ಪಾಂಡವಪುರ: ಬೇಬಿಬೆಟ್ಟದ ಶ್ರೀ ಸದಾಶಿವ ಸ್ವಾಮೀಜಿ ಇನ್ನಿಲ್ಲ
ಪಾಂಡವಪುರ, ಜುಲೈ.04: ತಾಲೂಕಿನ ಬೇಬಿಬೆಟ್ಟದ ಶ್ರೀ ರಾಮಯೋಗೇಶ್ವರ ಮಠದ ಶ್ರೀ ಸದಾಶಿವ ಸ್ವಾಮೀಜಿ ( 60) ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ಕಳೆದ ರಾತ್ರಿ ಬೆಂಗಳೂರಿಗೆ ಭಕ್ತರ ಕುಟುಂಬಸ್ಥರ ವಿವಾಹಕ್ಕೆಂದು ಆಗಮಿಸಿದ್ದ ಸ್ವಾಮೀಜಿ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ರಾತ್ರಿ ಭಕ್ತರ ಮನೆಯಲ್ಲಿಯೇ ಮಲಗಿದ್ದರು. ಬೆಳಗ್ಗೆ 5 ಗಂಟೆಗೆ ಪೂಜೆಗೆಂದು ಏಳಿಸಿದಾಗ ಸ್ವಾಮೀಜಿ ನಿಧನರಾಗಿರುವ ಸುದ್ದಿ ತಿಳಿದು ಬಂದಿದೆ.
ಸ್ವಾಮೀಜಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿಗೆ ಬೇಬಿಬೆಟ್ಟದ ಕಿರಿಯ ಸ್ವಾಮೀಜಿ ಶ್ರೀ ಗುರುಸಿದ್ದೇಶ್ವರ ಸ್ವಾಮೀಜಿ ಆಗಮಿಸುತ್ತಿದ್ದು, ಮಠದಲ್ಲಿರುವ ಸ್ವಾಮೀಜಿ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಇಳಕಲ್ ನ ವಿಜಯ ಮಹಾಂತೇಶ ಪೀಠದ ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ (90) ಮೇ.19 ರಂದು ಲಿಂಗೈಕ್ಯರಾಗಿದ್ದರು. 'ಮಹಾಂತ ಜೋಳಿಗೆಯ ಹರಿಕಾರ' ಎಂದೇ ಖ್ಯಾತರಾಗಿದ್ದ ಮಹಾಂತ ಶ್ರೀ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿತ್ತರಗಿ, ಇಳಕಲ್ ವಿಜಯಮಹಾಂತೇಶ್ವರ ಮಠದ 19ನೇ ಪೀಠಾಧಿಪತಿಗಳಾಗಿದ್ದ ಸ್ವಾಮೀಜಿ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದರು. ಬಸವಶ್ರೀ ಸೇರಿ ಕೆಲವು ಪ್ರಶಸ್ತಿ ಪುರಸ್ಕೃತರಾಗಿದ್ದರು.
ಇವರ ಜನ್ಮದಿನವನ್ನು ರಾಜ್ಯ ಸರ್ಕಾರ ವ್ಯಸನಮುಕ್ತ ದಿನ ಎಂದು ಘೋಷಿಸಿತ್ತು. 48 ವರ್ಷಗಳಿಂದ ಮಠಾಧೀಶರಾಗಿದ್ದ ಅವರು ಜನರ ದುಶ್ಚಟಗಳನ್ನು ದೂರವಾಗಿಸಲು ಮಹಾಂತ ಜೋಳಿಗೆ ಎಂಬ ಚಿಂತನೆ ಜಾರಿಗೊಳಿಸಿದ್ದರು. ಸಾವಿರಾರು ಜನರು ಸ್ವಾಮೀಜಿಯವರಿಂದ ಪ್ರೇರಿತರಾಗಿ ದುಶ್ಚಟ ಬಿಟ್ಟಿದ್ದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications