ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಆರ್‌ಎಸ್‌ ಜಲಾಶಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

|
Google Oneindia Kannada News

ಮಂಡ್ಯ, ಏಪ್ರಿಲ್ 25: ಶ್ರೀಲಂಕಾದ ಕೊಲಂಬೋದಲ್ಲಿ ಉಗ್ರರು ಚರ್ಚ್ ಹಾಗೂ ಹೋಟೆಲ್‌ಗಳ ಮೇಲೆ ಸರಣಿ ಬಾಂಬ್ ಸ್ಫೋಟಿಸಿದ ಬೆನ್ನಲ್ಲೇ ಕೆ.ಆರ್.ಎಸ್ ಜಲಾಶಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ರಾಜ್ಯ ಕೈಗಾರಿಕಾ ಭದ್ರತಾ ಪಡೆಯನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಕೆ.ಆರ್.ಎಸ್ ಜಲಾಶಯ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದಿನಕ್ಕೆ ಮೂರ್ನಾಲ್ಕು ಬಾರಿ ತಪಾಸಣೆ ಮಾಡಲಾಗುತ್ತಿದೆ. ಅಲ್ಲದೆ ಜಲಾಶಯಕ್ಕೆ ಭೇಟಿ ನೀಡುವ ಪ್ರವಾಸಿಗರ ಮೇಲೆಯೂ ನಿಗಾವಹಿಸಲಾಗುತ್ತಿದ್ದು, ತಪಾಸಣೆ ನಡೆಸಿ ಬಿಡಲಾಗುತ್ತಿದೆ.

Police have been assigned to the KRS reservoir

ಶ್ರೀಲಂಕಾ ದಾಳಿ:ಮೈಸೂರಿನ ಸಂತ ಫಿಲೋಮಿನಾ ಚರ್ಚ್ ನಲ್ಲಿ ಶ್ರದ್ಧಾಂಜಲಿಶ್ರೀಲಂಕಾ ದಾಳಿ:ಮೈಸೂರಿನ ಸಂತ ಫಿಲೋಮಿನಾ ಚರ್ಚ್ ನಲ್ಲಿ ಶ್ರದ್ಧಾಂಜಲಿ

ಇನ್ನು ಮಂಡ್ಯ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಆಯಾ ಕಟ್ಟಿನ ಜಾಗಗಳಲ್ಲಿಯೂ ಪೊಲೀಸ್ ಭದ್ರತೆ ಮಾಡಲಾಗಿದೆ. ಪ್ರವಾಸಿಗರು ತೆರಳುವ ಮಳವಳ್ಳಿ ತಾಲೂಕಿನ ಶಿಂಷಾ ಬ್ಲಫ್, ಪ್ರಮುಖ ದೇವಾಲಯಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ತಪಾಸಣೆ ಮಾಡಲಾಗುತ್ತಿದ್ದು ಎಲ್ಲೆಡೆ ಹೈ ಅಲರ್ಟ್ ಮಾಡಲಾಗಿದೆ.

Police have been assigned to the KRS reservoir

 ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಮೈಸೂರಿನ 14 ಮಂದಿ ಸುರಕ್ಷಿತ ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಮೈಸೂರಿನ 14 ಮಂದಿ ಸುರಕ್ಷಿತ

ಭದ್ರತೆ ಕುರಿತಂತೆ ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ಡಿ. ಅವರ ನೇತೃತ್ವದಲ್ಲಿ ಶ್ವಾನದಳ, ಬಾಂಬ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಯಾವುದೇ ಆತಂಕದ ವಾತಾವರಣ ಇಲ್ಲ. ಆದರೂ ಬಸ್, ರೈಲ್ವೇ ನಿಲ್ದಾಣ, ಚರ್ಚ್, ಮಸೀದಿ, ದೇವಸ್ಥಾನಗಳು, ಸಿನಿಮಾ ಮಂದಿರಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

English summary
On the reason of Sri Lanka Bomb Blasts police have been assigned to the KRS reservoir. Three times a day is being checked. Travelers are also being monitored.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X