ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯೋಗೇಶ್ವರ್‌ರಿಂದ ಗೋಲ್‌ಮಾಲ್ ರಾಜಕಾರಣ: ಎಚ್.ಡಿ.ಕುಮಾರಸ್ವಾಮಿ

By ಮಂಡ್ಯ ಪ್ರತಿನಿಧಿ
|
Google Oneindia Kannada News

ಮದ್ದೂರು, ನವೆಂಬರ್‌, 17: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ರೀತಿ ಗೋಲ್‌ಮಾಲ್ ರಾಜಕಾರಣ ಮಾಡುತ್ತಿಲ್ಲ. ನಾವು ಅನ್ನದಾತರ ಸಮಸ್ಯೆ ಪರ ಯಾವ ಹೋರಾಟಕ್ಕಾದರೂ ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಳವಳ್ಳಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಮಳವಳ್ಳಿ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಅವರು ಅಭಿನಂದನೆ ಸ್ವೀಕರಿಸಿದರು. ಬಳಿಕ ಅವರು, ಜೆಡಿಎಸ್‌ನವರು ಯಾವಾಗಲೂ ದಬ್ಬಾಳಿಕೆ, ಗೂಂಡಾಗಿರಿ, ರೌಡಿಸಂ ಮಾಡುತ್ತಾರೆಂಬ ಸಿ.ಪಿ. ಯೋಗೇಶ್ವರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. "ಜೆಡಿಎಸ್‌ನವರು ಈಗಿನಿಂದಲೇ ರೌಡಿಸಂ, ಗೂಂಡಾಗಿರಿ ಮಾಡಿಕೊಂಡು ರಾಜಕೀಯ ಮಾಡುತ್ತಿಲ್ಲ. ನಮ್ಮ ಹೋರಾಟ ಏನಿದ್ದರೂ ರೈತರ ಪರವಾಗಿದೆ. ಇಂತಹ ಸಂದರ್ಭದಲ್ಲಿ ಅವರ ರಕ್ಷಣೆಗೆ ರೌಡಿಸಂ, ಗೂಂಡಾಗಿರಿಗೂ ಸಿದ್ಧ," ಎಂದು ಸಿ.ಪಿ.ಯೋಗೇಶ್ವರ್‌ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ರಾಜಕೀಯ ಬಿಟ್ಟರೂ, ಮಂಡ್ಯವನ್ನು ಮಾತ್ರ ಬಿಡಲ್ಲ: ಸಂಸದೆ ಸುಮಲತಾರಾಜಕೀಯ ಬಿಟ್ಟರೂ, ಮಂಡ್ಯವನ್ನು ಮಾತ್ರ ಬಿಡಲ್ಲ: ಸಂಸದೆ ಸುಮಲತಾ

ಮಳವಳ್ಳಿ ತಾಲೂಕಿನಲ್ಲಿ ವಸತಿಹೀನರಿಗೆ ಸೂರು ಕಲ್ಪಿಸುವಂತೆ ನಾನು 2019ರಲ್ಲೇ ವಸತಿ ಸಚಿವರಿಗೆ ಪತ್ರ ಬರೆದು 3,200 ಮನೆಗಳನ್ನು ಮಂಜೂರು ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದೆ. ಆದರೆ ಕೊರೊನಾ ಕಾಲದಿಂದಾಗಿ ಅದು ವಿಳಂಬವಾಗಿತ್ತು. ಇದೀಗ ಸರ್ಕಾರ ಮನೆಗಳ ಮಂಜೂರಾತಿಗೆ ಆದೇಶ ನೀಡಿದೆ. ಅದನ್ನು ಸಿ.ಪಿ. ಯೋಗೇಶ್ವರ್ ಅವರು ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಬಿಜೆಪಿ ಸರ್ಕಾರದ ಪವರ್‌ಪುಲ್ ಮಂತ್ರಿ ಆಗಿದ್ದಾರೆ ಎಂದು ವ್ಯಂಗ್ಯವಾಡಿದರು.

Scam politics from C P Yogeshwar, HD Kumaraswamy said in Malavalli

ಸಿ.ಪಿ.ವೈ ವಿರುದ್ಧ ಎಚ್‌ಡಿಕೆ ಗರಂ ಆಗಿದ್ದೇಕೆ?

ಈ ಹಿಂದೆ ಪತ್ರ ಬರೆದ ವೇಳೆ ಸರ್ಕಾರ ಮನ್ನಣೆ ನೀಡಿರಲಿಲ್ಲ. ಆದರೆ ನನ್ನ ಪತ್ರಕ್ಕೆ ಮನ್ನಣೆ ನೀಡಿದೆ ಎಂದು ಸಿ.ಪಿ.ಯೋಗೇಶ್ವರ್ ಹೇಳಿಕೊಳ್ಳುತ್ತಿದ್ದಾರೆ. ಹೀಗಾಗಿ ಬಿಜೆಪಿ ಸರ್ಕಾರದ ಪವರ್ ಲೀಡರ್ ಆಗಿದ್ದಾರೆ ಎಂದು ಟೀಕಿಸಿದರು. ಪ್ರತೀ ಚುನಾವಣೆಯಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಟೂರಿಂಗ್ ಟಾಕೀಸ್ ಅಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಿಂದಲೇ ಸ್ಪರ್ಧೆ ಮಾಡುತ್ತೇನೆ. ಇನ್ನು ಮೈಸೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ವಶಪಡಿಸಿಕೊಂಡ ಭೂಮಾಲೀಕರಿಗೆ ಪರಿಹಾರ ವಿತರಿಸುವಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ಈ ಬಗ್ಗೆ ಎಲ್ಲಾ ದಾಖಲೆಗಳೂ ನನ್ನ ಬಳಿ ಇವೆ. ಚುನಾವಣೆ ನಂತರ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಅನಿವವಾರ್ಯ ಎಂದು ಎಚ್ಚರಿಕೆ ನೀಡಿದರು.

Scam politics from C P Yogeshwar, HD Kumaraswamy said in Malavalli

ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಉಪಾಧ್ಯಕ್ಷ ದೇವರಹಳ್ಳಿ ವೆಂಕಟೇಶ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಆರ್. ಪ್ರಸನ್ನಕುಮಾರ್, ಸದಸ್ಯ ಬಸವರಾಜು, ಹೊನ್ನಲಗೆರೆ ಗ್ರಾಮ ಪಂಚಾಯತಿ ಸದಸ್ಯ ಬ್ಯಾಡರಹಳ್ಳಿ ರಾಮಕೃಷ್ಣ, ಮುಖಂಡರಾದ ಶಿವಣ್ಣ, ಚನ್ನಸಂದ್ರ ಸ್ವರೂಪ, ಸಹಬಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

English summary
HD Kumaraswamy expressed outrage in Malavalli, Sacm politics by Legislative Council Member C P Yogeshwara, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X