ಅಂಬೇಡ್ಕರ್ ನಾಮಫಲಕಕ್ಕೆ ಹಾನಿ; ಮಳವಳ್ಳಿಯಲ್ಲಿ ಪ್ರತಿಭಟನೆ

ಮಂಡ್ಯ, ಫೆಬ್ರವರಿ 11: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ನಾಮಫಲಕವನ್ನು ದುಷ್ಕರ್ಮಿಗಳು ಹಾನಿಗೊಳಿಸಿದ್ದನ್ನು ಖಂಡಿಸಿ ದಲಿತ ಸಮುದಾಯ ವತಿಯಿಂದ ಪ್ರತಿಭಟನೆ ನಡೆಯಿತು.

ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಕಿಡಿಗೇಡಿಗಳು ದುಷ್ಕೃತ್ಯ ಮೆರೆದಿದ್ದು, ಗ್ರಾಮದ ಪ್ರವೇಶ ದ್ವಾರದಲ್ಲಿ ಹಾಕಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ನಾಮಫಲಕಕ್ಕೆ ತಡರಾತ್ರಿ ಹಾನಿ ಮಾಡಿ ಪರಾರಿಯಾಗಿದ್ದಾರೆ. ಫಲಕದ ಮೇಲ್ಛಾವಣಿಯ ಗಾಜನ್ನು ಕಲ್ಲಿನಿಂದ ಒಡೆದು ಹಾಕಿದ್ದಾರೆ. ಇಂದು ಈ ಪ್ರಕರಣ ಖಂಡಿಸಿ ದಲಿತ ಸಮುದಾಯ ಪ್ರತಿಭಟನೆ ನಡೆಸಿತು.

Protest In Malavalli Condemning The Damage Of Ambedkars Nameplate

ರಸ್ತೆಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಅಂಗಡಿಗಳನ್ನು ಬಂದ್ ಮಾಡಿಸಿದರು. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+