ಮಂಡ್ಯ ನಗದಲ್ಲಿ ಮತ್ತೆ ಕಾಣಿಸಿಕೊಂಡ ಮುಳ್ಳುಹಂದಿಗಳು, ಭಯದಲ್ಲಿ ಜನತೆ
ಮಂಡ್ಯ, ನವೆಂಬರ್ 10: ನಗರದ ಕಲ್ಲಹಳ್ಳಿ ವಿ.ವಿ. ನಗರದ ಖಾಲಿ ನಿವೇಶನದ ಪೊದೆಯೊಂದರಲ್ಲಿ ಬುಧವಾರ ರಾತ್ರಿ ಮುಳ್ಳು ಹಂದಿಗಳು ಕಾಣಿಸಿಕೊಂಡಿದ್ದು, ನಗರದ ಜನತೆಯಲ್ಲಿ ಆತಂಕ ಸೃಷ್ಟಿಸಿದೆ.
ವಿ.ವಿ. ನಗರದ 23ನೇ ಕ್ರಾಸ್‌ನಲ್ಲಿ ಮುಳ್ಳುಹಂದಿಗಳು ಕಾಣಿಸಿಕೊಂಡಿದ್ದವು. ಇದನ್ನು ನೋಡಿದ ಸಾರ್ವಜನಿಕರು ಅರಣ್ಯ ಇಲಾಖೆ ಹಾಗೂ ನಗರಸಭೆ ಸಿಬ್ಬಂದಿಗೆ ತಕ್ಷಣ ಮಾಹಿತಿ ನೀಡಿದ್ದಾರೆ.
ರಾತ್ರಿ 11ರ ಸಮಯದಲ್ಲಿ ಪೊದೆಯಲ್ಲಿ ಎರಡು ಮುಳ್ಳು ಹಂದಿಗಳು ಅವಿತು ಕುಳಿತಿದ್ದವು. ಸ್ಥಳೀಯರ ಮಾಹಿತಿಯ ಮೇರೆಗೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು ಬಲೆಯನ್ನು ಬಳಸಿ ಒಂದು ಮುಳ್ಳುಹಂದಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಮತ್ತೊಂದು ಮುಳ್ಳು ಹಂದಿ ತಪ್ಪಿಸಿಕೊಂಡು ಹೋಗಿದೆ.
ಕಳೆದ ಕೆಲ ದಿನಗಳ ಹಿಂದೆಯೂ ನಗರದ ತಾವರೆಗೆರೆ ಬಡಾವಣೆಯ ಬಚ್ಚಲು ಮನೆಯೊಂದರಲ್ಲಿ ಮುಳ್ಳುಹಂದಿಯೊಂದು ಕಾಣಿಸಿಕೊಂಡಿತ್ತು. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮುಳ್ಳುಹಂದಿಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದರು.

ಮಾರನೇ ದಿನ ಅಶೋಕನಗರದ ಜೋಡಿರಸ್ತೆಯಲ್ಲೂ ಸಹ ರಾತ್ರಿ 10 ಗಂಟೆ ಸಮಯದಲ್ಲಿ ರಾಜಾರೋಷವಾಗಿ ರಸ್ತೆಯಲ್ಲಿ ಮುಳ್ಳುಹಂದಿಗಳು ಓಡಾಡುತ್ತಿದ್ದವು. ಇದನ್ನು ಕಂಡ ಸಾರ್ವಜನಿಕರ ಗಲಾಟೆಯಿಂದ ಆತಂಕಗೊಂಡ ಮುಳ್ಳುಹಂದಿ ಚರಂಡಿಯೊಳಗೆ ಹೋಗಿ ಅವಿತುಕೊಂಡಿತ್ತು. ಕತ್ತಲಲ್ಲಿ ಮರೆಯಾದ ಮುಳ್ಳುಹಂದಿಗಾಗಿ ಹುಡುಕಾಟ ನಡೆಸಿದ್ದರು ಪತ್ತೆಯಾಗಿರಲಿಲ್ಲ.ಇದೀಗ ಕಲ್ಲಹಳ್ಳಿಯ ವಿ.ವಿ. ನಗರ ಬಡಾವಣೆಯಲ್ಲಿ ಎರಡು ಮುಳ್ಳುಹಂದಿಗಳು ಕಾಣಿಸಿಕೊಳ್ಳುವ ಮೂಲಕ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ.
ನಗರಸಭೆ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ನಿವೇಶನಗಳನ್ನು ಸ್ವಚ್ಚವಾಗಿಟ್ಟುಕೊಳ್ಳದೇ ಇರುವುದೇ ವನ್ಯಜೀವಿಗಳು ಅರಣ್ಯದಿಂದ ನಗರ ಪ್ರದೇಶಗಳತ್ತ ಬರುತ್ತಿವೆ. ನಗರಸಭೆ ಅಧಿಕಾರಿಗಳು ಖಾಲಿ ನಿವೇಶನಗಳ ಮಾಲೀಕರಿಗೆ ನೋಟೀಸ್ ನೀಡಿ ಗಿಡ ಗಂಟಿಗಳನ್ನು ಕಿತ್ತುಹಾಕಿ ಸ್ವಚ್ಚವಾಗಿಟ್ಟುಕೊಳ್ಳುವಂತೆ ತಾಕೀತು ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕೆಆರ್‌ಎಸ್ ಬಂದಾವನದಲ್ಲಿ ಚಿರತೆಗಾಗಿ ಮುಂದುವರಿದ ಶೋಧ
ಜಿಲ್ಲೆಯ ಶ್ರೀರಂಗಪಟ್ಟಣದ ಬಳಿಯಿರುವ ಕೆಆರ್‌ಎಸ್ ಜಲಾಶಯದ ಬೃಂದಾವನದಲ್ಲಿ ಕಳೆದ 20 ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಇದನ್ನು ಸೆರೆ ಹಿಡಿಯಲು ಶೋಧ ಕಾರ್ಯ ಮುಂದುವರಿದಿದೆ. ಕಳೆದ ಎರು ಮೂರುವ ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಕೆಆರ್‌ಎಸ್‌ನಲ್ಲೇ ಉಳಿದು ಚಿರತೆ ಸೆರೆಗೆ ಮಾಡಿದ ಎಲ್ಲಾ ಯೋಜನೆಗಳು ವಿಫಲವಾಗಿವೆ. ಇದು ಸ್ಥಳೀಯರಲ್ಲಿ ಹಾಗೂ ಕೆಆರ್‌ಎಸ್ ಸಿಬ್ಬಂದಿಗಳಲ್ಲಿ ಆತಂಕವನ್ನು ಉಂಟು ಮಾಡಿದೆ.
ಪ್ರವಾಸಿಗರಿಗೆ ನಿರ್ಬಂಧ
ಕೆಆರ್‌ಎಸ್ ಅಣೆಕಟ್ಟು, ಬಂದಾವನ ಗಾರ್ಡನ್ ಸುತ್ತಾಮುತ್ತಾ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೃಂದಾವನಕ್ಕೆ ಆಗಮಿಸುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications