವಿದ್ಯುತ್ ಬಂದಾಗ ಗದ್ದೆಗೆ ನೀರು ಹಾಯಿಸಿಕೊಂಡು ಬೆಳೆಯನ್ನು ಕಾಪಾಡಿಕೊಂಡು ಬಂದಿದ್ದರು. ಕೆಲವರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೊಳವೆ ಬಾವಿ ಕೊರೆಸಿ ಕಬ್ಬು ಬೆಳೆಗೆ ನೀರು ಕೊಟ್ಟಿದ್ದರು. ಆಲಿಕಲ್ಲು ಮಳೆಯಿಂದಾಗಿ ಕಬ್ಬಿನ ಸುಳಿಗೆ ಹೊಡೆತ ಬಿದ್ದು, ಸುಳಿ ಸಹಿತ ಗರಿಗಳಿಗೂ ಹಾನಿಯಾಗಿದೆ. ಇದರಿಂದ ಬೆಳೆನಷ್ಟಕ್ಕೊಳಗಾದ ರೈತರು ದಿಕ್ಕೆಟ್ಟು ಕುಳಿತಿದ್ದಾರೆ.
ಸಾತನೂರು ಗ್ರಾಮಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಶಿವಕುಮಾರ್ ಬಿರಾದಾರ್, ಕಂದಾಯಾಧಿಕಾರಿ ಮನೋಹರ್, ಗ್ರಾಮ ಲೆಕ್ಕಿಗೆ ಲಿಖಿತಾ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಹಾನಿ ಬಗ್ಗೆ ಮಾಹಿತಿ ಪಡೆದುಕೊಂಡರು. ಗಾಳಿ ಮತ್ತು ಮಳೆಗೆ ಕಬ್ಬು ಬೆಳೆ ನೆಲಕಚ್ಚಿದೆ. ಅದೇ ರೀತಿ ಕಬ್ಬಿನ ಗರಿ ಮತ್ತು ಸುಳಿ ನಾಶವಾಗಿದೆ. ಆದ್ದರಿಂದ ರೈತರು ಸೂಕ್ತ ದಾಖಲೆಗಳನ್ನೂ ನೀಡಬೇಕು, ಕೃಷಿ ಇಲಾಖೆ ಮತ್ತು ತಾಲೂಕು ಆಡಳಿತ ಜಂಟಿಯಾಗಿ ತನಿಖೆ ಮಾಡಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications