ಮಾಜಿ ಸಂಸದೆ ರಮ್ಯಾ ಮಂಡ್ಯದಲ್ಲಿ ಮನೆ ಖರೀದಿಸಿಲ್ಲ!

Posted By: Gururaj
Subscribe to Oneindia Kannada

ಮಂಡ್ಯ, ನವೆಂಬರ್ 13 : ಮಾಜಿ ಸಂಸದೆ ರಮ್ಯಾ ಮಂಡ್ಯದಲ್ಲಿ ಮನೆ ಖರೀದಿ ಮಾಡಿಲ್ಲ ಎಂದು ಮನೆ ಮಾಲೀಕರು ಸ್ಪಷ್ಟನೆ ಕೊಟ್ಟಿದ್ದಾರೆ. 'ಮನೆಯನ್ನು ಮಾರುವ ಚಿಂತನೆಯೂ ನಮ್ಮ ಮುಂದಿಲ್ಲ' ಎಂದು ಅವರು ಹೇಳಿದ್ದಾರೆ.

ಮಂಡ್ಯದಲ್ಲಿ ಹೊಸ ಮನೆ ಖರೀದಿ ಮಾಡಿದ ರಮ್ಯಾ!

ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಮಂಡ್ಯದಲ್ಲಿ ಮನೆ ಖರೀದಿ ಮಾಡಿದ್ದಾರೆ. ನ.29ರಂದು ಹೊಸ ಮನೆಗೆ ಆಗಮಿಸಿ, ಗೃಹ ಪ್ರವೇಶ ಮಾಡಿ, ಚುನಾವಣಾ ಕಾರ್ಯಗಳನ್ನು ಆರಂಭಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

ಅಭಿಮಾನಿಯಿಂದ ಮೋಹಕ ತಾರೆ ರಮ್ಯಾರಿಗೊಂದು ಪ್ರೀತಿಯ ಓಲೆ..

Ramya purchased new house, Owner denied the news

ಮನೆಯ ಮಾಲೀಕ ಸಾದತ್ ಅಲಿಖಾನ್ ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ. 'ರಮ್ಯಾ ಕೆ.ಆರ್‌.ರೋಡ್‌ನ ವಿದ್ಯಾನಗರದಲ್ಲಿರುವ ಮನೆಯನ್ನು ಬಾಡಿಗೆಗೆ ಪಡೆದಿದ್ದರು. ಆದರೆ, ಬಾಡಿಗೆಗೆ ಇದ್ದ ಮನೆಯನ್ನು ಖರೀದಿ ಮಾಡಿದ್ದಾರೆ' ಎಂಬ ಸುದ್ದಿ ಸುಳ್ಳು ಎಂದು ಹೇಳಿದ್ದಾರೆ.

ಮಂಡ್ಯ ರಾಜಕೀಯ : ರವೀಂದ್ರ ಶ್ರೀಕಂಠಯ್ಯಗೆ ಆಹ್ವಾನ ನೀಡಿದ ಎಚ್ಡಿಕೆ!

'ಅದು ನನ್ನ ತಂದೆಯವರು ಇದ್ದ ಮನೆ. ರಮ್ಯಾ ಅವರಿಗೆ ಬಾಡಿಗೆ ನೀಡಿದ್ದೇನೆ ಹೊರತು ಅದನ್ನು ಮಾರಿಲ್ಲ. ಆ ಮನೆ ಮೇಲೆ ಭಾವನಾತ್ಮಕ ಸಂಬಂಧವಿದೆ. ಅದನ್ನು ಮಾರುವ ಚಿಂತನೆಯೂ ನಮ್ಮ ಮುಂದಿಲ್ಲ' ಎಂದು ಮಾಲೀಕರು ಸ್ಪಷ್ಟಪಡಿಸಿದ್ದಾರೆ.

ರಮ್ಯಾ ಅವರು ಮಂಡ್ಯದಲ್ಲಿ ಮನೆ ಮಾಡಿ ಮುಂದಿನ ವಿಧಾನಸಭೆ ಚುನಾವಣೆಗೆ ಮಂಡ್ಯ ಅಥವ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈಗ ಮನೆ ಖರೀದಿ ಮಾಡಿಲ್ಲ ಎಂದು ಮಾಲೀಕರು ಸ್ಪಷ್ಟನೆ ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Former MP and AICC social media in-charge Ramya not purchased new house in Mandya, Karnataka. We have given house for only rent said House owner Saadat Ali Khan.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