ಮದ್ದೂರು ತಾಲೂಕಿನಲ್ಲಿ ಶಾಲಾ ಮುಖ್ಯೋಪಾಧ್ಯಾಯನ ಕೊಲೆ
ಶಶಿಭೂಷಣ ಅವರು ಬಿದರೆ ಹೊಸಹಳ್ಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಕೆಲಸ ಮಾಡುತ್ತಿದ್ದರು. ಮಂಡ್ಯದ ಗುತ್ತಲು ಬಡಾವಣೆಯಲ್ಲಿ ವಾಸವಾಗಿದ್ದರು.
ಮಂಡ್ಯ, ಮಾರ್ಚ್ 31: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅರೆಚಾಕನ ಹಳ್ಳಿಯ ಬಳಿ, ಶಶಿಭೂಷಣ (41) ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.
ಶಶಿಭೂಷಣ ಅವರು ಬಿದರೆ ಹೊಸಹಳ್ಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಕೆಲಸ ಮಾಡುತ್ತಿದ್ದರು. ಮಂಡ್ಯದ ಗುತ್ತಲು ಬಡಾವಣೆಯಲ್ಲಿ ವಾಸವಾಗಿದ್ದ ಅವರು, ಶುಕ್ರವಾರ ಎಂದಿನಂತೆ ಅವರು ತಮ್ಮ ಕರ್ತವ್ಯಕ್ಕಾಗಿ ಶಾಲೆಗೆ ತೆರಳುತ್ತಿದ್ದಾಗ ಅರೆಕಾಚನ ಹಳ್ಳಿ ಬಳಿ ಅವರನ್ನು ಅಡ್ಡಗಟ್ಟಿರುವ ದುಷ್ಕರ್ಮಿಗಳು ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಕೆ.ಎಂ. ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications