ತುಂಬಿದ ಕೆಆರ್ ಎಸ್; ಜಲಾಶಯದ ಸುತ್ತ ಕಲ್ಲು ಗಣಿಗಾರಿಕೆಗೆ ನಿಷೇಧಾಜ್ಞೆ
ಮಂಡ್ಯ, ಆಗಸ್ಟ್ 22: ಕೆಆರ್ ಎಸ್ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದ ಸುತ್ತಲ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆಯನ್ನು ಸೆಪ್ಟೆಂಬರ್ 4ರವರೆಗೆ ನಿಷೇಧಿಸಲಾಗಿದೆ.
ಸುರಕ್ಷತೆಯ ದೃಷ್ಟಿಯಿಂದ ಕೆಆರ್ ಎಸ್ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ ಪಾಂಡವಪುರ ತಾಲೂಕು ತಹಶೀಲ್ದಾರ್ ಪ್ರಮೋದ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಕೆಆರ್ ಎಸ್ ಡ್ಯಾಂಗೆ ಬಣ್ಣದ ಬೆಳಕಿನ ಚಿತ್ತಾರ
ಜೊತೆಗೆ ಇತ್ತೀಚೆಗೆ ಜಲಾಶಯದ ಬಳಿ ಆರೇಳು ಬಾರಿ ಜೋರಾಗಿ ಶಬ್ದ ಕೇಳಿ ಬಂದಿತ್ತು. ಇದರಿಂದ ಸ್ಥಳೀಯ ಜನರು ಆತಂಕಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪಾಂಡವಪುರದ ಚಿನಕುರುಳಿ, ಹೊನಗಾನಹಳ್ಳಿ, ದೊಡ್ಡಭೋಗನಹಳ್ಳಿ, ಮೊಳೆಸಂದ್ರ, ಅಲ್ಪಳ್ಳಿ, ಕಟ್ಟೇರಿ, ಕಣಿವೆಕೊಪ್ಪಲು, ಚಂದ್ರೆ ಸೇರಿದಂತೆ ಸುತ್ತಮುತ್ತ ಪ್ರದೇಶದಲ್ಲಿ ನಿಷೇಧಾಜ್ಞೆ ಹೇರಲಾಗಿದೆ.