• search
  • Live TV
ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯದಲ್ಲಿ ಪ್ರಥಮ ಬಾರಿಗೆ ಅಖಿಲ ಕರ್ನಾಟಕ ಜಾನಪದ ಸಮ್ಮೇಳನಕ್ಕೆ ಸಿದ್ದತೆ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ನವೆಂಬರ್‌, 10: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌ 9 ಮತ್ತು 10ರಂದು ಎರಡು ದಿನಗಳ ಕಾಲ ಅಖಿಲ ಕರ್ನಾಟಕ ಜಾನಪದ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಪ್ರೊ.ಹಿ.ಶಿ. ರಾಮಚಂದ್ರೇಗೌಡ ತಿಳಿಸಿದರು.

ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾ ಕೇಂದ್ರವಾಗಿರುವ ಮಂಡ್ಯದಲ್ಲಿ ಪ್ರಥಮ ಬಾರಿಗೆ ರಾಜ್ಯ ಮಟ್ಟದ 4ನೇ ಜಾನಪದ ಸಮ್ಮೇಳನ ನಡೆಯಲಿದೆ. ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಸಂಶೋಧಕ ಡಾ.ರಾಮೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ನಾಲ್ಕು ದಶಕಗಳ ಹಿಂದೆ ಮೊದಲ ಅಖಿಲ ಕರ್ನಾಟಕ ಜಾನಪದ ಸಮ್ಮೇಳನ ನಡೆದಿತ್ತು. ಮೂರು ದಶಕಗಳ ಹಿಂದೆ ನಾಗಮಂಗಲ ಪಟ್ಟಣದಲ್ಲಿ ಬೆಟಗೇರಿ ಕೃಷ್ಣಶರ್ಮ ಅವರ ಅಧ್ಯಕ್ಷತೆಯಲ್ಲಿ 2ನೇ ಸಮ್ಮೇಳನ ನಡೆಸಲಾಗಿತ್ತು. ಇದೀಗ ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ 4ನೇ ಸಮ್ಮೇಳನ ನಡೆಯಲಿದೆ ಎಂದು ವಿವರಿಸಿದರು.

ಹಿಂದೂಗಳ ಭಾವನೆಗೆ ಧಕ್ಕೆ: ಸತೀಶ್ ಜಾರಕಿಹೊಳಿ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆಹಿಂದೂಗಳ ಭಾವನೆಗೆ ಧಕ್ಕೆ: ಸತೀಶ್ ಜಾರಕಿಹೊಳಿ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆ

ಜನಪದ ಸಂಸ್ಕೃತಿಗಳ ಪುನರುತ್ಥಾನ ಮಾದರಿಯಲ್ಲಿ ಎರಡು ದಿನಗಳ ಕಾಲ ವಿಜೃಂಭಣೆಯಿಂದ ಸಮ್ಮೇಳನ ನಡೆಸಲಾಗುವುದು. 100ಕ್ಕೂ ಹೆಚ್ಚು ಜನಪದ ಕಲಾತಂಡಗಳು ಭಾಗವಹಿಸುವ ಈ ಸಮ್ಮೇಳನವು ಹೊಸ ಇತಿಹಾಸ ಸೃಷ್ಟಿಸಲಿದೆ. ಈ ಮೂಲಕ ಜನಪದ ಕಲಾವಿದರ ಸಮ್ಮಿಲನಕ್ಕೆ ಸಾಕ್ಷಿ ಆಗಲಿದೆ. ಹೀಗಾಗಿ ರಾಜ್ಯದ ನಾನಾ ಭಾಗಗಳಿಂದ ಕಲಾವಿದರು, ಜನಪದ ಸಂಘಟಕರು, ವಿದ್ವಾಂಸರು ಹಾಗೂ ಸಂಶೋಧನಾ ವಿದ್ಯಾರ್ಥಿಗಳನ್ನು ಆಹ್ವಾನಿಸಲಾಗಿದೆ ಎಂದು ಹೇಳಿದರು.

 ಕಾರ್ಯಕ್ರಮಗಳ ಸಂಪೂರ್ಣ ವಿವರ

ಕಾರ್ಯಕ್ರಮಗಳ ಸಂಪೂರ್ಣ ವಿವರ

ಮಂಡ್ಯ ಜಿಲ್ಲೆಯ ಜತೆಗೆ ನಾಡಿನ ನಾನಾ ಭಾಗದ ಹೆಸರಾಂತ ಜಾನಪದ ಕಲಾತಂಡಗಳನ್ನು ಆಹ್ವಾನಿಸಲಿದ್ದು, ಕಲಾ ಪ್ರದರ್ಶನ, ಗೀತಗಾಯನ ಹಾಗೂ ನಾಟಕ ಪ್ರದರ್ಶನ ಏರ್ಪಡಿಸಲು ನಿರ್ಧರಿಸಲಾಗಿದೆ. ಜೊತೆಗೆ ಅಂಬೇಡ್ಕರ್ ಭವನದ ಹೊರಾಂಗಣದಲ್ಲಿ ಎರಡು ದಿನಗಳ ಕಾಲ ಜಾನಪದ ವಸ್ತು ಸಂಗ್ರಹಾಲಯ ಮತ್ತು ಮಳಿಗೆಗಳನ್ನು ತೆರೆಯಲಾಗುವುದು. ಜುಗಲ್‌ಬಂದಿ ಮಾದರಿಯಲ್ಲಿ ಜನಪದ ಕಲೆಗಳ ಪ್ರದರ್ಶನ ನಡೆಸಲು ಚಿಂತಿಸಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಜಾನಪದ ಶೈಲಿಯ ಊಟೋಪಚಾರದ ವ್ಯವಸ್ಥೆ ಮಾಡಲಾಗುವುದು. ಆಹ್ವಾನಿತ ಕಲಾವಿದರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಅಂಬೇಡ್ಕರ್ ಭವನದ ಜೊತೆಗೆ ಜಿಲ್ಲಾಧಿಕಾರಿ ಕಚೇರಿ ಬಳಿ ಮತ್ತು ಗುತ್ತಲು ರಸ್ತೆಯ ಕುವೆಂಪು ಶತಮಾನೋತ್ಸವ ಮಾದರಿ ಶಾಲಾ ಆವರಣದಲ್ಲಿ ಸ್ಥಾಪಿಸುವ ಪರ್ಯಾಯ ವೇದಿಕೆಗಳಲ್ಲಿ ಜನಪದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

 ಸಮ್ಮೇಳನದ ನೆನಪಿಗಾಗಿ ಸ್ಮರಣ ಸಂಚಿಕೆ

ಸಮ್ಮೇಳನದ ನೆನಪಿಗಾಗಿ ಸ್ಮರಣ ಸಂಚಿಕೆ

ಮಂಡ್ಯದಲ್ಲಿ ಜನಪದ ಮೂಲ ಸಂಸ್ಕೃತಿಯನ್ನು ಪುನರ್ ಸೃಷ್ಟಿಸುವ ಸಮ್ಮೇಳನದ ನಿರ್ವಹಣೆಗಾಗಿ 13 ಉಪ ಸಮಿತಿಗಳನ್ನು ರಚಿಸಲಾಗಿದೆ. ಸಮ್ಮೇಳನದ ನೆನಪಿಗಾಗಿ ಸ್ಮರಣ ಸಂಚಿಕೆ ಹೊರತರಲಾಗುತ್ತಿದೆ. ಒಟ್ಟಾರೆ ಜನಪದ ಕಲಾವಿದರು, ವಿದ್ವಾಂಸರು, ಸಂಶೋಧಕರು ಮತ್ತು ವಿದ್ಯಾರ್ಥಿ ಯುವಜನರನ್ನು ಒಂದುಗೂಡಿಸುವ ಪ್ರಯತ್ನ ಈ ಸಮ್ಮೇಳನದ ಮೂಲಕ ನಡೆಯುತ್ತಿದೆ ಎಂದು ಹೇಳಿದರು.

 ಜಾನಪದ ಪರಿಷತ್ತಿನಿಂದ ಅನುದಾನ

ಜಾನಪದ ಪರಿಷತ್ತಿನಿಂದ ಅನುದಾನ

ನಂತರ ಸ್ವಾಗತ ಸಮಿತಿ ಸಂಘಟನಾ ಕಾರ್ಯದರ್ಶಿ ಕೆ.ಎಂ. ಕೃಷ್ಣೇಗೌಡ ಮಾತನಾಡಿ, ಸಮ್ಮೇಳನಕ್ಕೆ 25 ಲಕ್ಷ ರೂಪಾಯಿ ವೆಚ್ಚವಾಗುತ್ತಿದೆ. ಕರ್ನಾಟಕ ಜಾನಪದ ಪರಿಷತ್ತು 2 ಲಕ್ಷ ರೂಪಾಯಿ ಅನುದಾನ ನೀಡಿದೆ. ಉಳಿದ ಹಣವನ್ನು ದಾನಿಗಳಿಂದ ದೇಣಿಗೆ ಸಂಗ್ರಹಿಸಲಾಗುತ್ತಿದೆ. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ದಕ್ಷಿಣ ಕರ್ನಾಟಕ ಮೂರು ಪ್ರದೇಶಗಳ ನಾನಾ ಜನಪದ ಕಲೆಗಳು, ನಾಟಕಗಳನ್ನು ಸಮ್ಮೇಳನದಲ್ಲಿ ಪ್ರದರ್ಶಿಸಲಾಗುವುದು. ಡಿಸೆಂಬರ್‌ 6ರಂದು ಸಾಹಿತಿ ಡಾ.ಜೀಶಂಪ ಅವರ ಹುಟ್ಟೂರು ನಾಗಮಂಗಲ ತಾಲೂಕು ಅಂಬಲಜೀರಹಳ್ಳಿ ಗ್ರಾಮದಲ್ಲಿ ಎರಡು ಜನಪದ ಬಂಡಿಗಳ ಸಂಚಾರಕ್ಕೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.

 ಸುದ್ದಿಗೋಷ್ಠಿಯಲ್ಲಿ ಯಾರೆಲ್ಲ ಭಾಗಿ?

ಸುದ್ದಿಗೋಷ್ಠಿಯಲ್ಲಿ ಯಾರೆಲ್ಲ ಭಾಗಿ?

ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಎಂ.ಶ್ರೀನಿವಾಸ್, ಉಪಾಧ್ಯಕ್ಷ ಎ.ಸಿ.ರಮೇಶ್, ಪ್ರಧಾನ ಕಾರ್ಯದರ್ಶಿ ಡಿ.ಪಿ.ಸ್ವಾಮಿ, ಸಂಘಟನಾ ಕಾರ್ಯದರ್ಶಿ ಕೆ.ಎಂ.ಕೃಷ್ಣೇಗೌಡ ಕೀಲಾರ, ಪ್ರತಿಷ್ಠಾನದ ಅಧ್ಯಕ್ಷ ಶಿವರಾಜ್ ಕೀಲಾರ, ಪ್ರೊ.ಎಸ್.ಬಿ.ಶಂಕರೇಗೌಡ, ಜಿ.ಎಸ್.ಶಿವರುದ್ರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

English summary
Preparation for First time State level Akhila karnataka 4th folk festival in Mandya district on December 9th and 10, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X