ಹೀಗೆ ಮಾಡದಿದ್ರೆ ನಾವೂ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ ಹುಷಾರ್: ಪ್ರತಾಪ್ ಸಿಂಹ ಎಚ್ಚರಿಕೆ ಕೊಟ್ಟಿದ್ಯಾರಿಗೆ?
ಮಂಡ್ಯ, ಸೆಪ್ಟೆಂಬರ್, 13: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಈ ವಿಚಾರ ರಾಜಕೀಯ ತಿರುವು ಪಡೆದುಕೊಂಡಿದೆ. ಇನ್ನೂ ಈ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಾಗಮಂಗದಲ್ಲಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳು ಬೈಕ್ ಶೋ ರೂಂ ಗಾಜುಗಳನ್ನು ಒಡೆಯುವುದಲ್ಲಿ, ಅಲ್ಲಿದೆ ಬೈಕ್‌ಗಳನ್ನು ಸುಟ್ಟುಹಾಕಿದ್ದಾರೆ. ಇನ್ನೂ ಈ ಸಂಬಂಧ ಪೊಲೀಸರು ಇಲ್ಲಿಯವರೆಗೂ 50ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಇದು ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.

ಘಟನೆ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ, ಮುಸ್ಲಿಮರ ಬಳಿ ಇರುವ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳಬೇಕು. ಇಲ್ಲದಿದ್ರೆ, ಇನ್ಮುಂದೆ ನಡೆಯುವ ಗಣೇಶ ಮೆರವಣಿಗೆ ಸಂದರ್ಭದಲ್ಲಿ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತದೆ. ಇನ್ನು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ನೇರ ಹೊಣೆ ಆಗಲಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯದ ಬೇರೆ-ಬೇರೆ ಜಿಲ್ಲೆಗಳಲ್ಲಿಯೂ ಅದ್ದೂರಿಯಾಗಿ ಗಣೇಶ ಮೆರವಣಿಗೆಗಳು ನಡೆಯುತ್ತವೆ. ಅಷ್ಟರೊಳಗೆ ಸರ್ಕಾರ ಮುಸ್ಲಿಂ ಪುಂಡರ ಮೇಲೆ ನಿಯಂತ್ರಣ ಕ್ರಮ ಕೈಗೊಳ್ಳನೇಕು. ಇಲ್ಲದಿದ್ದರೆ ನಮ್ಮ ರಕ್ಷಣೆ ಜವಾಬ್ದಾರಿ ನಮಗೆ ಗೊತ್ತಿದೆ ಎಂದು ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ. ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟದ ಗಲಭೆಯ ಬೆನ್ನಲ್ಲೇ ಪ್ರತಾಪ್ ಸಿಂಹ ಅವರು ಇದನ್ನು ಹೇಳಿದ್ದಾರೆ.
ಹಗರಣದ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದೇನು?: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಲೆದಂಡ ಖಚಿತ. ಮುಡಾ ಹಗರಣ ವಿಚಾರ ಕೋರ್ಟ್‌ನಲ್ಲಿದೆ. ಆ ವಿಚಾರ ಏನೇ ಆಗಲಿ ಅದು ಬೇರೆ ವಿಚಾರ. ಆದರೆ, ವಾಲ್ಮೀಕಿ ಹಗರಣದಲ್ಲಿ ಸಿಎಂ ತಲೆದಂಡ ಕಚಿತ. ಅರ್ಥಿಕ ಹಗರಣ ಆದಾಗ ಅದಕ್ಕೆ ಅರ್ಥಿಕ ಸಚಿವರೇ ಹೊಣೆಗಾರರು. ಸಿಎಂ ಅವರೇ 88 ಕೋಟಿ ರೂಪಾಯಿ ಅವ್ಯವಹಾರ ಆಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ವಾಲ್ಮೀಕಿ ನಿಗಮದ ಹಣದಲ್ಲಿ ಬಳ್ಳಾರಿ ಲೋಕಸಭಾ ಚುನಾವಣೆ ಮಾಡಲಾಗಿದ್ದು, ಆ ಹಣವನ್ನು ಮದ್ಯ ಖರೀದಿಗೆ ಬಳಕೆ ಮಾಡಿರುವುದು ಸಾಬೀತಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿಶ್ಚಿತ. ಇನ್ನು ಮುಡಾ ಹಗರಣ ವಿಚಾರದಲ್ಲಿ ನಾನು ಮೊದಲೇ ಸೈಟ್ ವಾಪಾಸ್ ಕೊಡಿ ಎಂದು ಹೇಳಿದ್ದೆ. ನನ್ನ ಕಾಳಜಿಯುತ ಸಲಹೆಯನ್ನು ಸಿಎಂ ಕೇಳಲಿಲ್ಲ. ಈಗ ಈ ವಿಚಾರವಾಗಿ ಮುಂಚಿತವಾಗಿಯೇ ರಾಜೀನಾಮೆ ಕೊಡಿ ಅಂದರೆ ನನ್ನಂತಹ ಸಣ್ಣವನ ಮಾತು ಅವರು ಕೇಳುತ್ತಾರಾ ಎಂದು ಪ್ರಶ್ನಿಸಿದರು.












Click it and Unblock the Notifications