ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೊಲೀಸ್ ನೇಮಕಾತಿ ಲಿಖಿತ ಪರೀಕ್ಷೆ; ಅಭ್ಯರ್ಥಿಗಳಿಗೆ ಸೂಚನೆಗಳು

|
Google Oneindia Kannada News

ಮಂಡ್ಯ, ಸೆಪ್ಟೆಂಬರ್ 16 : ಕೋವಿಡ್ ಭೀತಿಯ ನಡುವೆಯೇ ಮಂಡ್ಯ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ನೇರ ನೇಮಕಾತಿ ಪರೀಕ್ಷೆ ನಡೆಯಲಿದೆ. ಸೆಪ್ಟೆಂಬರ್ 20ರಂದು ಪರೀಕ್ಷೆ ನಿಗದಿಯಾಗಿದೆ.

ಮಂಡ್ಯ ಜಿಲ್ಲಾ ಪೊಲೀಸ್‌ ಘಟಕದಲ್ಲಿ ಖಾಲಿ ಇರುವ 50 ಸಿವಿಲ್‌ ಪೊಲೀಸ್‌ (ಪುರುಷ & ಮಹಿಳಾ) ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆ ದಿನಾಂಕ ಪ್ರಕಟಿಸಿದೆ. ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳಿಗೆ ಸೂಚನೆಗಳನ್ನು ನೀಡಿದೆ.

ಸರ್ಕಾರಿ ಆಸ್ಪತ್ರೆಗೆ ಬರುವ ಮೃತದೇಹಗಳಿಗೆ ಆಂಟಿಜೆನ್ ಪರೀಕ್ಷೆಸರ್ಕಾರಿ ಆಸ್ಪತ್ರೆಗೆ ಬರುವ ಮೃತದೇಹಗಳಿಗೆ ಆಂಟಿಜೆನ್ ಪರೀಕ್ಷೆ

ಲಿಖಿತ ಪರೀಕ್ಷೆಗೆ ಹಾಜರಾಗುವ ಸಂಬಂಧ ಕರೆಪತ್ರಗಳನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ www.ksp.gov.in ನಿಂದ ಪಡೆದುಕೊಳ್ಳಬಹುದಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಮಂಡ್ಯ ತ್ರಿವಳಿ ಕೊಲೆ ಪ್ರಕರಣ; ಬಲೆಗೆ ಬಿದ್ದ ಐವರು ಆರೋಪಿಗಳು ಮಂಡ್ಯ ತ್ರಿವಳಿ ಕೊಲೆ ಪ್ರಕರಣ; ಬಲೆಗೆ ಬಿದ್ದ ಐವರು ಆರೋಪಿಗಳು

Police Civil Written Exam On September 20 Directions To Candidates

ಅಭ್ಯರ್ಥಿಗಳಿಗೆ ಸೂಚನೆಗಳು

* ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಾಗ ಕೋವಿಡ್ 19 ಸಂಬಂಧ ಸುರಕ್ಷತಾ ಕ್ರಮವಾಗಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.

ಮಂಡ್ಯ: ಮುಚ್ಚುವ ಹಂತದಲ್ಲಿ ಸಿಎಂ ಬಿಎಸ್ವೈ ಓದಿದ ಸರ್ಕಾರಿ ಶಾಲೆಮಂಡ್ಯ: ಮುಚ್ಚುವ ಹಂತದಲ್ಲಿ ಸಿಎಂ ಬಿಎಸ್ವೈ ಓದಿದ ಸರ್ಕಾರಿ ಶಾಲೆ

* ಅಭ್ಯರ್ಥಿಗಳಿಗೆ ಕೋವಿಡ್ 19 ಸೋಂಕಿನ ಯಾವುದಾದರೂ ಲಕ್ಷಣಗಳು ಇದ್ದರೆ ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿನ ವೈದ್ಯಕೀಯ ಸಿಬ್ಬಂದಿಗೆ ಮಾಹಿತಿ ನೀಡಬೇಕು.

* ಕೋವಿಡ್ 19 ಸಮುದಾಯಕ್ಕೆ ಹಡುವುದನ್ನು ತಡೆಗಟ್ಟಲು ಅಭ್ಯರ್ಥಿಗಳೇ ವಯಕ್ತಿಕ ಜವಾಬ್ದಾರಿಯನ್ನು ವಹಿಸಬೇಕು.

* ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯು ಪಾರದರ್ಶಕ, ಗಣಕೀಕೃತ, ಸಂಪೂರ್ಣ ವಸ್ತುನಿಷ್ಠ, ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ನಡೆಯಲಿದೆ.

Recommended Video

Pakistan, OIC ,Turkeyನ ತರಾಟೆಗೆ ತಗೊಂಡ India | Oneindia Kannada

* ಯಾವುದೇ ಅಭ್ಯರ್ಥಿಯು ಇಲಾಖೆ ಹೊರಗಾಗಲಿ, ಒಳಗಾಗಲಿ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ನೀಡಬಾರದು. ಮಧ್ಯವರ್ತಿಗಳ ಸುಳ್ಳು ಭರವಸೆಗಳಿಗೆ ಮಾರು ಹೋಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

English summary
Mandya district police announced written exam date for civil (men & women) post. Exam will be held on September 20, 2020. Here are the directions in the time of COVID pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X