ಪೊಲೀಸ್ ನೇಮಕಾತಿ ಲಿಖಿತ ಪರೀಕ್ಷೆ; ಅಭ್ಯರ್ಥಿಗಳಿಗೆ ಸೂಚನೆಗಳು

ಮಂಡ್ಯ, ಸೆಪ್ಟೆಂಬರ್ 16 : ಕೋವಿಡ್ ಭೀತಿಯ ನಡುವೆಯೇ ಮಂಡ್ಯ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ನೇರ ನೇಮಕಾತಿ ಪರೀಕ್ಷೆ ನಡೆಯಲಿದೆ. ಸೆಪ್ಟೆಂಬರ್ 20ರಂದು ಪರೀಕ್ಷೆ ನಿಗದಿಯಾಗಿದೆ.

ಮಂಡ್ಯ ಜಿಲ್ಲಾ ಪೊಲೀಸ್‌ ಘಟಕದಲ್ಲಿ ಖಾಲಿ ಇರುವ 50 ಸಿವಿಲ್‌ ಪೊಲೀಸ್‌ (ಪುರುಷ & ಮಹಿಳಾ) ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆ ದಿನಾಂಕ ಪ್ರಕಟಿಸಿದೆ. ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳಿಗೆ ಸೂಚನೆಗಳನ್ನು ನೀಡಿದೆ.

ಲಿಖಿತ ಪರೀಕ್ಷೆಗೆ ಹಾಜರಾಗುವ ಸಂಬಂಧ ಕರೆಪತ್ರಗಳನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ www.ksp.gov.in ನಿಂದ ಪಡೆದುಕೊಳ್ಳಬಹುದಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Police Civil Written Exam On September 20 Directions To Candidates

ಅಭ್ಯರ್ಥಿಗಳಿಗೆ ಸೂಚನೆಗಳು

* ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಾಗ ಕೋವಿಡ್ 19 ಸಂಬಂಧ ಸುರಕ್ಷತಾ ಕ್ರಮವಾಗಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.

* ಅಭ್ಯರ್ಥಿಗಳಿಗೆ ಕೋವಿಡ್ 19 ಸೋಂಕಿನ ಯಾವುದಾದರೂ ಲಕ್ಷಣಗಳು ಇದ್ದರೆ ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿನ ವೈದ್ಯಕೀಯ ಸಿಬ್ಬಂದಿಗೆ ಮಾಹಿತಿ ನೀಡಬೇಕು.

* ಕೋವಿಡ್ 19 ಸಮುದಾಯಕ್ಕೆ ಹಡುವುದನ್ನು ತಡೆಗಟ್ಟಲು ಅಭ್ಯರ್ಥಿಗಳೇ ವಯಕ್ತಿಕ ಜವಾಬ್ದಾರಿಯನ್ನು ವಹಿಸಬೇಕು.

* ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯು ಪಾರದರ್ಶಕ, ಗಣಕೀಕೃತ, ಸಂಪೂರ್ಣ ವಸ್ತುನಿಷ್ಠ, ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ನಡೆಯಲಿದೆ.

* ಯಾವುದೇ ಅಭ್ಯರ್ಥಿಯು ಇಲಾಖೆ ಹೊರಗಾಗಲಿ, ಒಳಗಾಗಲಿ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ನೀಡಬಾರದು. ಮಧ್ಯವರ್ತಿಗಳ ಸುಳ್ಳು ಭರವಸೆಗಳಿಗೆ ಮಾರು ಹೋಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+