• search
 • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಡಿಯೋ ವೈರಲ್: 'ಆ ಯಮ್ಮ ಏನೂ ಕೆಲಸ ಮಾಡಲ್ಲ'; ಸಂಸದೆ ಸುಮಲತಾ ವಿರುದ್ಧ ಪ್ರತಾಪ್ ಸಿಂಹ ಟೀಕೆ

|

ಮಂಡ್ಯ, ನವೆಂಬರ್ 14: ಮಂಡ್ಯ ಜಿಲ್ಲೆಯ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ, ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ ಎಂದು ಸಂಸದೆ ಸುಮಲತಾ ಅವರನ್ನು ಪ್ರತಾಪ್‌ ಸಿಂಹ ಟೀಕಿಸಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟೀಕಿಸಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಂಡ್ಯದಲ್ಲಿ ಗ್ರಾಪಂ ಚುನಾವಣೆಗೆ ಪುಟ್ಟಣ್ಣಯ್ಯ ಮಕ್ಕಳ ತಯಾರಿ

ಬೆಂಗಳೂರು-ಮೈಸೂರು ಹೆದ್ದಾರಿಯ ದಶಪಥ ಕಾಮಗಾರಿಯ ಬಗ್ಗೆ ಅಧಿಕಾರಿಯೊಬ್ಬರ ಜೊತೆ ಫೋನ್‌ನಲ್ಲಿ ಮಾತನಾಡುವ ವೇಳೆ ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ದೇವೇಗೌಡರ ಕುಟುಂಬದವರನ್ನು ಸೋಲಿಸಲು ಸುಮಲತಾ ಅವರನ್ನು ಗೆಲ್ಲಿಸಬೇಕಾಯಿತು. ಅವರು ಯಾವ ಕೆಲಸ ಮಾಡುವುದಕ್ಕೂ ಬಿಡುವುದಿಲ್ಲ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ.

ಸುಮಲತಾ ವಿರುದ್ಧ ಅಧಿಕಾರಿಯೊಬ್ಬರು ದೂರು ಹೇಳಿದಾಗ, ಸಂಸದೆ ಸುಮಲತಾ ವಿರುದ್ಧವೇ ಪ್ರತಾಪ್ ಸಿಂಹ ಮಾತನಾಡಿದ್ದಾರೆ. ಮಂಡ್ಯ ತಾಲೂಕಿನ ಯಲಿಯೂರು ಗ್ರಾಮಸ್ಥರ ಅಹವಾಲು ಸ್ವೀಕರಿಸಿ, ಅಧಿಕಾರಿಯೊಂದಿಗೆ ಪ್ರತಾಪ್ ಸಿಂಹ ಫೋನ್ ನಲ್ಲಿ ಈ ರೀತಿ ಮಾತನಾಡಿದರು.

ಇದರಿಂದ ಸಂಸದ ಪ್ರತಾಪ್ ಸಿಂಹ ವಿರುದ್ಧ ಮಂಡ್ಯ ಸಂಸದೆ ಸುಮಲತಾ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್ ಸಿಂಹ ವಿರುದ್ಧ ಟೀಕಾ ಪ್ರಹಾರ ಮಾಡಲಾಗುತ್ತಿದೆ.

   ಹಾಗಾದ್ರೆ ಈ ಆಟಗಾರರ ಭವಿಷ್ಯ !! | RCB | Oneindia Kannada

   ಸುಮಲತಾ ನಡೆಗೆ ಸಂಸದ ಪ್ರತಾಪ್ ಸಿಂಹ ಟೀಕೆ ಮಾಡಿರುವ ವಿಚಾರವಾಗಿ ಅಂಬರೀಶ್, ಸುಮಲತಾ ಅಭಿಮಾನಿಗಳು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ವೈಯಕ್ತಿಕ ವಿಷಯವನ್ನೆಲ್ಲಾ ಎಳೆದು ತರಾಟೆಗೆ ತೆಗೆದುಕೊಂಡರು.

   English summary
   The video goes viral, which criticized Mandya MP Sumalatha Ambarish by Mysuru-Kodagu MP Pratap Simha.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X