ಮೈಶುಗರ್ ಉಳಿಸಿಕೊಳ್ಳುವ ಇಚ್ಚಾಶಕ್ತಿ ಸರ್ಕಾರಕ್ಕಿಲ್ಲ- ಸಿದ್ದರಾಮೇಗೌಡ ಅಸಮಾಧಾನ
ಮೈಸೂರು ಮಹಾರಾಜರಿಂದ ಕೊಡುಗೆಯಾಗಿ ಬಂದಿರುವ ಮೈಶುಗರ್ ಕಾರ್ಖಾನೆಯನ್ನು ಉಳಿಸಿಕೊಂಡು ಸಮರ್ಥವಾಗಿ ಮುನ್ನಡೆಸುವ ಇಚ್ಛಾಶಕ್ತಿ ಆಳುವ ಸರ್ಕಾರಗಳಿಗೂ ಇಲ್ಲ, ಜನಪ್ರತಿನಿಧಿಗಳಿಗೂ ಇಲ್ಲ ಎಂದು ಮೈಶುಗರ್ ಕಾರ್ಖಾನೆ ಮಾಜಿ ಅಧ್ಯಕ್ಷರುಗಳ ವೇದಿಕೆ ಸಂಚಾಲಕ ಸಿದ್ದರಾಮೇಗೌಡ ಆರೋಪಿಸಿ
ಮಂಡ್ಯ, ಫೆಬ್ರವರಿ 9: ಮೈಸೂರು ಮಹಾರಾಜರಿಂದ ಕೊಡುಗೆಯಾಗಿ ಬಂದಿರುವ ಮೈಶುಗರ್ ಕಾರ್ಖಾನೆಯನ್ನು ಉಳಿಸಿಕೊಂಡು ಸಮರ್ಥವಾಗಿ ಮುನ್ನಡೆಸುವ ಇಚ್ಛಾಶಕ್ತಿ ಆಳುವ ಸರ್ಕಾರಗಳಿಗೂ ಇಲ್ಲ, ಜನಪ್ರತಿನಿಧಿಗಳಿಗೂ ಇಲ್ಲ. ಇದರ ಪರಿಣಾಮ ಕಾರ್ಖಾನೆ ಪುನಶ್ಚೇತನ ಕನಸಾಗಿಯೇ ಉಳಿದಿದೆ ಎಂದು ಮೈಶುಗರ್ ಕಾರ್ಖಾನೆ ಮಾಜಿ ಅಧ್ಯಕ್ಷರುಗಳ ವೇದಿಕೆ ಸಂಚಾಲಕ ಸಿದ್ದರಾಮೇಗೌಡ ಆರೋಪಿಸಿದರು.
ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಕಾರ್ಖಾನೆಗೆ ಮರುಜೀವ ನೀಡುವುದಾಗಿ ಕೈಗೆತ್ತಿಕೊಂಡ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದಂತೆ 50 ಕೋಟಿ ರೂಪಾಯಿ ಹಣವನ್ನು ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡಲಿಲ್ಲ. ಕಾರ್ಖಾನೆ ಯಂತ್ರೋಪಕರಣ ದುರಸ್ತಿ ಕಾರ್ಯ ಗುಣಮಟ್ಟದಿಂದ ಕೂಡಿರಲೂ ಇಲ್ಲ. ಕಬ್ಬು ನುರಿಸುವಿಕೆ ವಿಳಂಬದಿಂದ ಕಬ್ಬಿನ ಇಳುವರಿ ಕಡಿಮೆಯಾಗಿದ್ದು, ಗುಣಮಟ್ಟದ ಸಕ್ಕರೆ ಉತ್ಪಾದನೆಯಾಗಿಲ್ಲ ಎಂದು ದೂರಿದರು.
ಕಾರ್ಖಾನೆಗೆ ಗತ ವೈಭವ ಮರಳಿ ತಂದುಕೊಡುವ ಬದ್ಧತೆ ಸರ್ಕಾರಕ್ಕೆ ಇದ್ದಿದ್ದರೆ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕಾಯಕಲ್ಪ ನೀಡುವ ಅವಕಾಶಗಳಿದ್ದವು. ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲಿಲ್ಲ. ಬಾಯಿ ಮಾತಿನಲ್ಲಷ್ಟೇ ಕಾಯಕಲ್ಪದ ಹುಸಿ ನುಡಿಗಳನ್ನಾಡಿ ರೈತರ ಕಣ್ಣೊರೆಸುವ ನಾಟಕವಾಡಿದರೇ ವಿನಃ ಕಾರ್ಖಾನೆಯನ್ನು ಸಮರ್ಥವಾಗಿ ಮುನ್ನಡೆಸುವ ದಿಸೆಯಲ್ಲಿ ಸಣ್ಣದೊಂದು ಪ್ರಯತ್ನವನ್ನೂ ಬಿಜೆಪಿ ಸರ್ಕಾರ ನಡೆಸಲಿಲ್ಲವೆಂದು ಆರೋಪಿಸಿದರು.

