ಏ.13ರಂದು ಮಂಡ್ಯದಲ್ಲಿ ರಾಹುಲ್ ಗಾಂಧಿ ರೋಡ್ ಶೋ

ಮಂಡ್ಯ, ಏಪ್ರಿಲ್ 05 : ಮಂಡ್ಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಮತ ಯಾಚನೆ ಮಾಡಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ.

ಹೌದು, ಏಪ್ರಿಲ್ 13ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.

Rahul Gandhi road show in Mandya on April 13

ಮಂಡ್ಯ ಮತ್ತು ಕೆ.ಆರ್.ನಗರದಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದು, ಪ್ರಚಾರ ನಡೆಸಲಿದ್ದಾರೆ. ಈಗಾಗಲೇ ಕಲಬುರಗಿ ಮತ್ತು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆಗೆ ಪ್ರಚಾರ ನಡೆಸಿದ್ದಾರೆ. ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಪ್ರಚಾರ ಕೈಗೊಳ್ಳಲಿದ್ದಾರೆ.

ಮಂಡ್ಯದ ಚುನಾವಣಾ ಕಣದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರು ಎದುರಾಳಿಗಳು. ಕಾಂಗ್ರೆಸ್‌ ಸಹ ನಿಖಿಲ್ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿದೆ.

ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬೆಂಬಲ ಘೋಷಣೆ ಮಾಡಿದ್ದು ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಂಡು ಬರುವುದು ಎಚ್.ಡಿ.ಕುಮಾರಸ್ವಾಮಿ ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+