ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ ತ್ರಿವಳಿ ಕೊಲೆ ಆರೋಪಿಗಳ ಮೇಲೆ ಶೂಟೌಟ್: ಐವರ ಬಂಧನ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ಸೆಪ್ಟೆಂಬರ್ 14: ಮಂಡ್ಯ ಜಿಲ್ಲೆಯ ಗುತ್ತಲಿನ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಕೊಲೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ದುಷ್ಕರ್ಮಿಗಳನ್ನು ಬಂಧಿಸಲು ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅವರು ಐದು ತಂಡಗಳನ್ನು ರಚನೆ ಮಾಡಿದ್ದರು. ಗ್ರಾಮಾಂತರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಎನ್.ವಿ ಮಹೇಶ್ ಹಾಗೂ ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಶರತ್ ಕುಮಾರ್ ರವರ ನೇತೃತ್ವದ ತಂಡ ಮದ್ದೂರಿನ ಸಾದೊಳಲು ಸಮೀಪ ಆರೋಪಿಗಳನ್ನು ಶ್ರಮಪಟ್ಟು ಬಂಧಿಸಿದ್ದಾರೆ.

 ಅರ್ಕೇಶ್ವರ ದೇವಸ್ಥಾನದಲ್ಲಿ ಮೂವರ ಹತ್ಯೆ ಪ್ರಕರಣ: 5 ಲಕ್ಷ ಪರಿಹಾರ ಘೋಷಣೆ ಅರ್ಕೇಶ್ವರ ದೇವಸ್ಥಾನದಲ್ಲಿ ಮೂವರ ಹತ್ಯೆ ಪ್ರಕರಣ: 5 ಲಕ್ಷ ಪರಿಹಾರ ಘೋಷಣೆ

ಆರೋಪಿಗಳನ್ನು ಬಂಧಿಸುವಲ್ಲಿ ಮುಂದಾದ ವೇಳೆ ಆರೋಪಿಗಳಾದ ಆಂಧ್ರ ಮೂಲದ ವಿಜಿ(25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ(28), ತೊಪ್ಪನಹಳ್ಳಿಯ ಮಂಜು(30) ಎಂಬುವವರು ಪೊಲೀಸ್ ಸಿಬ್ಬಂದಿಗಳ ಮೇಲೆ ಕಲ್ಲು ಮತ್ತು ಚಾಕುಗಳಿಂದ ಹಲ್ಲೆ ನಡೆಸಲು ಮುಂದಾದರು.

Mandya Police Arrested 3 Persons In Connection With Murder Of Priests And Robbery At Arkeshwara Temple

ನಂತರ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ, ಆರೋಪಿಗಳು ಪುನಃ ಹಲ್ಲೆಗೆ ಮುಂದಾದ ವೇಳೆ ಕಾರ್ಯಾಚರಣೆ ಕೈಗೊಂಡ ಪೊಲೀಸರು 3 ಮಂದಿ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿ ಓಡಲು ಯತ್ನಿಸಿದವರನ್ನು ಬಂಧಿಸಿದ್ದಾರೆ.

Mandya Police Arrested 3 Persons In Connection With Murder Of Priests And Robbery At Arkeshwara Temple

ಕಾರ್ಯಚರಣೆ ವೇಳೆ ಮಂಡ್ಯ ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಶರತ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಅನಿಲ್ ಕುಮಾರ್, ಎಎಸ್ಐ ಕೃಷ್ಣ ಕುಮಾರ್ ರವರು ತೀವ್ರವಾಗಿ ಗಾಯಗೊಂಡಿದ್ದು, ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಬಳಿಕ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Mandya Police Arrested 3 Persons In Connection With Murder Of Priests And Robbery At Arkeshwara Temple

Recommended Video

IPL ನಲ್ಲಿ ಮತ್ತೊಂದು ಯಡವಟ್ಟು ಮಾಡಿಕೊಳ್ತಾರಾ Shahrukh Khan | Oneindia Kannada

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ 3 ಮಂದಿ ಆರೋಪಿಗಳನ್ನು ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

English summary
Police have succeeded in arresting the accused who murdered three priests at the Shri Arkeshwar Temple in Mandya district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X