ಕಾರ್ಖಾನೆಯನ್ನು ಆರಂಭಿಸಿ ಐದು ತಿಂಗಳು ಕಾರ್ಯಾಚರಣೆ ನಡೆಸಿದರೂ ಕೇವಲ 1 ಲಕ್ಷ ಟನ್ ಕಬ್ಬು ಅರೆಯುವುದಕ್ಕಷ್ಟೇ ಶಕ್ತವಾಯಿತು. ಕನಿಷ್ಟ 4 ಲಕ್ಷ ಟನ್ ಅರೆಯುವ ಗುರಿ ಹೊಂದಿದ್ದರೂ ಹಲವಾರು ಸಮಸ್ಯೆಗಳ ನಡುವೆ ನಿಂತು ನಿಂತ ಓಡಲಾರಂಭಿಸಿತು. ರೈತರ ಕಬ್ಬು ಕಟಾವಿಗೆ ಸರಿಯಾದ ಸಮಯಕ್ಕೆ ಆಳುಗಳನ್ನು ಕರೆತರುವ ಕೆಲಸ ನಡೆಯಲಿಲ್ಲ. ತರಾತುರಿಯಲ್ಲಿ ಕಾರ್ಖಾನೆ ಆರಂಭಿಸುವ ಕೆಲಸಕ್ಕೆ ಸರ್ಕಾರ, ಆಡಳಿತ ಮಂಡಳಿ ಮುಂದಾಯಿತು. ಪೂರ್ವಸಿದ್ಧತೆಗಳ ಕೊರತೆಯಿಂದ ಆರಂಭವಾದ ಕಾರ್ಖಾನೆ ಸಮರ್ಥವಾಗಿ ಕಾರ್ಯಾಚರಣೆಯನ್ನು ಮಾಡಲಿಲ್ಲ. ಕಾರ್ಯಾಚರಣೆ ಸರಾಗವಾಗಿ ನಡೆಯುವುದಕ್ಕೆ ಸರ್ಕಾರಗಳು ಮತ್ತು ಜನಪ್ರತಿನಿಧಿಗಳು ಮುತುವರ್ಜಿ ವಹಿಸಲಿಲ್ಲ. ಇದರಿಂದ ರೈತರು ನಷ್ಟ ಅನುಭವಿಸುವಂತಾಯಿತು. ಕಾರ್ಖಾನೆಯೂ ನಷ್ಟದಲ್ಲಿ ಉಳಿಯಿತು ಎಂದು ವಿಷಾದಿಸಿದರು.
ಮೈಷುಗರ್ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿ ಉಳಿಸಿ ಚಾಲನೆ ಕೊಟ್ಟು ರಾಜಕೀಯ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿರುವುದು ದುರ್ದೈವದ ಸಂಗತಿ. ಕಾರ್ಖಾನೆಗೆ ಚಾಲನೆ ಕೊಟ್ಟ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನಪ್ರತಿನಿಧಿಗಳು ಐದು ತಿಂಗಳಲ್ಲಿ ಒಮ್ಮೆಯೂ ಕಾರ್ಖಾನೆ ಬಳಿ ಸುಳಿಯಲಿಲ್ಲ. ಕಾರ್ಖಾನೆ ಹೇಗೆ ಕಾರ್ಯಾಚರಣೆ ನಡೆಸುತ್ತಿದೆ ಎನ್ನುವುದನ್ನು ಪರಿಶೀಲನೆ ನಡೆಸಲಿಲ್ಲ. ಕಾರ್ಖಾನೆ ಸಮಸ್ಯೆಗಳನ್ನು ಎದುರಿಸುತ್ತಿರುವಾಗ ಪರಿಹಾರಕ್ಕೆ ಕ್ರಮ ವಹಿಸಲಿಲ್ಲ. ಕಬ್ಬು ಅರೆಯುವಿಕೆ ಮಂದಗತಿಯಲ್ಲಿ ನಡೆಯುತ್ತಿದ್ದರೂ ಆಡಳಿತ ಮಂಡಳಿಯನ್ನು ಪ್ರಶ್ನಿಸಲಿಲ್ಲ. ಪೂರ್ಣ ಪ್ರಮಾಣದ ಹಣ ಬಿಡುಗಡೆಗೊಳಿಸುವ ಜೊತೆಗೆ ಹೆಚ್ಚುವರಿಯಾಗಿ ಹಣ ತಂದು ಕಾರ್ಖಾನೆಗೆ ಹೊಸ ಕಾಯಕಲ್ಪ ನೀಡುವ ಗೋಜಿಗೆ ಹೋಗದಿರುವುದರಿಂದ ಕಾರ್ಖಾನೆ ಯಥಾಸ್ಥಿತಿಯಲ್ಲೇ ಉಳಿಯುವಂತಾಯಿತು ಎಂದರು.
2023-24ನೇ ಸಾಲಿಗಾದರೂ ಈ ಎಲ್ಲಾ ಅಂಶಗಳನ್ನು ಮನಗಂಡಿರುವ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಸರ್ಕಾರದ ಗಮನಸೆಳೆದು ಜೂನ್ ತಿಂಗಳಿನಲ್ಲಿಯೇ ಕಾರ್ಖಾನೆಯನ್ನು ಪ್ರಾರಂಭಿಸಬೇಕು. ಕಾರ್ಖಾನೆಗೆ ನೀರಿನ ತೊಂದರೆಯಿದ್ದು, ಕೋಣನಹಳ್ಳಿ ಕೆರೆಯಿಂದ ನೀರಾವರಿ ಇಲಾಖೆ ನೀರು ಕೊಡಲು ಒಪ್ಪಿರುವುದರಿಂದ ಜರೂರಾಗಿ ಕಾರ್ಖಾನೆಗೆ ನೀರಿನ ವ್ಯವಸ್ಥೆ ಮಾಡಿಕೊಂಡು ಸಮರ್ಪಕವಾಗಿ ಕಬ್ಬು ಅರೆಯುವಿಕೆಗೆ ಕಾರ್ಖಾನೆಯನ್ನು ಸನ್ನದ್ಧಗೊಳಿಸುವಂತೆ ಒತ್ತಾಯಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications