ಅಡುಗೆ ಅನಿಲಕ್ಕೆ ಸಬ್ಸಿಡಿಗಾಗಿ ಕೆವೈಸಿ ನೋಂದಣಿ ವದಂತಿ: ಕ್ಯೂನಲ್ಲಿ ನಿಂತ ಜನರು
ಮಂಡ್ಯ, ಡಿಸೆಂಬರ್ 30: ಅಡುಗೆ ಅನಿಲಕ್ಕೆ ಸಬ್ಸಿಡಿ ಪಡೆಯುತ್ತಿರುವವರು ಕೆವೈಸಿ ಮಾಡಿಸುವುದು ಕಡ್ಡಾಯ. ಕೆವೈಸಿ ಮಾಡಿಸುವುದಕ್ಕೆ ಡಿ.31 ಕೊನೆಯ ದಿನ. ಇಂತಹದೊಂದು ಸುಳ್ಳು ಸುದ್ದಿ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಾ ದೊಡ್ಡ ಅವಾಂತರವನ್ನೇ ಸೃಷ್ಟಿಸಿದೆ.
ಈ ಸುಳ್ಳು ಸುದ್ದಿಯನ್ನು ನಂಬಿ ಅಡುಗೆ ಅನಿಲ ಸಬ್ಸಿಡಿದಾರರು ಗ್ಯಾಸ್ ಅಂಗಡಿಗಳಿಗೆ ಮುಗಿಬೀಳುತ್ತಿದ್ದಾರೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಜನರು ಅಂಗಡಿಗಳ ಎದುರು ಜಮಾಯಿಸುತ್ತಿದ್ದು, ಕೆವೈಸಿ ಮಾಡಿಸುವುದಕ್ಕೆ ನೂಕುನುಗ್ಗಲು ನಡೆಸುತ್ತಿದ್ದಾರೆ. ಇದರ ಪರಿಣಾಮ ಎಲ್ಲಾ ಗ್ಯಾಸ್ ಅಂಗಡಿಗಳ ಮುಂದೆ ಜನರ ಉದ್ದನೆಯ ಸಾಲು ಕಂಡುಬರುತ್ತಿದೆ.

ಗ್ಯಾಸ್ ಸಬ್ಸಿಡಿ ಪಡೆಯುತ್ತಿರುವವರು ತಾವು ಪಡೆಯುತ್ತಿರುವ ಸೌಲಭ್ಯ ಎಲ್ಲಿ ಸ್ಥಗಿತವಾಗುವುದೋ ಎಂಬ ಭಯ ಮತ್ತು ಆತಂಕದಿಂದ ಮುಂಜಾನೆಯೇ ಎದ್ದು ಗ್ಯಾಸ್ ಅಂಗಡಿಗಳ ಎದುರು ದಾಖಲೆಗಳೊಂದಿಗೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಡಿ.31ರೊಳಗೆ ಕೆವೈಸಿ ಮಾಡಿಸಿಕೊಳ್ಳುವುದಕ್ಕೆ ಎಲ್ಲಾ ಕೆಲಸ ಬಿಟ್ಟು ಕಾದು ಕೂರುತ್ತಿದ್ದಾರೆ. ಕೇಳಿದಷ್ಟು ಹಣ ಕೊಟ್ಟು ಕೆವೈಸಿ ಮಾಡಿಸಿಕೊಳ್ಳುತ್ತಿರುವುದು ಎಲ್ಲೆಡೆ ಕಾಣುತ್ತಿರುವ ಸಾಮಾನ್ಯ ದೃಶ್ಯವಾಗಿದೆ.
ಕೊನೆಯ ದಿನಾಂಕ ನಿಗದಿಪಡಿಸಿಲ್ಲ :
ಗ್ಯಾಸ್ ಸಬ್ಸಿಡಿ ಪಡೆಯುತ್ತಿರುವವರು ಕೆವೈಸಿ ಮಾಡಿಸುವುದು ಕಡ್ಡಾಯ ಮಾಡಿದ್ದರೂ ಅದಕ್ಕೆ ಅಂತಿಮ ದಿನಾಂಕವನ್ನು ನಿಗದಿಪಡಿಸಿಲ್ಲ. ಈ ಸಂಬಂಧ ಅಡುಗೆ ಅನಿಲ ನಿಯಂತ್ರಣ ಇಲಾಖೆಯಾಗಲೀ, ಆಹಾರ ಇಲಾಖೆಯವರಾಗಲೀ ಅಧಿಕೃತ ಪ್ರಕಟಣೆಯನ್ನೂ ಹೊರಡಿಸಿಲ್ಲ. ಕೆವೈಸಿಯನ್ನು ಗ್ಯಾಸ್ ಅಂಗಡಿಗೆ ಬಂದು ಮಾಡಿಸುವ ಅಗತ್ಯವೂ ಇಲ್ಲ. ಅಡುಗೆ ಅನಿಲವನ್ನು ಮನೆಗೆ ಪೂರೈಸಲು ಬರುವವರಿಗೆ ದಾಖಲೆಗಳನ್ನು ಕೊಟ್ಟು ಕೆವೈಸಿ ಮಾಡಿಸಬಹುದು. ಆದರೆ, ಈ ವಿಚಾರ ಬಹುತೇಕರಿಗೆ ಗೊತ್ತಿಲ್ಲದ ಕಾರಣ ಎಲ್ಲರೂ ಒಮ್ಮೆಲೆ ಗ್ಯಾಸ್ ಅಂಗಡಿಗಳಿಗೆ ಮುಗಿಬೀಳಲಾರಂಭಿಸಿದ್ದಾರೆ.
ಎಷ್ಟು ಹೇಳಿದರೂ ಕೇಳುತ್ತಿಲ್ಲ..!
ಕೆವೈಸಿ ಮಾಡಿಸುವುದಕ್ಕೆ ಸರ್ಕಾರ ಕೊನೆಯ ದಿನಾಂಕ ನಿಗದಿಪಡಿಸಿಲ್ಲ. ಮನೆಗೆ ಬಂದಾಗಲೂ ದಾಖಲೆಗಳನ್ನು ಕೊಟ್ಟು ಮಾಡಿಸಬಹುದಾಗಿದೆ ಎಂದು ಜನರಿಗೆ ಹೇಳುತ್ತಿದ್ದೇವೆ. ಆದರೆ, ಅವರು ನಮ್ಮ ಮಾತನ್ನು ಕೇಳುತ್ತಿಲ್ಲ. ಡಿ.31ಕ್ಕೆ ಕೊನೆಯ ದಿನವಾಗಿದೆ. ಅದಕ್ಕಾಗಿ ಕೆವೈಸಿ ಮಾಡಿಕೊಡುವಂತೆ ಮುಗಿಬೀಳುತ್ತಿದ್ದಾರೆ ಎಂದು ಗ್ಯಾಸ್ ಏಜೆನ್ಸಿಯವರು ತಿಳಿಸಿದ್ದಾರೆ.
ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಯನ್ನು ನಂಬಿ ಬೆಳಗ್ಗೆಯಿಂದ ಸಂಜೆಯವರೆಗೂ ಅಂಗಡಿಗಳ ಎದುರು ಜನರು ಕ್ಯೂ ನಿಲ್ಲುತ್ತಿದ್ದಾರೆ. ಜನರ ಒತ್ತಡಕ್ಕೆ ಮಣಿದು ಕೆವೈಸಿ ಮಾಡಿಕೊಡುತ್ತಿದ್ದೇವೆ. ಆದರೆ, ಜನರು ಮಾತ್ರ ದಿನೇ ದಿನೇ ಹೆಚ್ಚಾಗುತ್ತಿದ್ದಾರೆಯೇ ವಿನಃ ಕಡಿಮೆಯಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ.
ಗ್ಯಾಸ್ ಏಜೆನ್ಸಿಗಳೆದುರು ಜನವೋ ಜನ :
ಕೆವೈಸಿ ಮಾಡಿಸಿಕೊಳ್ಳುವುದಕ್ಕೆ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಗ್ಯಾಸ್ ಏಜೆನ್ಸಿಗಳ ಎದುರು ಜನರು ತುಂಬಿರುತ್ತಾರೆ. ನಗರದ ನೂರಡಿ ರಸ್ತೆ, ಚಾಮುಂಡೇಶ್ವರಿ ನಗರ, ಬಂದೀಗೌಡ ಬಡಾವಣೆ ಸೇರಿದಂತೆ ಎಲ್ಲೆಲ್ಲಿ ಗ್ಯಾಸ್ ಅಂಗಡಿಗಳಿವೆಯೋ ಅಲ್ಲೆಲ್ಲಾ ಜನದಟ್ಟಣೆ ಹೆಚ್ಚಾಗಿದೆ. ಇದರಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಇದರ ಬಗ್ಗೆ ಜನರಿಗೆ ಸರಿಯಾಗಿ ಮಾಹಿತಿಯನ್ನು ನೀಡುವಲ್ಲಿಯೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಸೂಕ್ತ ಕ್ರಮವಹಿಸಿಲ್ಲದ ಕಾರಣ ಜನರಲ್ಲಿ ಗೊಂದಲ ಮನೆಮಾಡಿದೆ. ಗ್ಯಾಸ್ ಏಜೆನ್ಸಿಗಳ ಎದುರು ನಾಮಫಲಕ ಅಳವಡಿಸಿ ಕೆವೈಸಿ ಮಾಡಿಸುವ ಸಂಬಂಧ ಜನರಲ್ಲಿರುವ ಗೊಂದಲವನ್ನು ದೂರ ಮಾಡುವ ಕೆಲಸಕ್ಕೂ ಯಾರೂ ಮುಂದಾಗಿಲ್ಲ. ಇದರ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತ್ವರಿತ ಕ್ರಮ ಜರುಗಿಸುವುದು ಅಗತ್ಯವಾಗಿದೆ.
ಗ್ಯಾಸ್ ಸಬ್ಸಿಡಿದಾರರು ಕೆವೈಸಿ ಮಾಡಿಸುವುದಕ್ಕೆ ಆತುರಪಡುವುದು ಬೇಡ. ಡಿ.31 ಕೊನೆಯ ದಿನವೂ ಅಲ್ಲ. ಈ ಬಗ್ಗೆ ಅಡುಗೆ ಅನಿಲ ನಿಯಂತ್ರಣ ಇಲಾಖೆಯಾಗಲೀ, ಆಹಾರ ಇಲಾಖೆಯವರಾಗಲೀ ಅಧಿಕೃತ ಪ್ರಕಟಣೆಯನ್ನೂ ಹೊರಡಿಸಿಲ್ಲ. ಕೆವೈಸಿಯನ್ನು ಮನೆಗೆ ಅಡುಗೆ ಅನಿಲ ಪೂರೈಸಲು ಬಂದಾಗಲೂ ಮಾಡಿಸಬಹುದು. ಗ್ಯಾಸ್ ಅಂಗಡಿಗಳಿಗೇ ಹೋಗಿ ಮಾಡಿಸಬೇಕಿಲ್ಲ. ಯಾರೋ ಸಾಮಾಜಿಕ ಜಾಲ ತಾಣದಲ್ಲಿ ಹರಡಿರುವ ಸುಳ್ಳು ಸುದ್ದಿಯನ್ನು ನಂಬಿ ಗಾಬರಿಗೊಳಗಾಗುವುದು ಬೇಡ ಎಂದು ಆಹಾರ ಇಲಾಖೆ ಉಪ ನಿರ್ದೇಶಕ ಎಂ.ಪಿ.ಕೃಷ್ಣಕುಮಾರ್ ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications