ಮಂಡ್ಯದಲ್ಲಿ ರಸ್ತೆ ಗುಂಡಿಗೆ ಬಲಿಯಾದ ನಿವೃತ್ತ ಯೋಧ, ಮಡುಗಟ್ಟಿದ ಶೋಕ

ಮಂಡ್ಯ, ನ.14: ಬೆಂಗಳೂರಿನಲ್ಲಿ ವರದಿಯಾಗುತ್ತಿದ್ದ ರಸ್ತೆ ಗುಂಡಿ ದುರಂತದ ಪ್ರಕರಣಗಳು ಈಗ ಬೇರೆ ಜಿಲ್ಲೆಗಳಲ್ಲಿಯೂ ವರದಿಯಾಗಲು ಆರಂಭವಾಗಿವೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ನಿವೃತ್ತ ಯೋಧರೊಬ್ಬರು ಅಪಘಾತದಲ್ಲಿ ನಿಧನರಾಗಿರುವ ದುರಂತ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ನಿವೃತ್ತ ಯೋಧರನ್ನು ಎಸ್.ಎನ್ ಕುಮಾರ್ (39) ಎಂದು ಗುರುತಿಸಲಾಗಿದೆ. ರಸ್ತೆ ಗುಂಡಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ಇನ್ನೊಂದು ಬೈಕ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದೆ. ಕೆಳಗೆ ಬಿದ್ದಿದ್ದ ಕುಮಾರ್ ಮೇಲೆ ಹಿಂದಿನಿಂದ ಬಂದ ಲಾರಿ ಹತ್ತಿದ್ದು ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Retired Soldier Died In A Road Accident While Trying To Avoid Pothole

ಮೃತ ನಿವೃತ್ತ ಯೋಧ ತಮ್ಮ ತಂದೆ ಜೊತೆ ಬೈಕ್‍ನಲ್ಲಿ ಸಾತನೂರಿನಿಂದ ಮಂಡ್ಯಗೆ ಬರುತ್ತಿದ್ದ ವೇಳೆ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಗುಂಡಿಗಳನ್ನು ಮುಚ್ಚಿ ಜನರ ಜೀವ ಉಳಿಸಲು ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+