ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಳ್ಳವಳ್ಳಿಯಲ್ಲಿ ಅತ್ಯಾಚಾರ; ಮೃತೆ ಬಾಲಕಿ ಕುಟುಂಬಕ್ಕೆ ಜಮೀರ್‌ 5 ಲಕ್ಷ ನೆರವು

|
Google Oneindia Kannada News

ಮಂಡ್ಯ, ಅಕ್ಟೋಬರ್‌, 19: ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬದವರಿಗೆ ಶಾಸಕ ಜಮೀರ್ ಅಹ್ಮದ್‌ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.

ಮಳ್ಳವಳ್ಳಿಯಲ್ಲಿ 10 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿದ್ದಳು. ಇಂದು ಮೃತ ಬಾಲಕಿ ನಿವಾಸಕ್ಕೆ ಶಾಸಕ ಜಮೀರ್ ಅಹಮ್ಮದ್ ಭೇಟಿ ನೀಡಿ 5 ಲಕ್ಷ ರೂಪಾಯಿ ಪರಿಹಾರದ ಹಣವನ್ನು ಹಸ್ತಾಂತರಿಸಿದ್ದಾರೆ. ನಂತರ ಜಮೀರ್‌ ಬಾಲಕಿ ಪೋಷಕರಿಗೆ ಸಾಂತ್ವನ ಹೇಳುತ್ತಾ ಕಣ್ಣೀರಿಟ್ಟಿದ್ದಾರೆ.

ಮಂಡ್ಯ: ಮಳೆ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಗೇಟ್ ಮುರಿದು ಒಳ್ಳ ನುಗ್ಗಿ ಆಕ್ರೋಶಮಂಡ್ಯ: ಮಳೆ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಗೇಟ್ ಮುರಿದು ಒಳ್ಳ ನುಗ್ಗಿ ಆಕ್ರೋಶ

ಕಠಿಣ ಕ್ರಮ ಕೈಗೊಳ್ಳಲು ಜಮೀರ್ ಮನವಿ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಕೃತ್ಯ ಎಸಗಿದ ಪಾಪಿಯನ್ನು ಸಾರ್ವಜನಿಕರ ಮುಂದೆ ತುಂಡು ತುಂಡಾಗಿ ಕತ್ತರಿಸಬೇಕು." ಬಾಲಕಿ ಪೋಷಕರ ಗೋಳನ್ನು ನೋಡುವುದಕ್ಕೆ ಆಗುತ್ತಿಲ್ಲ. ಮನುಷ್ಯರಾದವರು ಯಾರು ಇಂತಹ ಕೃತ್ಯವನ್ನು ಮಾಡಲ್ಲ. ಕೃತ್ಯ ಇಸಗಿದವರು ಮನುಷ್ಯನಲ್ಲ, ಅವನು ರಾಕ್ಷಸನಿಗಿಂತ ಹೆಚ್ಚು. ಕೃತ್ಯಗೈದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸದಿದ್ದರೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತದೆ. ಈ ರೀತಿಯ ಪ್ರಕರಣಗಳಿಗೆ ಪ್ರತ್ಯೇಕ ಕಾನೂನು ಜಾರಿ ಮಾಡಬೇಕು ಎಂದು ಶಾಸಕ ಜಮೀರ್ ಅಹ್ಮದ್‌ ಸರ್ಕಾರಕ್ಕೆ ಮನವಿ ಮಾಡಿದರು‌.

Rape case in Mallavalli; Zameer Ahmed Khan gave 5 lakh compensation to victim family

ಸರ್ಕಾರದಿಂದ 10 ಲಕ್ಷ ರೂಪಾಯಿ ಪರಿಹಾರ

ಈಗಾಗಲೇ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬದವರಿಗೆ ಸರ್ಕಾರದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಲಾಗಿತ್ತು. ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಇಂದು ಕುಟುಂಬಸ್ಥರಿಗೆ ಚೆಕ್‌ ಹಸ್ತಾಂತರ ಮಾಡಿ ಸಾಂತ್ವನ ಹೇಳಿದ್ದರು. ಕುಂಭ ಮೇಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವ ಕೆ.ಗೋಪಾಲಯ್ಯ ಬಾಲಕಿ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಬಾಲಕಿಯ ಮೇಲೆ ನಡೆದಿರುವುದು‌ ಅಮಾನುಷ ಕೃತ್ಯವಾಗಿದ್ದು, ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಪರಿಹಾರವನ್ನು ಘೋಷಿಸಿದರು.

ಮಳ್ಳವಳ್ಳಿಯಲ್ಲಿ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಣೆಮಳ್ಳವಳ್ಳಿಯಲ್ಲಿ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ

ಚೆಕ್‌ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಷ್, ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ತಹಶೀಲ್ದಾರ್ ವಿಜಿಯಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Rape case in Mallavalli; Zameer Ahmed Khan gave 5 lakh compensation to victim family

ಕೃತ್ಯ ನಡೆದ ಹಿನ್ನೆಲೆ

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​ನಲ್ಲಿ ಬಾಲಕಿ ಶವ ಪತ್ತೆ ಆಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ನಡೆಸಿದಾಗ, ಇದು ಅತ್ಯಾಚಾರ ಮತ್ತು ಕೊಲೆ​ ಪ್ರಕರಣ ಎಂಬುದು ಬಯಾಲಾಯಿತು. ಮಧ್ಯಾಹ್ನ ಟ್ಯೂಷನ್​ಗೆ ತೆರಳಿದ್ದ ಬಾಲಕಿ ಎಷ್ಟು ಸಮಯ ಕಳೆದರೂ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​​ನಲ್ಲಿ ಬಾಲಕಿ ಶವ ಪತ್ತೆ ಆಗಿತ್ತು. ಸ್ಥಳಕ್ಕೆ ಮಳವಳ್ಳಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದರು. ಇದರ ನಡುವೆ ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆಗೈದಿರು ಬಗ್ಗೆ ಪೋಷಕರು ಆರೋಪ ಮಾಡಿದ್ದರು. ಸದ್ಯ ಇದೀಗ ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿದೆ. ಬಾಲಕಿಯನ್ನು ಕರೆಸಿಕೊಂಡು ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಟ್ಯೂಷನ್ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದರು.

English summary
Rape case in Malavalli, MLA Zameer Ahmed Khan distributed compensation of 5 lakh rupees to Victim family. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X