ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಆರ್‌ಎಸ್ ಸುತ್ತ ಕಲ್ಲು ಗಣಿಗಾರಿಕೆ; ಲೈಸೆನ್ಸ್ ನವೀಕರಣಕ್ಕೆ ಹಲವು ಅರ್ಜಿ

|
Google Oneindia Kannada News

ಮಂಡ್ಯ, ಆಗಸ್ಟ್ 24; ಕೆಆರ್‌ಎಸ್ ಜಲಾಶಯದ ಸುತ್ತ-ಮುತ್ತಲಿನ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಿಷೇಧಿಸಲಾಗಿದೆ. ಗಣಿಗಾರಿಕೆಯ ಲೈಸೆನ್ಸ್‌ ನವೀಕರಣ ಮಾಡಬೇಕು ಎಂದು ಸರ್ಕಾರಕ್ಕೆ ಹಲವು ಅರ್ಜಿಗಳನ್ನು ಬಂದಿವೆ. ಪರಿಸ್ಥಿತಿ ಅವಲೋಕನದ ಬಳಿಕ ಸರ್ಕಾರ ಈ ಕುರಿತು ತೀರ್ಮಾನ ಕೈಗೊಳ್ಳಲಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೆಆರ್‌ಎಸ್ ಜಲಾಶಯವಿದೆ. ಡ್ಯಾಂ ಸುತ್ತ ಕಲ್ಲು ಗಣಿಗಾರಿಕೆ ಮಾಡುವುದರಿಂದ ಜಲಾಶಯಕ್ಕೆ ಅಪಾಯವಿದೆ ಎಂಬ ಬಗ್ಗೆ ವರದಿಗಳಿವೆ. ಗಣಿಗಾರಿಕೆ ನಿಲ್ಲಿಸಬೇಕು ಎಂದು ಸಂಸದೆ ಸುಮಲತಾ ಕೇಂದ್ರ ಸಚಿವರಿಗೆ ಸಹ ಮನವಿ ಮಾಡಿದ್ದಾರೆ.

ಕೆಆರ್‌ಎಸ್ ಸುತ್ತ ಗಣಿಗಾರಿಕೆ; ಕೇಂದ್ರ ಸಚಿವರನ್ನು ಭೇಟಿಯಾದ ಸುಮಲತಾ ಕೆಆರ್‌ಎಸ್ ಸುತ್ತ ಗಣಿಗಾರಿಕೆ; ಕೇಂದ್ರ ಸಚಿವರನ್ನು ಭೇಟಿಯಾದ ಸುಮಲತಾ

ಪ್ರಸ್ತುತ ಸರ್ಕಾರ, ಜಿಲ್ಲಾಡಳಿತ ಬೇಬಿ ಬೆಟ್ಟ ಸೇರಿದಂತೆ ಕೆಆರ್‌ಎಸ್ ಜಲಾಶಯದ ಸುತ್ತ-ಮುತ್ತಲ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಈಗ ಸರ್ಕಾರಕ್ಕೆ ಗಣಿಗಾರಿಕೆ ಲೈಸೆನ್ಸ್ ನವೀಕರಣ ಮಾಡಿ ಎಂದು ಹಲವು ಮನವಿಗಳು ಬಂದಿವೆ.

ಮಂಡ್ಯ: ಅಕ್ರಮ ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಸಮರ...ಮಂಡ್ಯ: ಅಕ್ರಮ ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಸಮರ...

ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಈ ಕುರಿತು ಮಾತನಾಡಿದ್ದು, "ಸರ್ಕಾರ ವಿವರವಾಗಿ ಪರಿಶೀಲನೆ ನಡೆಸಿದ ಬಳಿಕ ಲೈಸೆನ್ಸ್ ನವೀಕರಣ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಹೇಳಿದ್ದಾರೆ.

KRS Dam

"ಗಣಿಗಾರಿಕೆ ನಡೆಸಿದರೆ ಕೆಆರ್‌ಎಸ್ ಜಲಾಶಯಕ್ಕೆ ಅಪಾಯ ಉಂಟಾಗಲಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ. ಈ ಕುರಿತ ಪರಿಶೀಲಿಸಲು ಮಂಡ್ಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ" ಎಂದು ಸಚಿವರು ತಿಳಿಸಿದ್ದಾರೆ.

"ಕೆಆರ್‌ಎಸ್ ಜಲಾಶಯದ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಡ್ಯಾಂ ಸುತ್ತಮುತ್ತಲ ಪ್ರದೇಶಗಳಲ್ಲಿ ಈಗ ಕಲ್ಲು ಗಣಿಗಾರಿಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ" ಎಂದು ಸಚಿವ ಹಾಲಪ್ಪ ಆಚಾರ್ ಸ್ಪಷ್ಟಪಡಿಸಿದರು.

ಕೆಆರ್‌ಎಸ್ ಡ್ಯಾಂ ಬಿರುಕು ವಿವಾದದ ಬೆನ್ನಲ್ಲೇ ಡ್ಯಾಂ ಮೆಟ್ಟಿಲಿನ ಕಲ್ಲು ಕುಸಿತ!ಕೆಆರ್‌ಎಸ್ ಡ್ಯಾಂ ಬಿರುಕು ವಿವಾದದ ಬೆನ್ನಲ್ಲೇ ಡ್ಯಾಂ ಮೆಟ್ಟಿಲಿನ ಕಲ್ಲು ಕುಸಿತ!

ಕೆಆರ್‌ಎಸ್ ಸುತ್ತಲಿನ ಅಕ್ರಮ ಕಲ್ಲು ಗಣಿಗಾರಿಕೆ ವಿಚಾರ ರಾಜಕೀಯ ಸ್ವರೂಪ ಪಡೆದಿದೆ. ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಮತ್ತು ಜೆಡಿಎಸ್ ನಾಯಕರ ನಡುವೆ ಈ ವಿಚಾರದಲ್ಲಿ ವಾಕ್ಸಮರ ನಡೆದಿದೆ.

ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ. ಸಿ. ನಾರಾಯಣ ಗೌಡ, "ಡ್ಯಾಂ ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆಯನ್ನು ಸ್ಥಗಿತಮಾಡುವುದು ಉತ್ತಮ. ದೇಶದ ಬೇರೆ ಬೇರೆ ಅಣೆಕಟ್ಟು ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಿಲ್ಲಿಸಿರುವ ಉದಾಹರಣೆ ಇದೆ. ಅದೇ ರೀತಿ ಮಂಡ್ಯ ಜಿಲ್ಲೆಯಲ್ಲೂ ಕ್ರಮ ತೆಗೆದುಕೊಳ್ಳುವುದು ಉತ್ತಮ" ಎಂದು ಹೇಳಿದ್ದರು.

"ಕೆಲವು ಅಧಿಕಾರಿಗಳ ಸಹಕಾರ ಮತ್ತು ನಿರ್ಲಕ್ಷ್ಯದಿಂದಲೇ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಡ್ಯಾಂ ಸುತ್ತ ಗಣಿಗಾರಿಕೆ ನಡೆಯುತ್ತಿದೆ, ಅಲ್ಲಿ ಸ್ಪೋಟ ನಡೆದಾಗ ಸುತ್ತಲಿನ ಜನರಿಗೆ ಗೊತ್ತಾಗುತ್ತೆ. ಆದರೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ" ಎಂದು ಸಚಿವರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

"ನಮ್ಮ ಜಿಲ್ಲೆಯಲ್ಲಿ 95ಕ್ಕು ಹೆಚ್ಚು ಕಲ್ಲು ಗಣಿಗಾರಿಕೆ ಇದೆ. ಬೇರೆ ಜಿಲ್ಲೆಗಳಲ್ಲಿ ಇದಕ್ಕಿಂತ ಕಡಿಮೆ ಇದೆ. ಅಲ್ಲಿ ಸಾವಿರಾರು ಕೋಟಿ ರಾಜಧನ ಸಂಗ್ರಹವಾಗುತ್ತಿದೆ. ಆದರೆ ಮಂಡ್ಯ ಜಿಲ್ಲೆಯಲ್ಲಿ ಸರಿಯಾಗಿ ರಾಯಲ್ಟಿ ಸಂಗ್ರಹವಾಗುತ್ತಿಲ್ಲ. ಅಧಿಕಾರಿಗಳು ತಕ್ಷಣ ದೋಷವನ್ನು ಸರಿಪಡಿಸಬೇಕು" ಎಂದು ಸೂಚನೆ ನೀಡಿದ್ದರು.

ಸಂಸದೆ ಸುಮಲತಾ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ತಮ್ಮ ಹೋರಾಟ ಮುಂದುವರೆಸಿದ್ದಾರೆ. ಕೇಂದ್ರ ಸಚಿವರಿಗೆ ಡ್ಯಾಂ ಸುತ್ತಮತ್ತಲೂ ಗಣಿಗಾರಿಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಎಂದು ಮನವಿ ಸಲ್ಲಿಕೆ ಮಾಡಿದ್ದಾರೆ. ಸಂಸತ್ತಿನಲ್ಲಿಯೂ ಈ ವಿಚಾರ ಪ್ರಸ್ತಾಪಿಸಿದ್ದಾರೆ.

ಟಾಸ್ಕ್ ಪೋರ್ಸ್ ರಚನೆ; ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಗೆ ಟಾಸ್ಕ್ ಪೋರ್ಸ್ ರಚನೆ ಮಾಡಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲಿಸ್ ಇಲಾಖೆ, ಆರ್‌ಟಿಓ, ಕಂದಾಯ, ಪಂಚಾಯತ್ ರಾಜ್ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಈ ಟಾಸ್ಕ್ ಪೋರ್ಸ್‌ನಲ್ಲಿದ್ದಾರೆ.

Recommended Video

ಕ್ರಿಕೆಟ್ ದಿಗ್ಗಜ ನಿಂದ ಕಿಚ್ಚ ಸುದೀಪ್ ಗೆ ಬರ್ತಡೇ ಗೂ ಮುನ್ನ ಸಿಕ್ತು ವಿಶೇಷ ಗಿಫ್ಟ್ | Oneindia Kannada

ಈ ಟಾಸ್ಕ್ ಫೋರ್ಸ್ ಜಿಲ್ಲೆಯಲ್ಲಿ ನಡೆಯುತ್ತಿರು ಗಣಿಗಾರಿಕೆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದೆ. ಅಕ್ರಮ ಗಣಿಗಾರಿಕೆ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಿದೆ. ವಾಹನಗಳ ತಪಾಸಣೆ ಸರಿಯಾಗಿ ನಡೆಯಬೇಕು, ಕಲ್ಲು ಸಾಗಿಸುವ ಲಾರಿಗಳ ಮೇಲೆ ನಿಗಾ ಇಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

English summary
Karnataka government has received several requests to renew quarrying license near Krishnaraja Sagar dam, Mandya. Government will take a call on this after thoroughly reviewing them said minister for mines and geology Halappa Achar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X