ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಆರ್‌ಎಸ್ ಸುತ್ತ ಗಣಿಗಾರಿಕೆ ನಿಲ್ಲಿಸುವಂತೆ ಪುಣೆ ಟೆಕ್ನಿಕಲ್ ಟೀಂ ಸೂಚಿಸಿತ್ತು

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮಂಡ್ಯ, ಜುಲೈ 14: "ಪುಣೆಯಿಂದ ಬಂದಿದ್ದ ಟೆಕ್ನಿಕಲ್ ಟೀಂ ಕೆಆರ್‌ಎಸ್ ಜಲಾಶಯ ಬಳಿ ಗಣಿಗಾರಿಕೆ ಬಂದ್ ಮಾಡಿಸುವಂತೆ ಸೂಚನೆ ನೀಡಿತ್ತು,'' ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಹೇಳಿದ್ದಾರೆ.

"ನಾನು ಎರಡು ಬಾರಿ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕನಾಗಿದ್ದೆ. ನಮ್ಮ ಕಾಲದಲ್ಲೂ ಕೆಆರ್‌ಎಸ್ ಅಣೆಕಟ್ಟೆ ಬಗ್ಗೆ ಸಣ್ಣಪುಟ್ಟ ವ್ಯತ್ಯಾಸಗಳು ಕಂಡುಬಂದಿದ್ದವು. ಆಗ ಪುಣೆ ಟೆಕ್ನಿಕಲ್ ಟೀಂ ಸಲಹೆ ನೀಡಿತ್ತು," ಎಂದರು.

ಕೆಆರ್‌ಎಸ್ ಡ್ಯಾಂ ಕುರಿತು ಸಂಸದೆ 'ಸುಮಲತಾ ಅಂಬರೀಶ್ ಯುಟರ್ನ್ ಹೇಳಿಕೆ' ಹಿಂದಿನ ಕಾರಣ!ಕೆಆರ್‌ಎಸ್ ಡ್ಯಾಂ ಕುರಿತು ಸಂಸದೆ 'ಸುಮಲತಾ ಅಂಬರೀಶ್ ಯುಟರ್ನ್ ಹೇಳಿಕೆ' ಹಿಂದಿನ ಕಾರಣ!

ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಮೇಶ್ ಬಂಡಿಸಿದ್ದೇಗೌಡ, "ಪುಣೆ ಟೆಕ್ನಿಕಲ್ ಟೀಂ ಕೆಆರ್‌ಎಸ್ ಅಣೆಕಟ್ಟೆ ಸುತ್ತ ಸರ್ವೆ ಮಾಡಿತ್ತು. 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ಬಂದ್ ಮಾಡಿಸಬೇಕು ಎಂದು ಸಹ ಸೂಚಿಸಿತ್ತು. ಅಂದಿನ ಜಿಲ್ಲಾಧಿಕಾರಿಗಳು ಅದರ ಬಗ್ಗೆ ಕ್ರಮ ತೆಗೆದುಕೊಂಡಿದ್ದರು. ನಂತರ ಸರ್ಕಾರ ಬದಲಾವಣೆ ಆಯಿತು, ಆಗ ಅದರ ನಿಲುವು ಸಹ ಬದಲಾಗಿದೆ,'' ಎಂದು ತಿಳಿಸಿದರು.

Mandya: Pune Technical Team Suggests To Stop Mining Activities Around KRS Dam: Ramesh Bandisiddegowda

"ಈಗ ಮತ್ತೆ ಕೆಆರ್‌ಎಸ್ ಎದುರಾಗುವ ಸಮಸ್ಯೆ ಬಗ್ಗೆ ಚರ್ಚೆ ಆರಂಭವಾಗಿದ್ದು, ರಾಜ್ಯ ಸರ್ಕಾರ ಒಂದು ಟೆಕ್ನಿಕಲ್ ಟೀಂ ರಚನೆ ಮಾಡಲಿ. ವರದಿ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಿ."

Recommended Video

ದಲಿತ ಯುವಕನಿಗೆ ಮನಸ್ಸಿಗೆ ಬಂದಂತೆ ಹೊಡೆದ ದರ್ಶನ್ ಅಂಡ್ ಗ್ಯಾಂಗ್ | Oneindia Kannada

"ಇದು ಬಿಟ್ಟು ಅನವಶ್ಯಕವಾಗಿ ರಸ್ತೆಯಲ್ಲಿ ನಿಂತು ಜಗಳವಾಡುವುದರಿಂದ ಜನಸಾಮಾನ್ಯರು ನಮ್ಮ ಮೇಲೆ ಇಟ್ಟ ಗೌರವ ಕಡಿಮೆ ಆಗುತ್ತದೆ. ಸಣ್ಣಪುಟ್ಟ ಸಮಸ್ಯೆ ಬಿಟ್ಟರೆ ಕೆಆರ್‍ಎಸ್‌ನಲ್ಲಿ ಬೇರೆ ಸಮಸ್ಯೆಗಳಿಲ್ಲ. ಮುಂದೆ ಇದೇ ಸಮಸ್ಯೆ ದೊಡ್ಡದಾಗಬಾರದು,'' ಎಂದು ರಮೇಶ್ ಬಂಡಿಸಿದ್ದೇಗೌಡ ತಿಳಿ ಹೇಳಿದರು.

English summary
The Pune technical team had been instructed to top mining activities around KRS reservoir, Srirangapattana former MLA Ramesh Bandisiddegowda said that.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X